Asianet Suvarna News Asianet Suvarna News

ಚಿಕ್ಕಮಗಳೂರು: ಲೋಕಾಯುಕ್ತ ದಾಳಿ, ಲಂಚಕ್ಕೆ ಬೇಡಿಕೆ ಇಟ್ಟಿದ್ದ ಡಿಡಿಪಿಐ ಬಂಧನ

ಮೂಡಿಗೆರೆ ತಾಲೂಕಿನ ಹೆಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪು ನಗರ ವಾಸಿ ಅಬುಬೇಕರ್ ರವರ ಪುತ್ರ ನೀಡಿದ ದೂರನ್ನು ಆಧರಿಸಿ, ದಾಳಿ ನಡೆಸಿದ ಪೊಲೀಸರು ಉಪನಿರ್ದೇಶಕ ರಂಗನಾಥ ಸ್ವಾಮಿ ಮತ್ತು ದ್ವಿತೀಯ ದರ್ಜೆ ಸಹಾಯಕ ಅಸ್ರಾರ್ ಅಹಮದ್ ರನ್ನು ಬಂಧಿಸಿದ್ದಾರೆ. 

DDPI Arrested For Demand to Bribe in Chikkamagaluru grg
Author
First Published Nov 3, 2023, 11:30 PM IST

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು 

ಚಿಕ್ಕಮಗಳೂರು(ನ.03):  ಶೌಚಾಲಯ ನಿರ್ಮಾಣ ಕಾಮಗಾರಿಯ ಆಡಳಿತಾತ್ಮಕ ಮಂಜೂರಾತಿ ಕಡತಕ್ಕೆ ಸಹಿ ಹಾಕಲು ಲಂಚ  ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೂಡಿಗೆರೆ ತಾಲೂಕಿನ ಹೆಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪು ನಗರ ವಾಸಿ ಅಬುಬೇಕರ್ ರವರ ಪುತ್ರ ನೀಡಿದ ದೂರನ್ನು ಆಧರಿಸಿ, ದಾಳಿ ನಡೆಸಿದ ಪೊಲೀಸರು ಉಪನಿರ್ದೇಶಕ ರಂಗನಾಥ ಸ್ವಾಮಿ ಮತ್ತು ದ್ವಿತೀಯ ದರ್ಜೆ ಸಹಾಯಕ ಅಸ್ರಾರ್ ಅಹಮದ್ ರನ್ನು ಬಂಧಿಸಿದ್ದಾರೆ. 

ಭಾರತ ತಂತ್ರಜ್ಞಾನದಲ್ಲಿ ಮುಂದುವರಿಯಲು ರಾಜೀವ್‌ ಗಾಂಧಿ ಕಾರಣ: ಸಚಿವ ಜಾರ್ಜ್‌

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೊಲ್ಲಿಬೈಲು ಮತ್ತು ಕಡೆಮಡಕಲ್ಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4.80 ಲಕ್ಷ ರೂ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಿದ್ದು ಅದಕ್ಕೆ ಆಡಳಿತಾತ್ಮಕ ಅನುಮೋದನೆ ಅಗತ್ಯವಿತ್ತು. ಅನುಮೋದನೆ ನೀಡುವಂತೆ ಡಿಡಿಪಿಐ ರವರನ್ನು ಗುತ್ತಿಗೆದಾರರ ಮಗ ಭೇಟಿಯಾದಾಗ ಅವರು ದ್ವಿತೀಯ ಸಹಾಯಕ ಅಸ್ರಾರ್ ಅಹಮದ್ ಭೇಟಿಯಾಗಲು ತಿಳಿಸಿದ್ದರು ಎನ್ನಲಾಗಿದೆ. 

2% ರಂತೆ 10000 ರೂ ಗಳಿಗೆ  ಬೇಡಿಕೆ ಇಟ್ಟಿದ್ದು, ಅಂತಿಮವಾಗಿ 4000 ರೂ.ಗಳಿಗೆ ಒಪ್ಪಿಗೆಯಾಗಿ 1000 ಮುಂಗಡ ನೀಡಿ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಉಳಿಕೆ 3000 ರೂ ನೀಡುವ ಕುರಿತು ಡಿಡಿಪಿಐ ರವರೊಂದಿಗೆ ನಡೆಸಿದ ಸಂಭಾಷಣೆಯನ್ನು ಮುದ್ರಿಸಿಕೊಂಡು ಲೋಕಾಯುಕ್ತಕ್ಕೆ ನೀಡಲಾಗಿತ್ತು. 

ಇಂದು ಉಳಿಕೆ ಹಣ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ ರಂಗನಾಥ ಸ್ವಾಮಿ ಮತ್ತು ಅಸ್ರಾರ್ ಅಹಮದ್ ರವರನ್ನು ವಶಕ್ಕೆ ಪಡೆಯಲಾಗಿದೆ.ಈ ದಾಳಿಯಲ್ಲಿ ಇನ್ಸ್ಪೆಕ್ಟರ್ಗಳಾದ ಮಲ್ಲಿಕಾರ್ಜುನ್, ಅನಿಲ್ ರಾಥೋಡ್, ಸಿಬ್ಬಂದಿ ವೇದಾವತಿ, ವಿಜಯ ಭಾಸ್ಕರ್, ಸಲ್ಮಾ ಬೇಗಮ್, ಅನಿಲ್ ನಾಯಕ್, ಪ್ರಸಾದ್ ,ರವಿ, ಮುಜಬ್ ಪಾಲ್ಗೊಂಡಿದ್ದರು. 

Follow Us:
Download App:
  • android
  • ios