ಬೆಂಗಳೂರು(ಜು.10): ಬಸವೇಶ್ವರನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಕ್ರೀಡಾಂಗಣ ಬಳಿಯ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು, ಮೃತ ದೇಹ ಸಾಗಿಸಲು ಆ್ಯಂಬುಲೆನ್ಸ್‌ ತಡವಾಗಿ ಬಂದಿದ್ದಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಕ್ರೀಡಾಂಗಣದ ಪಕ್ಕದ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ವಾಕಿಂಗ್‌ ಬಂದವರಿಗೆ ಮೃತದೇಹ ಕಂಡಿದೆ. ಅದನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹದ ಮೇಲೆ ಕೆಂಪು ಬಟ್ಟೆಹೊದಿಸಿದ್ದರು.

ಭಾರತದ ನ್ಯೂಸ್‌ ಚಾನಲ್‌ಗಳಿಗೆ ನೇಪಾಳ ನಿಷೇಧ!

ಪೊಲೀಸರು ಹಾಗೂ ಸ್ಥಳೀಯರು ಎಷ್ಟೇ ಕರೆ ಮಾಡಿದರೂ ಯಾರೊಬ್ಬರೂ ಸರಿಯಾಗಿ ಸ್ಪಂದಿಸಿಲ್ಲ. ಸುಮಾರು 4 ಗಂಟೆಗಳಾದರೂ ಯಾವುದೇ ಆ್ಯಂಬುಲೆನ್ಸ್‌ ಬಂದಿಲ್ಲ. ಈ ಬಗ್ಗೆ ಸ್ಥಳೀಯರು ತಮ್ಮ ವ್ಯಾಪ್ತಿಯ ಜನಪ್ರತಿನಿಧಿಗಳು, ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿ ದೂರು ನೀಡಿದ್ದರು. ಮಧ್ಯಾಹ್ನದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.