Asianet Suvarna News Asianet Suvarna News

ಆಸ್ತಿ ತೆರಿಗೆ ಪಾವತಿಗೆ ಕಾಲಾವಧಿ ವಿಸ್ತರಣೆ

ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿಗದಿಪಡಿಸಿರುವ ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5ರ ರಿಯಾಯ್ತಿ ಕಾಲಾವಧಿಯನ್ನು ಜೂನ್‌ 31ರವರೆಗೂ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

Deadline extended to file income tax
Author
Bangalore, First Published May 30, 2020, 10:30 AM IST

ಮಂಗಳೂರು(ಮೇ 30): ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಿಗದಿಪಡಿಸಿರುವ ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5ರ ರಿಯಾಯ್ತಿ ಕಾಲಾವಧಿಯನ್ನು ಜೂನ್‌ 31ರವರೆಗೂ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಆಸ್ತಿ ತೆರಿಗೆ ಪಾವತಿ ಮೇಲಿನ ಶೇ.5ರ ರಿಯಾಯಿತಿ ಕಾಲಾವಧಿ ಏ.30ರವರೆಗೆ ಮಾತ್ರ ಲಭ್ಯವಿತ್ತು. ಆದರೆ, ಲಾಕ್‌ಡೌನ್‌ ಕಾರಣದಿಂದ ಇದನ್ನು ಮೇ 31ರವರೆಗೆ ವಿಸ್ತರಿಸಲಾಗಿತ್ತು.

ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಕರೆ ಮಾಡಲು ‘0’ ಡಯಲ್‌ ಕಡ್ಡಾಯ?

ಆದರೆ ಲಾಕ್‌ಡೌನ್‌ ವಿಸ್ತರಣೆಗೊಂಡಿರುವ ಹಿನ್ನೆಲೆಯಲ್ಲಿ ಈ ರಿಯಾಯಿತಿಯನ್ನು ಜು.31ರವರೆಗೂ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆಯು ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಿದೆ ಎಂದು ಮನಪಾ ಆಯುಕ್ತ ಶಾನಾಡಿ ಅಜಿತ್‌ ಕುಮಾರ್‌ ಹೆಗ್ಡೆ ತಿಳಿಸಿದ್ದಾರೆ.

ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿ ತೆರಿಗೆ ಪಾವತಿ ಮೇಲಿನ ಪಾವತಿ ವಿಳಂಬ ದಂಡವನ್ನು ಕೂಡ ಜು.1ರಿಂದ ಅನ್ವಯಿಸುವ ಬದಲಾಗಿ ನ.1ರಿಂದ ಅನ್ವಯಿಸಿ ವಿಧಿಸುವಂತೆ ಕ್ರಮ ವಹಿಸಲಾಗಿದೆ.

Follow Us:
Download App:
  • android
  • ios