Mekedatu project: ಫೆ.1ಕ್ಕೆ ಮೇಕೆದಾಟು ಯೋಜನೆಗಾಗಿ ದೆಹಲಿ ಚಲೋ
ಮೇಕೆದಾಟು ಕುಡಿಯುವ ನೀರು ಯೋಜನೆ ಶೀಘ್ರ ಅನುಷ್ಠಾನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಫೆ.1ರಂದು ನೂರಕ್ಕೂ ಹೆಚ್ಚು ಕನ್ನಡ ಸಂಘಟನೆಗಳಿಂದ ದೆಹಲಿ ಚಲೋ ಹಾಗೂ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೇಕೆದಾಟು ಹೋರಾಟಗಾರರ ಸಮಿತಿ ಅಧ್ಯಕ್ಷ ನೀಲೇಶ್‌ಗೌಡ ತಿಳಿಸಿದರು.
ರಾಮನಗರ (ಜ.29) : ಮೇಕೆದಾಟು ಕುಡಿಯುವ ನೀರು ಯೋಜನೆ ಶೀಘ್ರ ಅನುಷ್ಠಾನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಫೆ.1ರಂದು ನೂರಕ್ಕೂ ಹೆಚ್ಚು ಕನ್ನಡ ಸಂಘಟನೆಗಳಿಂದ ದೆಹಲಿ ಚಲೋ ಹಾಗೂ ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೇಕೆದಾಟು ಹೋರಾಟಗಾರರ ಸಮಿತಿ ಅಧ್ಯಕ್ಷ ನೀಲೇಶ್‌ಗೌಡ ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮೇಕೆದಾಟು ಯೋಜನೆಗಾಗಿ ಸಾಕಷ್ಟುಹೋರಾಟಗಳು ನಡೆದಿವೆ. ಇದೀಗ ಅಂತಿಮವಾಗಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ ಅದೇ ದಿನ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು. ನಮ್ಮ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಮೇಕೆದಾಟು ಯೋಜನೆ ನನೆಗುದಿಗೆ ಬಿದ್ದಿದೆ. ಬಿಜೆಪಿ ಪಕ್ಷದಿಂದ ರಾಜ್ಯದ 26 ಸಂಸದರು ಪ್ರತಿನಿಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ತರಲು ಆಗುತ್ತಿಲ್ಲ. ಇದು ನಮ್ಮ ರಾಜ್ಯದ ಹೀನಾಯ ಸ್ಥಿತಿಗೆ ಹಿಡಿದ ಕೈಗನ್ನಡಿ. ಇದೀಗ ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದು ಇಲ್ಲಿನ ಬಿಜೆಪಿ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು ಯೋಜನೆ ಜಾರಿಗೆ ಆಸಕ್ತಿ ತೋರಬೇಕು ಎಂದು ಒತ್ತಾಯಿಸಿದರು.
ಮೇಕೆದಾಟು ಸಂಬಂಧ ಸುಪ್ರಿಂ ಕೋರ್ಟ್‌ಗೆ ಕೂಡಲೇ ಅಫಿಡವಿಟ್ ಸಲ್ಲಿಸಿ
ಕರ್ನಾಟಕ ನವನಿರ್ಮಾಣ ವೇದಿಕೆ ಅಧ್ಯಕ್ಷ ವಿ.ನರಸಿಂಹಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಬೆಂಗಳೂರು ಮತ್ತು ಸುತ್ತಮುತ್ತಲಿನ ಜನರ ಕುಡಿಯುವ ನೀರಿಗೆ ಮೇಕೆದಾಟು ಯೋಜನೆ ಜಾರಿಗೊಳಿಸಬೇಕು. ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿಯದಿದ್ದರೆ, ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಕಪ್ಪುಬಟ್ಟೆಪ್ರದಶÜರ್‍ನ, ಕಪ್ಪು ಮಸಿ ಬಳಿಯುವುದು ಹಾಗೂ ಕರ್ನಾಟಕ ಬಂದ್ ಮಾಡುವ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತ ಮತ್ತು ಕಾರ್ಮಿಕ ಹೋರಾಟಗಾರ ಬೆಟ್ಟಸ್ವಾಮಿಗೌಡ ಮಾತನಾಡಿ, ಸಮುದ್ರಕ್ಕೆ ವ್ಯರ್ಥವಾಗಿ ಹರಿಯುವ ನೀರನ್ನು ಬೆಂಗಳೂರು ನಗರ ಸೇರಿದಂತೆ ಆರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಬೇಕು. ಹೋರಾಟಕ್ಕೆ ಪಕ್ಷಾತೀತ, ಜಾತ್ಯತೀತವಾಗಿ ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಮೇಕೆದಾಟು ಯೋಜನೆ: ತಮಿಳುನಾಡಿಗೆ ತೀವ್ರ ಹಿನ್ನಡೆ
ಕನ್ನಡ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಸಿ.ಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭೀಮಾನಿ ಸೇನೆ ಅಧ್ಯಕ್ಷ ನಿಂಗರಾಜಗೌಡ, ಚಂದ್ರಮೌಳೇಶ್ವರ ಟ್ರಸ್ವ್ ಅಧ್ಯಕ್ಷ ಗೋವಿಂದರಾಜು, ಕರ್ನಾಟಕ ವಿದ್ಯಾರ್ಥಿ ವೇದಿಕೆ ಅಧ್ಯಕ್ಷ ಎಸ್.ಶಿವಶಂಕರ್, ನಮ್ಮ ಕರ್ನಾಟಕ ಕಟ್ಟಡ ಕಾರ್ಮಿಕ ಸೇವಾ ಸಂಘದ ರಾಜ್ಯಾಧ್ಯಕ್ಷ ನಾಗಮಂಗಲ ಕುಮಾರ್, ಕರುನಾಡ ಕಾರ್ಮಿಕ ಸೇನೆ ರಾಜ್ಯಾಧ್ಯಕ್ಷ ಚೇತನ್ ಕನ್ನಡಿಗ, ರಾಜ್ಯ ಕಾರ್ಮಿಕ ಪರಿಷತ್ ಅಧ್ಯಕ್ಷ ನಾರಾಯಣ್ ಇತರರಿದ್ದರು.