ಹಾಸ್ಟೆಲ್‌ಗೆ ಅಕ್ಕಿ ವಿತರಿಸಲು ವಿಳಂಬಹಿಂ.ವರ್ಗಗಳ ಅಧಿಕಾರಿ ಅಮಾನತು
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆಯಾದರೂ ಹಾಸ್ಟೆಲ್‌ಗಳಿಗೆ ಅಕ್ಕಿಯನ್ನು ನೀಡಲು ವಿಳಂಬ ಮಾಡಿರುವ ಆರೋಪದಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ರನ್ನು ಅಮಾನತು ಮಾಡಲಾಗಿದೆ.
ತುಮಕೂರು: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆಯಾದರೂ ಹಾಸ್ಟೆಲ್‌ಗಳಿಗೆ ಅಕ್ಕಿಯನ್ನು ನೀಡಲು ವಿಳಂಬ ಮಾಡಿರುವ ಆರೋಪದಡಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ರನ್ನು ಅಮಾನತು ಮಾಡಲಾಗಿದೆ.
ಸಿದ್ಧಗಂಗಾ ಮಠದಿಂದ ಬಿಸಿಎಂ ಹಾಸ್ಟೆಲ್ ಗಳಿಗೆ ಅಕ್ಕಿ ಸಾಲ ಪಡೆದಿದ್ದರು ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಸರಬರಾಜಾಗಿದ್ದರೂ ವಿತರಿಸದ ಆರೋಪದಡಿ ಇವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ. ದಯಾನಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಡಿಸೆಂಬರ್‌ನಲ್ಲಿ ಪೂರೈಕೆಯಾಗಬೇಕಿದ್ದ ಅಕ್ಕಿ ಜನವರಿಗೆ ಬಂದ ಹಿನ್ನೆಲೆಯಲ್ಲಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯಿಂದ ಸಿದ್ಧಗಂಗಾ ಮಠದಿಂದ ಅಕ್ಕಿ ಪಡೆಯಲಾಗಿತ್ತು ಎಂದು ಹೇಳಲಾಗಿದೆ.
ಆದರೆ, ಹಿಂದುಳಿದ ವರ್ಗಗಳ ಇಲಾಖೆಯ ಕೆಲ ಅಧಿಕಾರಿಗಳ ಪ್ರಕಾರ ಸಿದ್ಧಗಂಗಾ ಮಠದ ಅನಾಥಾಲಯಕ್ಕೆ ತಾಲೂಕು ಹಿಂದುಳಿದ ವರ್ಗಗಳ ಇಲಾಖೆಯಿಂದಲೇ ಅಕ್ಕಿ ಹೋಗುತ್ತಿದ್ದು, ಹಾಸ್ಟೆಲ್‌ಗಳಿಗೆ ಅಕ್ಕಿ ಪೂರೈಕೆ ವಿಳಂಬವಾದ ಕಾರಣ ಮಠದಿಂದ ಅಕ್ಕಿ ಪಡೆದು ವಿತರಿಸಲಾಗಿತ್ತು. ಆದರೆ ಈ ಪ್ರಕರಣದಲ್ಲಿ ಜನವರಿಯಲ್ಲಿ ಅಕ್ಕಿ ಬಂದಿದ್ದರೂ ಅದನ್ನು ವಿಲೇವಾರಿ ಮಾಡುವಲ್ಲಿ ವಿಳಂಬವಾಗಿದೆ ಎನ್ನಲಾಗಿದೆ.
ಅಕ್ಕಿ ದೋಖಾ, ಅಂಗಡಿ ಬಂದ್
ವಿಧಾನ ಪರಿಷತ್ತು(ಫೆ.22): ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದ ಆಹಾರ ಧಾನ್ಯ ವಿತರಿಸುತ್ತಿದ್ದ ರಾಯಚೂರು ಜಿಲ್ಲೆಯ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ಅಮಾನತುಗೊಳಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಸದಸ್ಯ ಶರಣಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪಡಿತರದಾರರಿಗೆ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ಅಕ್ಕಿ ವಿತರಿಸಿದ 10 ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ. ರಾಜ್ಯದ ಯಾವುದೇ ಕಡೆಗಳಲ್ಲಿ ಇಂತಹ ಪ್ರಕರಣಗಳು ದಾಖಲಾದರೆ, ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ದೇವದುರ್ಗ: ಕುಲ್ಲಕ ಕಾರಣಕ್ಕೆ ಜಗಳ, ಮನನೊಂದ ಮಹಿಳೆ ಆತ್ಮಹತ್ಯೆ
ಲಿಂಗಸಗೂರು ಪಟ್ಟಣದ ಗೋದಾಮಿನಲ್ಲಿ 50 ಕೆ.ಜಿ. ಚೀಲದಲ್ಲಿ 3ರಿಂದ 5 ಕೆ.ಜಿ. ಅಕ್ಕಿ ಕಡಿತಗೊಳಿಸಲಾಗಿದ್ದು ವ್ಯವಸ್ಥಾಪಕರು ಹಾಗೂ ಆಹಾರ ನಿರೀಕ್ಷಕರು 4 ಚೀಲ ಕಡಿತಗೊಳಿಸಿದ್ದಾರೆ ಎನ್ನುವ ಕುರಿತು ಬಂದಿರುವ ದೂರಿನಲ್ಲಿ ಸೂಕ್ತ ದಾಖಲೆಗಳು ಇಲ್ಲ. ಅಲ್ಲದೇ ಸಗಟು ಮಳಿಗೆಯಲ್ಲಿನ ದಾಸ್ತಾನಿನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಾಗೆಯೇ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಯಾವುದೇ ರೀತಿಯ ಅಕ್ಕಿಯನ್ನು ಕಡಿತಗೊಳಿಸಿಲ್ಲ ಎಂದು ತಿಳಿಸಿದರು.