Chikkamagaluru: ಮಾಸಿಕ ಪೆನ್ಷನ್ ಜಾರಿಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ-ಮಾಸಿಕ ಪೆನ್ಷನ್ ಜಾರಿಗೊಳಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನಿಂದ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. 

Demand for implementation of monthly pension Protest by Anganawadi workers helpers federation at chikkamagaluru gvd

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಜ.30): ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಗ್ರಾಚ್ಯುಟಿ-ಮಾಸಿಕ ಪೆನ್ಷನ್ ಜಾರಿಗೊಳಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ನಿಂದ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. 

ನಗರದ ಆಜಾದ್ ವೃತ್ತದಲ್ಲಿ ಇಂದು ನೂರಾರು ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಸಮಗ್ರ ಶಿಶು ಅಭಿವೃದ್ದಿ ಯೋಜನೆಯಡಿಯಲ್ಲಿ ಕಳೆದ 48 ವರ್ಷಗಳಲ್ಲಿ 20 ರಿಂದ 30 ವರ್ಷಗಳ ಕಾಲ ನಿರಂತರವಾಗಿ ದುಡಿದು ನಿವೃತ್ತರಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದು ವೃದ್ದಾಪ್ಯದಲ್ಲಿ ಜಿಗುಪ್ಸೆಯಿಂದ ಜೀವನ ನಡೆಸುತ್ತಿದ್ದಾರೆ ಎಂದರು.

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಆಸ್ಪತ್ರೆಯಲ್ಲಿ ಬಂಜೆತನ ಅಲ್ಟ್ರಾಸೌಂಡ್ ಕಾರ್ಯಾಗಾರ

ಸರ್ಕಾರದಿಂದ ನಿರ್ಲಕ್ಷ್ಯದ ಆರೋಪ: ಕೇವಲ ಕನಿಷ್ಟ ಗೌರವ ಧನದ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಸಮಗ್ರ ಶಿಶು ಅಭಿವೃದ್ದಿ ಯೋಜನೆ ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಆರು ವರ್ಷ ವಯೋಮಾನದೊಳಗಿನ ಶಾಲಾ ಪೂರ್ವ ಶಿಕ್ಷಣದ ಜವಾಬ್ದಾರಿ ನಿರ್ವಹಿಸುವ ಮೂಲಕ ಸಾಮಾಜಿಕ ಅಭಿವೃದ್ದಿಯ ರೂವಾರಿಗಳಾಗಿದ್ದಾರೆ. 

ಇಂತಹ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಉದ್ಯೋಗಿಗಳಿಗೆ ಸರ್ಕಾರಗಳು ಅವರ ಕ್ಷೇಮಾಭಿವೃದ್ದಿಯ ಬಗ್ಗೆ ಯಾವುದೆ ಕಾಳಜಿ ತೋರದೆ ನಿರ್ಲ್ಯಕ್ಷಿಸಿಕೊಂಡು ಬರಲಾಗಿದೆ ಎಂದರು. ಸರ್ಕಾರ ನಿವೃತ್ತಿ ಜೀವನ ನಿರ್ವಹಣರೆಗಾಗಿ ಅಗತ್ಯವಿರುವ ಪಿಂಚಣಿ-ಆರೋಗ್ಯದಂತಹ ಸಾಮಾಜಿಕ ಸುರಕ್ಷ ಯೋಜನೆಗಳನ್ನು ಜಾರಿ ಗೊಳಿಸಲು ಆಸಕ್ತಿ ವಹಿಸಿಲ್ಲದ ಪರಿಣಾಮ ನಿವೃತ್ತಿಯಾಗಿರುವ ಸಾವಿರಾರು ಕಾರ್ಯಕರ್ತೆ-ಸಹಾಯಕಿಯರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ದೂರಿದರು.

Chitradurga: ಬಾಯಿ ಸುಡುತ್ತಿದೆ ವೀಳ್ಯದೆಲೆ: ಬೆಲೆ ಕಂಡು ಶಾಕ್ ಆದ ಗ್ರಾಹಕರು!

ಕಾರ್ಯಕರ್ತೆ-ಸಹಾಯಕಿಯರ ನರಕಯಾತನೆ: ಜಿಲ್ಲಾ ಕಾರ್ಯದರ್ಶಿ ಪುಷ್ಪ ಮಾತನಾಡಿ, ವಯೋ ಸಹಜ ಖಾಯಿಲೆಗಳಿಂದ ಬಳಲುತ್ತಿರುವ ನಿವೃತ್ತರು ಬಿಪಿ, ಶುಗರ್‌ನಂತಹ ಖಾಯಿಲೆಗಳಿಗೆ ಔಷದೋಪಚಾರಕ್ಕೂ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ನಿವೃತ್ತ ಅಂಗನವಾಡಿ ಉದ್ಯೋಗಿಗಳಿಗೆ ಸರ್ಕಾರ ಕನಿಷ್ಟ 5 ಸಾವಿರ ರೂ ಮಾಸಿಕ ಪಿಂಚಣಿ ನೀಡುವ ಯೋಜನೆ ಜಾರಿಗೊಳಿಸಬೇಕು. ಗ್ರಾಚ್ಯುಟಿ ಪಡೆಯಲು ಅಂಗನವಾಡಿ ಉದ್ಯೋಗಿಗಳು ಅರ್ಹರೆಂದು ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನಂತೆ ರಾಜ್ಯದಲ್ಲಿಯೂ ಗ್ರಾಚ್ಯುಟಿ ಸೌಲಭ್ಯವನ್ನು ಶಾಸನಾತ್ಮಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Latest Videos
Follow Us:
Download App:
  • android
  • ios