ಮಡಿಕೇರಿ: ಮಾತೃ ಇಲಾಖೆ ಹುದ್ದೆಗಳ ನೇಮಕಾತಿ: ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಮೀಸಲಾತಿಗೆ ಆಗ್ರಹ
ತಮ್ಮ ಮಾತೃ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವಾಗ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿ ಕೊಡಗಿನಲ್ಲಿ ಅರಣ್ಯ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ 9 ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಕೂಡ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ವಿದ್ಯಾರ್ಥಿಗಳು ವಿನೂತನ ಪ್ರತಿಭಟನೆ ನಡೆಸಿದರು.

ವರದಿ : ರವಿ.ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಫೆ.16) : ತಮ್ಮ ಮಾತೃ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವಾಗ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿ ಕೊಡಗಿನಲ್ಲಿ ಅರಣ್ಯ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ 9 ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಕೂಡ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ವಿದ್ಯಾರ್ಥಿಗಳು ವಿನೂತನ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಡಿಕೇರಿಯ ಹಳೇ ಖಾಸಗಿ ಬಸ್ಸು ನಿಲ್ದಾಣದಿಂದ ಪ್ರತಿಭಟನೆ ಆರಂಭಿಸಿದ ವಿದ್ಯಾರ್ಥಿಗಳು ಕೋಟೆ ಮಾರ್ಗವಾಗಿ ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು.
ದಿಲ್ಲಿ ಚಲೋಗೆ ಹೊರಟ ಹುಬ್ಬಳ್ಳಿ ರೈತರ ಬಂಧನ; ಮೋದಿಯ ಕ್ರಿಮಿನಲ್ ಮೈಂಡ್ ಕಾರಣವೆಂದ ಸಿಎಂ ಸಿದ್ದರಾಮಯ್ಯ
ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಕೆಲವು ಸಮಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿ ಮುಖಂಡ ಸುಹಾಸ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಸಂದರ್ಭ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾ ಅರ್ಹತೆಯನ್ನಾಗಿಸಿಬೇಕು ಎಂದು ಒತ್ತಾಯಿಸಿದರು.
2003 ರಲ್ಲಿ ಕರ್ನಾಟಕ ಸರ್ಕಾರವು ಅರಣ್ಯ ಶಾಸ್ತ್ರ ಪದವೀಧರರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಹುದ್ದೆಗಳ ನೇರ ನೇಮಕಾತಿಯಲ್ಇ ಶೇ 50% ರಷ್ಟು ಮೀಸಲಾತಿಯನ್ನು ನೀಡಿತ್ತು. ಆದರೆ ಈಗ ಅದನ್ನು ಕೇವಲ ಶೇ 25 ಕ್ಕೆ ಇಳಿಸಿ ಅನ್ಯಾಯ ಮಾಡಲಾಗಿದೆ ಎಂದರು.
ನಾವು ಅರಣ್ಯ ಶಾಸ್ತ್ರ ಕಲಿಯಲು ಬರುವುದಕ್ಕೆ ಸಿಇಟಿ ನಡೆಸಿ ಹೆಚ್ಚಿನ ಅಂಕಗಳನ್ನು ಪಡೆದು ಬರುವ ವಿದ್ಯಾರ್ಥಗಳಿಗೆ ಮಾತ್ರವೇ ಸೀಟು ಕೊಡಲಾಗುತ್ತದೆ. ಆದರೆ ಹುದ್ದೆ ಮಾತ್ರ ನೀಡುತ್ತಿಲ್ಲ. ಅರಣ್ಯಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆ ಎಂದು ನಿಗಧಿ ಮಾಡದಿದ್ದ ಮೇಲೆ ಈ ಪದವಿಯನ್ನು ನೀಡುವುದು ಏಕೆ. ಕಾಲೇಜುಗಳನ್ನು ಮುಚ್ಚಿ ಎಂದು ವಿದ್ಯಾರ್ಥಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಇಲ್ಲದಿದ್ದರೆ ನಾವು ಮತ್ತಷ್ಟು ತೀವ್ರತರವಾದ ಪ್ರತಿಭಟನೆಯನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಇದು ಒಂದೆಡೆಯಾದರೆ ಕಾರ್ಮಿಕ ಸಂಘಟನೆಗಳ ಒಕ್ಕೂಟದಿಂದ ಜಿಲ್ಲೆ ಎಲ್ಲಾ ತಾಲ್ಲೂಕು ಕಚೇರಿಗಳ ಎದುರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ಕೊಡಗು ಬೈಕ್ ಗುದ್ದಿ ಯುವಕ ಸಾವು; ಈ ಅಪಘಾತಕ್ಕೆ ನಾನೇ ಕಾರಣವೆಂದು ಬೈಕ್ ಸವಾರ ಆತ್ಮಹತ್ಯೆ!
ನರೇಗಾ ಯೋಜನೆಯನ್ನು 200 ದಿನಗಳಿಗೆ ಹೆಚ್ಚಿನ 600 ರೂಪಾಯಿ ಕೂಲಿ ನಿಗದಿ ಮಾಡುವುದು, ರಾಜ್ಯದ ಜಿಎಸ್ಟಿ ಪಾಲನ್ನು ರಾಜ್ಯಕ್ಕೆ ನೀಡುವುದು, ಅಕುಶಲ ಕಾರ್ಮಿಕರಿಗೆ ಕನಿಷ್ಠ 31 ಸಾವಿರ ಕನಿಷ್ಠ ವೇತನ ನೀಡುವುದು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜೆಸಿಟಿಯು ಕಾರ್ಯಕರ್ತರು ಮಡಿಕೇರಿ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಜನರಲ್ಲಿ ಕೋಮು ಭಾವನೆಗಳನ್ನು ಪ್ರಚೋದನೆಗೊಳಿಸಿ ಧಾರ್ಮಿಕವಾಗಿ ಕಿತ್ತಾಡುವಂತ ಪರಿಸ್ಥಿತಿಯನ್ನು ತರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಮ್ಮ ಮನವಿಯನ್ನು ತಹಶೀಲ್ದಾರ್ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಿದರು.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಾನೂ ಟಿಕೆಟ್ ಆಕಾಂಕ್ಷಿ: ಎಚ್.ವಿಶ್ವನಾಥ್