ವಿವಿಧ ಕಾರಣಗಳಿಗಾಗಿ ಕೃಷಿಯಲ್ಲಿ ಡ್ರೋನ್ ಬಳಕೆ ಹೆಚ್ಚುತ್ತಿದ್ದು, ಅಡಕೆಗೆ ಔಷಧ ಸಿಂಪರಣಗೊ ಬಳಸಬಹುದಾಗಿದೆ. ಈ ಆಧುನಿಕ ತಂತ್ರಜ್ಞಾನದ ಬಗ್ಗೆ ರೈತರಿಗೆ ಅಗತ್ಯ ಮಾಹಿತಿ ನೀಡಲು ಪ್ರಾತ್ಯಕ್ಷಿಕೆಯನ್ನು ಆಯೋಜಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ತೀರ್ಥಹಳ್ಳಿ: ಔಷಧಿ ಹೊಡೆಯಲು, ಕೀಟಗಳನ್ನು ನಾಶ ಮಾಡಲು..ಹೀಗೆ ವಿಧ ವಿಧವಾಗಿ ಕೃಷಿಯಲ್ಲಿ ಡ್ರೋನ್ ಬಳಸಲಾಗುತ್ತಿದೆ. ಇದರ ಬಗ್ಗೆ ಕೃಷಿಕರಲ್ಲಿ ಅರಿವು ಮೂಡಿಸಲು ಇಲ್ಲಿನ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರ ಅಡಿಕೆ ಸಿಂಪರಣೆಯಲ್ಲಿ ಡ್ರೋನ್ ಬಳಕೆಯ ಪ್ರಾತ್ಯಕ್ಷಿಕೆಯನ್ನು ಹಮ್ಮಿಕೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಗಸ್ಟ್ 8, ಬುಧವಾರ ಈ ಪ್ರಾತ್ಯಕ್ಷಿಕೆಯು ಇಲ್ಲಿನ ಕೃಷಿ ಮತ್ತು ಸಂಶೋಧನಾ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ತೀರ್ಥಹಳ್ಳಿ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಮತ್ತು ಶಿವಮೊಗ್ಗ ಅಡಿಕೆ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಕಾರ್ಯಕ್ರಮದ ಸದುಪಡಯೋಗ ಪಡೆದುಕೊಳ್ಳಬೇಕೆಂದು ಸಂಘಟಕರು ಕೋರಿದ್ದಾರೆ.