ಮುಂದಿನ ವಾರ ಭಾರೀ ಮಳೆ ಸಾಧ್ಯತೆ: ರೆಡ್ ಅಲರ್ಟ್ ಘೋಷಣೆ
ಗುರುವಾರ ಮುಂಜಾನೆವರೆಗೆ 24 ಗಂಟೆಗಳಲ್ಲಿ ಕೇವಲ 9 ಮಿ.ಮೀ. ಮಳೆ| ಶುಕ್ರವಾರ ಮುಂಜಾನೆ 24 ಗಂಟೆಗಳಲ್ಲಿ 75 ಮಿ.ಮೀ. ಮಳೆ| ಮುಂದಿನ ವಾರ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ| ಹವಾಮಾನ ಇಲಾಖೆ ಮುನ್ಸೂಚನೆ|
ಉಡುಪಿ(ಸೆ.19): ಜಿಲ್ಲೆಯಲ್ಲಿ ಗುರುವಾರ ಹಗಲು ಹಿಮ್ಮುಖವಾಗಿದ್ದ ಮಳೆ, ಶುಕ್ರವಾರ ಮತ್ತೆ ಕಾಣಿಸಿಕೊಂಡಿದೆ. ಗುರುವಾರ ರಾತ್ರಿ ಇಡೀ ಮಳೆ ಸುರಿದಿದೆ. ಶುಕ್ರವಾರವೂ ಹಗಲಿನಲ್ಲಿ ಬಿಟ್ಟುಬಿಟ್ಟು ಮಳೆಯಾಗಿದೆ.
ಗುರುವಾರ ಮುಂಜಾನೆವರೆಗೆ 24 ಗಂಟೆಗಳಲ್ಲಿ ಕೇವಲ 9 ಮಿ.ಮೀ. ಮಳೆಯಾಗಿತ್ತು. ಆದರೆ ಶುಕ್ರವಾರ ಮುಂಜಾನೆ 24 ಗಂಟೆಗಳಲ್ಲಿ 75 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ 67 ಮಿ.ಮೀ., ಕುಂದಾಪುರ ತಾಲೂಕಿನಲ್ಲಿ 92 ಮಿ.ಮೀ. ಮತ್ತು ಕಾರ್ಕಳ ತಾಲೂಕಿನಲ್ಲಿ 65 ಮಿ.ಮೀ. ಮಳೆಯಾಗಿದೆ.
ಭಾರೀ ಮಳೆ: ಕಲ್ಯಾಣ ಕರ್ನಾಟಕದಲ್ಲಿ ಪ್ರವಾಹ, 500ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಮುಂದಿನ ವಾರ ಭಾರೀ ಮಳೆ: ಮುಂದಿನ ವಾರ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಸಾಧಾರಣೆ ಮಳೆಯ ಯೆಲ್ಲೋ, ನಾಳೆ ಉತ್ತಮ ಮಳೆಯದ ಆರೆಂಜ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ನೀಡಿದೆ.