ಹಿಂದೂ ಕಾರ್ಯಕರ್ತರ ಚರ್ಮ ಸುಲಿದ ಪೊಲೀಸರಿಗೆ ಶಿಕ್ಷೆ ಗ್ಯಾರಂಟಿ: ಇಲಾಖಾ ತನಿಖೆಗೆ ಆದೇಶ
ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಲಾಖಾ ತನಿಖೆಗೆ ಎಸ್‌ಪಿ ವಿಕ್ರಂ ಅಮಾಟೆ ಆದೇಶ ಹೊರಡಿಸಿದ್ದಾರೆ.
ಮಂಗಳೂರು (ಮೇ 17): ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿ.ವಿ. ಸದಾನಂದಗೌಡರ ಶ್ರದ್ಧಾಂಜಲಿ ಬ್ಯಾನರ್ ಹಾಕಿದ್ದ ಹಿಂದೂ ಕಾರ್ಯಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಜಿಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಇಲಾಖಾ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಹಿಂದುತ್ವದ ತಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಹಿಂದು ಕಾರ್ಯಕರ್ತರು ಪುತ್ತೂರಿನ ಕೆಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿ.ವಿ. ಸದಾನಂದಗೌಡ ಅವರ ಶ್ರದ್ಧಾಂಜಲಿ ಬ್ಯಾನರ್ ಹಾಕಿ ಅದಕ್ಕೆ ಚಪ್ಪಲಿ ಹಾರವನ್ನು ಹಾಕಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಬಿಜೆಪಿ ಜಿಲ್ಲಾ ಘಟಕದ ಮುಖಂಡರಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಈ ಪ್ರಕರಣದಡಿ 7 ಜನ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದ ಪೊಲೀಸರು ಚರ್ಮ ಸುಲಿಯುವಂತೆ ಹಲ್ಲೆ ಮಾಡಿದ್ದರು.
ಬಿಜೆಪಿ ನಾಯಕರ ಶ್ರದ್ಧಾಂಜಲಿ ಬ್ಯಾನರ್ ಹಾಕಿದವರ, ಚರ್ಮ ಸುಲಿದ ಪೊಲೀಸರು!
ಅರುಣ್ ಪುತ್ತಿಲ ಜಾಮೀನು: ಇನ್ನು ಹಿಂದೂ ಕಾರ್ಯಕರ್ತ ಹಾಗೂ ಪಕ್ಷೇತರವಾಗಿ ಸ್ಪರ್ಧಿಸಿ ಸೋಲನ್ನಪ್ಪಿದ ಅರುಣ್ ಪುತ್ತಿಲ ಅವರು 7 ಜನ ಹಿಂದೂ ಕಾರ್ಯಕರ್ತರಿಗೆ ಜಾಮೀನು ನೀಡಿ ಅವರನ್ನು ಜೈಲಿನಿಂದ ಹೊರಗೆ ಕರೆತಂದಿದ್ದಾರೆ. ಜೈಲಿನಿಮದ ಹಿರಬಂದ ಕಾರ್ಯಕರ್ತರ ಮೇಲೆ ಪೊಲೀಸರು ತೀವ್ರ ಹಲ್ಲೆ ಮಾಡಿದ್ದು, ಮೈ ಮೇಲಿನ ಚರ್ಮ ಕಿತ್ತುಬಂದಿತ್ತು. ತೀವ್ರ ನೋವಿನಿಂದ ಕುಳಿತುಕೊಳ್ಳಲು ಹಾಗೂ ನಡೆಯಲು ಸಾಧ್ಯವಾಗದೇ ತೀವ್ರ ಗಾಯದಿಂದ ಬಳಲುತ್ತಿದ್ದರು. ಪೊಲೀಸರು ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್ ನಿಡಿದ್ದರ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಕುರಿತು ಜಿಲ್ಲೆಯಾದ್ಯಂತ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಅವರು ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದ್ದಾರೆ.
ಎಸ್‌ಪಿ ಧರ್ಮಪ್ಪ ನೇತೃತ್ವದಲ್ಲಿ ತನಿಖೆ: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಅವರು, ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ್ದಾರೆ. ಜೊತೆಗೆ, ಪುತ್ತೂರು ವಿಭಾಗದ ಎಎಸ್ಪಿ ಧರ್ಮಪ್ಪ ನೇತೃತ್ವದಲ್ಲಿ ಇಲಾಖಾ ತನಿಖೆಗೆ ಆದೇಶಿದ್ದಾರೆ. ಪುತ್ತೂರು ಡಿವೈಎಸ್‌ಪಿ ಕಚೇರಿಯಲ್ಲಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಮಾಡಲಾಗಿದೆ. ಹೀಗಾಗಿ ಠಾಣೆ ಮತ್ತು ಡಿವೈಎಸ್ಪಿ ಕಚೇರಿ ಸಿಸಿಟಿವಿ ಪರಿಶೀಲನೆಗೆ ಸೂಚನೆ ನೀಡಿದ್ದಾರೆ. ಹಿಂದೂ ಕಾರ್ಯಕರ್ತರ ಬೆನ್ನು, ಸೊಂಟ ಹಾಗೂ ಕುಳಿತುಕೊಳ್ಳು ಆಗದಂತೆ ಹಿಂಭಾಗಕ್ಕೆ ಪೊಲೀಸರು ಬಾಸುಂಡೆ ಬರುವ ರೀತಿ ಥಳಿಸಿದ್ದಾರೆ.
ಪುತ್ತೂರಿನಲ್ಲಿ ನಳಿನ್-ಡಿವಿಎಸ್‌ಗೆ ಶ್ರದ್ಧಾಂಜಲಿ ಬ್ಯಾನರ್: ಚಪ್ಪಲಿ ಹಾರ ಹಾಕಿ ಆಕ್ರೋಶ!
ಪೊಲೀಸರ ಚಿತ್ರಹಿಂಹೆ ಖಂಡಿಸುತ್ತೇನೆಂದ ಕಟೀಲ್: ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.