ಬಾಗಲಕೋಟೆ: (ಸೆ. 17) ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿದೆ.

ಕಾರಜೋಳ ಅವರಿಗೆ ಬಾಗಲಕೋಟೆ ಜೊತೆಗೆ ಹೆಚ್ಚುವರಿಯಾಗಿ ಕಲಬುರಗಿ ಜಿಲ್ಲಾ ಪ್ರಭಾರರನ್ನು ವಹಿಸಲಾಗಿದೆ.

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬರೋಬ್ಬರಿ 53  ದಿನಗಳ ಬಳಿಕ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಿದ್ದಾರೆ.