ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್| ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸೋಮಶೇಖರ್ ಸೊಗಲದ ವಿರುದ್ಧ ದೂರು ದಾಖಲು| ಈ ಬಗ್ಗೆ ಪ್ರತ್ಯೇಕ ದೂರು ನೀಡಿದ ಕಾಂಗ್ರೆಸ್‌ನ ಮಾಜಿ ಶಾಸಕ ಅಶೋಕ ಪಟ್ಟಣ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕುರುಬರ ಸಮಾಜದ ಮುಖಂಡರು|
ರಾಮದುರ್ಗ(ಮೇ.17): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ವಿಡಿಯೋ ವೈರಲ್ ಮಾಡಿರುವ ಆರೋಪದ ಮೇಲೆ ಹಿಂದುತ್ವವಾದಿ ಎನ್ನಲಾದ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸೋಮಶೇಖರ್ ಸೊಗಲದ ವಿರುದ್ಧ ರಾಮದುರ್ಗ ಪಟ್ಣಣ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿವೆ.
ಕೊರೋನಾ ಭೀತಿ: ಬೆಳಗಾವಿಗೆ ಕಂಟಕವಾಗುತ್ತಾ ಮುಂಬೈನ ಧಾರಾವಿ ಸ್ಲಂ ನಂಟು?
ಕಾಂಗ್ರೆಸ್‌ನ ಮಾಜಿ ಶಾಸಕ ಅಶೋಕ ಪಟ್ಟಣ, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕುರುಬರ ಸಮಾಜದ ಮುಖಂಡರು ಪ್ರತ್ಯೇಕ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಭೂಮಿಗೆ ಭಾರ, ಸಾಯಲಿ ಎಂದು ಸೋಮಶೇಖರ ಸೊಗಲದ ಜರಿದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
