ಬಿಜೆಪಿ ಪಕ್ಷವನ್ನು ಸಂಘಟಿಸಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಸಂಕಲ್ಪ ಮಾಡಿದ್ದೇವೆ ಎಂದು ಶ್ರೀರಂಗಪಟ್ಟಣ ವಿಧಾಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಚ್ಚಿದಾನಂದ ಇಂಡವಾಳು ಹೇಳಿದರು.

 ಮಂಡ್ಯ (ಡಿ.03): ಬಿಜೆಪಿ ಪಕ್ಷವನ್ನು ಸಂಘಟಿಸಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಸಂಕಲ್ಪ ಮಾಡಿದ್ದೇವೆ ಎಂದು ಶ್ರೀರಂಗಪಟ್ಟಣ ವಿಧಾಸಭಾ ಕ್ಷೇತ್ರದ ಬಿಜೆಪಿ ಮುಖಂಡ ಸಚ್ಚಿದಾನಂದ ಇಂಡವಾಳು ಹೇಳಿದರು.

ನೂತನವಾಗಿ ಬಿಜೆಪಿ (bjp) ಸೇರ್ಪಡೆಗೊಂಡ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡ ಎಸ್‌.ಸಚ್ಚಿದಾನಂದ ಅವರು ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದ ವೇಳೆ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್‌ ಮತ್ತು ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧನಾಗಿ ಬಿಜೆಪಿ ಸರ್ಪಡೆಯಾಗಿದ್ದೇನೆ, ಹಿರಿಯ ಸಚಿವರ ಮಾರ್ಗದರ್ಶನದಲ್ಲಿ ತಾಲೂಕು ಘಟಕಗಳ ವಿಶ್ವಾಸದ ಮೇರೆಗೆ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟುತ್ತೇವೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ (election) ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳ ಪೈಕಿ ಕನಿಷ್ಠ 4ರಿಂದ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಶಾಸಕರನ್ನಾಗಿ ಆಯ್ಕೆ ಮಾಡಲು ಶ್ರಮಿಸಬೇಕಿದೆ.

ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಭಿವೃದ್ಧಿಯಲ್ಲಿ ಜಿಲ್ಲೆಯೊಳಗೆ ಹೊಸ ಬದಲಾವಣೆ ತರುವ ಸಂಕಲ್ಪ ಮಾಡಬೇಕು. ಹೊಸಬರು-ಹಳಬರು ಎನ್ನುವ ಭೇದವಿಲ್ಲದೆ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರ

ಭಾವನೆಗಳಿಗೆ ಧಕ್ಕೆಯಾಗದ ರೀತಿ ನಾವು ನಡೆದುಕೊಳ್ಳುತ್ತೇವೆ ಎಂದು ನುಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್‌, ಬಿಜೆಪಿಗೆ ಜಿಲ್ಲೆಯೊಳಗೆ ಗಟ್ಟಿನೆಲೆ ದೊರಕಿಸಬೇಕಿದೆ. ಕೆಆರ್‌ಪೇಟೆ ಉಪಚುನಾವಣೆ ನಂತರ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ, ಹುಮ್ಮಸ್ಸು ಬಂದಿದೆ.

ಬೇರೆ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುವ ಬಗ್ಗೆ ಭರವಸೆ ಮೂಡಿಸಿದೆ. ಸಮರ್ಥರು ಬಿಜೆಪಿ ಸೇರ್ಪಡೆ ಒಳ್ಳೆಯ ಬೆಳವಣಿಗೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ. ಸದಾನಂದ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ್‌ ವಿಶ್ವಕರ್ಮ, ನಗರ ಮೋರ್ಚಾ ಅಧ್ಯಕ್ಷ ವಿವೇಕ್‌, ಮಾಜಿ ಅಧ್ಯಕ್ಷ ಎಚ್‌.ಆರ್‌.ಅರವಿಂದ್‌, ಶಂಕರ್‌, ಹನುಮಂತು ಇದ್ದರು.

ಚಾಮುಂಡೇಶ್ವರಿ ಕ್ಷೇತ್ರದ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ

ಮೈಸೂರು (ಡಿ.02): ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಾಕಷ್ಟುಅನುದಾನ ನೀಡಿದ್ದು, ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಟಿ.ಎಸ್‌. ಶ್ರೀವತ್ಸ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಾಂಪುರ ಜಿಪಂ ವ್ಯಾಪ್ತಿಯ ಬೂತ್‌ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಿಜೆಪಿ (BJP) ಶಾಸಕರು ಇಲ್ಲದಿದ್ದರು ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟುಅನುದಾನ ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದಲೂ ಹಲವಾರು ಗ್ರಾಮಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿರುವುದು ನಮ್ಮ ಸರ್ಕಾರದ ಹೆಗ್ಗಳಿಕೆ ಎಂದು ಹೇಳಿದರು.

ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಎಲ್ಲಾ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಮತದಾರರಿಗೆ ಮನವರಿಕೆ ಮಾಡಿ ಕೊಡುವ ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್‌, ಮಾಜಿ ಅಧ್ಯಕ್ಷ ಎನ್‌. ಅರುಣ್‌ಕುಮಾರ್‌ ಗೌಡ, ಮಾಜಿ ಜಿಲ್ಲಾಧ್ಯಕ್ಷ ಎಸ್‌.ಡಿ. ಮಹೇಂದ್ರ, ಮುಖಂಡರಾದ ಗೋಪಾಲರಾವ್‌, ಪರಶುರಾಮಪ್ಪ, ವಾನೀಶ್‌, ಭಾಗ್ಯಶ್ರೀ, ನಂದಕುಮಾರ್‌, ನಾಡನಹಳ್ಳಿ ಸುರೇಶ್‌, ಶ್ರೀಕಂಠ, ಜಯಸಿಂಹ, ಶಿವು ಗುರೂರು, ಚೇತನ್‌, ನಂಜುಂಡಸ್ವಾಮಿ, ವೃಷಭೇಂದ್ರ, ಶಂಕರ್‌ ನಾರಾಯಣ್‌ ಮೊದಲಾದವರು ಇದ್ದರು.

ಚಾಮುಂಡೇಶ್ವರಿಯಿಂದ ಸ್ಪರ್ಧೆ ಮಾಡುವುದಿಲ್ಲ

ಮೈಸೂರು : ನನ್ನ ಸೋಲಿಗೆ ಕಾರಣವಾದ ಚಾಮುಂಡೇಶ್ವರಿ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ತಾಲೂಕು ಹಳೇ ಕಾಮನಕೊಪ್ಪಲು ಗ್ರಾಮದ ಬಳಿ ಇಲವಾಲ ಭಾಗದ ಕಾಂಗ್ರೆಸ್‌ ಕಾರ್ಯಕರ್ತರು ಸ್ವಾಗತಿಸಿ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ನೀವು ಸ್ಪರ್ಧಿಸಬೇಕು. ಈ ಬಾರಿ ಗೆದ್ದೇ ಗೆಲ್ಲಿಸುತ್ತೇವೆ ಎಂದು ಮನವಿ ಮಾಡಿದರು.