ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ: ಶಾಸಕ ಕೆ.ಶಿವನಗೌಡ ನಾಯಕ
ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯ ಜಲ ನಿರ್ಮಲ ಘಟಕ ಸಭಾಂಗಣದಲ್ಲಿ ನಡೆದ ರಾಯಚೂರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಕಾಮಗಾರಿಗಳು ಉತ್ತಮ ಗುಣಮಟ್ಟದ ರೀತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಕೆ.ಶಿವನಗೌಡ ನಾಯಕ ಸೂಚನೆ ನೀಡಿದ್ರು.
ರಾಯಚೂರು (ಡಿ.16): ರಾಯಚೂರು ಜಿಲ್ಲೆ ದೇವದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ವಿವಿಧ ಅಭಿವೃದ್ಧಿ ನಡೆದಿವೆ. ಕಾಮಗಾರಿಗಳು ಉತ್ತಮ ಗುಣಮಟ್ಟದ ರೀತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಕೆ.ಶಿವನಗೌಡ ನಾಯಕ ಸೂಚನೆ ನೀಡಿದ್ರು. ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯ ಜಲ ನಿರ್ಮಲ ಘಟಕ ಸಭಾಂಗಣದಲ್ಲಿ ನಡೆದ ರಾಯಚೂರು ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸೂಚನೆ ನೀಡಿದರು. ಮುಂದಿನ ದಿನಗಳಲ್ಲಿ ದೇವದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಅಷ್ಟೇ ಅಲ್ಲದೇ ಕೇಂದ್ರ ಸಚಿವರು ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡುವವರಿದ್ದು, ದೇವದುರ್ಗ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ದೊಡ್ಡ ಮಟ್ಟದ ಅನುದಾನವನ್ನು ಸರ್ಕಾರ ನೀಡಲಾಗಿದ್ದು, ಹೀಗಾಗಿ ಕ್ಷೇತ್ರದಲ್ಲಿ ಪ್ರತಿಯೊಂದು ಕಾಮಗಾರಿಗಳನ್ನು ಕ್ರಮಬದ್ಧವಾಗಿ, ಗುಣಮಟ್ಟ ಕಾಪಾಡಿ ಮುಗಿಸಿಕೊಂಡು ವ್ಯವಸ್ಥಿತವಾಗಿ ಕೆಲಸಗಳನ್ನು ಮಾಡಬೇಕೆಂದು ಸೂಚನೆ ನೀಡಿದರು.
ಪ್ರತಿಯೊಂದು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಕ್ರಮಬದ್ಧವಾಗಿ ಮಾಡಿ ಕ್ಷೇತ್ರದ ಅಭಿವೃದ್ಧಿಗಾಗಿ ಸಹಕರಿಸಬೇಕೆಂದು ತಿಳಿಸಿದರು.
ಇನ್ನೂ ಸಭೆಯಲ್ಲಿ ರಾಯಚೂರು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ್ ನಾಯಕ, ಜಿ.ಪಂ. ಸಿಇಒ ಶಶಿಧರ್ ಕುರೇರ, ರಾಯಚೂರು ಸಹಾಯಕ ಆಯುಕ್ತ ರಜನಿಕಾಂತ್ ಚೌಹ್ಹಾಣ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.
ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಪ್ರಯೋಗಾಲಯ ಉದ್ಘಾಟನೆ
ರಾಯಚೂರು: ನಗರದ ಕೈಗಾರಿಕಾ ವಲಯದಲ್ಲಿ ಹೊಸದಾಗಿ ನಿರ್ಮಿಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರದೇಶಿಕ ಕಚೇರಿ ಮತ್ತು ಪ್ರಯೋಗಾಲಯ ಕಟ್ಟಡವನ್ನು ಕೈಮಗ್ಗ ಮತ್ತು ಜವಳಿ ಇಲಾಖೆ, ಕಬ್ಬು ಮತ್ತು ಸಕ್ಕರೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಗುರುವಾರ ಉದ್ಘಾಟಿಸಿದರು.
Raichuru: ₹5 ಕುರುಕುರೆ ಪ್ಯಾಕೇಟ್‌ನಲ್ಲಿ 500ರ ನೋಟು ಪತ್ತೆ; ಖರೀದಿಗೆ ಮುಗಿಬಿದ್ದ ಜನ!
ಈ ವೇಳೆ ಮಾತನಾಡಿದ ಅವರು, ಮಾಲಿನ್ಯ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಪ್ರಾದೇಶಿಕ ಕಚೇರಿಯ ಕಟ್ಟಡ ಮತ್ತು ಪ್ರಯೋಗಾಲಯ ನಿರ್ಮಾಣಗೊಂಡಿರುವುದು ಸಂತಸದ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜನರಿಗೆ ಉಪಯುಕ್ತವಾದ ಕಾರ್ಯವಾಗಬೇಕು ಇದಕ್ಕೆ ಸರ್ಕಾರದ ಸಂಪೂರ್ಣ ಸಹಕಾರವಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸಂಘಟಿಸಿ, ಬಲಿಷ್ಠಗೊಳಿಸಿದ್ದು ಬಿಎಸ್‌ವೈ: ಶಂಕರ ಪಾಟೀಲ್ ಮುನೇನಕೊಪ್ಪ
ರಾಯಚೂರು ನಗರದಲ್ಲಿ ಕುಡಿಯುವ ನೀರಿನ ಶುದ್ಧತೆ, ಪರಿಸರ ಮಾಲಿನ್ಯ ಸೇರಿದಂತೆ ಇನ್ನಿತರ ಮಾಲಿನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದಲ್ಲಿ ಪರೀಕ್ಷೆಗಳು ಉತ್ತಮವಾಗಿ ಹಾಗೂ ಗುಣಮಟ್ಟದ ರೀತಿಯಲ್ಲಿ ನಡೆಯಬೇಕು. ಹಾಗೂ ನಿರಂತವಾಗಿ ಪರೀಕ್ಷೆಯ ವರದಿಗಳನ್ನು ಪರಿಶೀಲಿಸುವ ಕೆಲಸಗಳಾಗಬೇಕು. ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಂಡಳಿಯು ಸರ್ಕಾರದ ನಿಯದಡಿ ಕಾರ್ಯನಿರ್ವಹಿಸಿ, ಯಾವುದೇ ಸಮಸ್ಯೆಗಳಿದ್ದಲ್ಲಿ ಸರ್ಕಾರದ ಗಮನಕ್ಕೆ ತಂದು ಜಿಲ್ಲೆಯ ಅಭಿವೃದ್ಧಿ ಪೂರಕವಾದ ಕೆಲಸಗಳನ್ನು ಮಾಡಬೇಕು. ಹೆಚ್ಚು ಜನರಿಗೆ ಉಪಯೋಗವಾಗುವಂತೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.