Asianet Suvarna News Asianet Suvarna News

ಜಗತ್‌ಪ್ರಸಿದ್ಧ ಎಲೆಕ್ಟ್ರಾನಿಕ್‌ ಸಿಟಿಗೆ ಅರಸು ಹೆಸರು: ಸಿಎಂ ಸಿದ್ದರಾಮಯ್ಯ

ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಹಿಂದೆಯೇ ಘೋಷಣೆ ಮಾಡಿದ್ದೆ. ಆದರೆ, ಕಾರಣಾಂತರಗಳಿಂದ ಅದು ವಿಳಂಬವಾಗಿದೆ. ಆದರೀಗ, ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲಿ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡುತ್ತೇವೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ 

devaraj Urs  name to electronic city  in bengaluru says cm siddaramaiah grg
Author
First Published Aug 21, 2024, 6:54 AM IST | Last Updated Aug 21, 2024, 6:54 AM IST

ಬೆಂಗಳೂರು(ಆ.21):  ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಬೆಂಗಳೂರಿನ ಮಾಹಿತಿ ತಂತ್ರಜ್ಞಾನ ಕಂಪನಿಗಳ ನೆಲೆವೀಡಾಗರುವ ಎಲೆಕ್ಟ್ರಾನಿಕ್‌ ಸಿಟಿಗೆ ಅವರ ಹೆಸರು ನಾಮಕರಣ ಮಾಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿ, ‘ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಅವರ ಹೆಸರನ್ನು ನಾಮಕರಣ ಮಾಡುವ ಕುರಿತು ಹಿಂದೆಯೇ ಘೋಷಣೆ ಮಾಡಿದ್ದೆ. ಆದರೆ, ಕಾರಣಾಂತರಗಳಿಂದ ಅದು ವಿಳಂಬವಾಗಿದೆ. ಆದರೀಗ, ಅದಕ್ಕೆ ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲಿ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡುತ್ತೇವೆ’ ಎಂದರು.

ವಾಲ್ಮೀಕಿ ಆಯ್ತು ಇದೀಗ ದೇವರಾಜ ಅರಸು ನಿಗಮದಲ್ಲಿ ಹಗರಣ?: ರಾತ್ರೋ ರಾತ್ರಿ ಕಡತಕ್ಕೆ ಬೆಂಕಿ ಇಟ್ಟಿದ್ಯಾರು?

‘ದೇವರಾಜ ಅರಸು ಅವರು ಮಾಡಿದ ಕಾರ್ಯಗಳನ್ನು ಗುರುತಿಸಿ ಅವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕು. ಈ ಕುರಿತಂತೆ ಶೀಘ್ರದಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದು ಹೇಳಿದರು. ಎಲೆಕ್ಟ್ರಾನಿಕ್‌ ಸಿಟಿ ಐಟಿ ಹಬ್‌ ಆಗಿದ್ದು, ಇಲ್ಲಿ ಭಾರತದ ಹೆಸರಾಂತ ಕಂಪನಿಗಳಾದ ಇನ್ಫೋಸಿಸ್‌ ಹಾಗೂ ವಿಪ್ರೋ 

Latest Videos
Follow Us:
Download App:
  • android
  • ios