'ನಾನು ಸಚಿವನಾಗುತ್ತೇನೆಂದು ಕನಸಲ್ಲಿಯೂ ಎಣಿಸಿರಲಿಲ್ಲ'

ನನಗೆ ಈ ಜಿಲ್ಲೆಯ ಉಸ್ತುವಾರಿ ಸಿಗಲಿದೆ ಎಂದು ಕನಸಿನಲ್ಲಿಯೂ ಎಣಿಸಿರಲಿಲ್ಲ ಎಂದು ದಾವಣಗೆರೆ ಉಸ್ತುವಾರಿ ಸಚಿವ ಈಶ್ವರಪ್ಪ ಹೇಳಿದ್ದಾರೆ. 

Development Is The First Priority Says Minister KS Eshwarappa

ದಾವಣಗೆರೆ [ಸೆ.19]:  ನಾನು ದಾವಣಗೆರೆ ಉಸ್ತುವಾರಿ ಸಚಿವನಾಗುತ್ತೇನೆ ಎಂದು ಕನಸಲ್ಲಿಯೂ ಎಣಿಸಿರಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ದಾವಣಗೆರೆಯ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನನಗೆ ಮುಖ್ಯಮಂತ್ರಿ ಯಡಿಯೂರಪ್ಪ  ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ವಹಿಸಿದ್ದಾರೆ. ಇಲ್ಲಿನ ಜನಪ್ರತಿನಿಧಿಗಳು, ಕಾರ್ಯಕರ್ತರ ವಿಶ್ವಾಸ ಪಡೆಯುವ ಮೂಲಕ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಶಿವಮೊಗ್ಗ ಹಾಗೂ ದಾವಣಗೆರೆ ಎರಡು ಜಿಲ್ಲೆಗಳು ಅಣ್ಣ ತಮ್ಮ ಇದ್ದಂತೆ.  ನನ್ನ ಜಿಲ್ಲೆಗೆ ಪ್ರಾಧಾನ್ಯತೆ ಕೊಟ್ಟಂತೆ ಇಲ್ಲಿಗೂ ಕೊಟ್ಟು ಅಭಿವೃದ್ಧಿ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.

ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು ಇಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಈಶ್ವರಪ್ಪ ಪರಿಶೀಲನೆ ನಡೆಸಿದ್ದಾರೆ.

Latest Videos
Follow Us:
Download App:
  • android
  • ios