Asianet Suvarna News Asianet Suvarna News

ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ದಸರಾ ನೆಪದಲ್ಲಿ ಕಳ್ಳಾಟ ಆಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. 

Development works should not be hampered on the pretext of Dasara Says CM Siddaramaiah gvd
Author
First Published Sep 28, 2024, 4:32 PM IST | Last Updated Sep 28, 2024, 4:32 PM IST

ಮೈಸೂರು (ಸೆ.28): ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ದಸರಾ ನೆಪದಲ್ಲಿ ಕಳ್ಳಾಟ ಆಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಜಿಪಂ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ನ್ಯಾಯಲಯಗಳಿಗಿಂತ ಜನತಾ ನ್ಯಾಯಾಲಯ ಮುಖ್ಯ. ಆತ್ಮಸಾಕ್ಷಿ ಮುಖ್ಯ ಎನ್ನುವ ಮಹಾತ್ಮಗಾಂಧಿ ಅವರ ಮಾತನ್ನು ಅಧಿಕಾರಿಗಳಿಗೆ ನೆನಪಿಸಿದರು. ನೆಪ ಹೇಳುವುದು, ಸುಳ್ಳು ಹೇಳುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. 

ಒಂದು ಸುಳ್ಳು ಹೇಳಿದರೆ ಅದನ್ನು ಸಮರ್ಥಿಸಲು ಮತ್ತೊಂದು, ಇನ್ನೊಂದು ಸುಳ್ಳನ್ನು ಹೇಳುತ್ತಲೇ ಹೋಗಬೇಕಾಗುತ್ತದೆ. ಹೀಗಾಗಿ ಸುಳ್ಳು ಮತ್ತು ನೆಪ ಹೇಳುವ ಅಧಿಕಾರಿಗಳು ಸಿಕ್ಕಿ ಬೀಳುತ್ತಾರೆ. ಇದು ನಿಮ್ಮ ವೃತ್ತಿ ಜೀವನಕ್ಕೆ ಒಳ್ಳೆಯದಲ್ಲ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು. ಕಾನೂನು ಸುವ್ಯವಸ್ಥೆ ಸರಿ ಇಲ್ಲದಿದ್ದರೆ ರಾಜ್ಯದ ಅಭಿವೃದ್ಧಿ ಮತ್ತು ಆರ್ಥಿಕತೆಯ ಪ್ರಗತಿ ಅಸಾಧ್ಯ. ಪೊಲೀಸ್ ಇಲಾಖೆಯ ಬೇಜವಾಬ್ದಾರಿಯಿಂದ ಅಪರಾಧಗಳು ಆಗಬಾರದು. ರಾಜ್ಯದ ಬಂಡವಾಳ ಹೂಡಿಕೆಗೂ, ಕಾನೂನು-ಸುವ್ಯವಸ್ಥೆಗೂ ನೇರಾನೇರ ಸಂಬಂಧವಿದೆ. ಈ ಬಗ್ಗೆ ಕಟ್ಟೆಚ್ಚರವಹಿಸಿ ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. 

ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಒತ್ತು: ಸಚಿವ ಎನ್.ಎಸ್.ಬೋಸರಾಜು

ಆರೋಗ್ಯ- ಶಿಕ್ಷಣ- ಅನ್ನ- ನೀರು- ವಿದ್ಯುತ್- ರಸ್ತೆ ಸುರಕ್ಷತೆ ನನ್ನ ಪ್ರಥಮ ಆಧ್ಯತೆ. ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಜಾತಿ ಸೋಂಕು ಇರಬಾರದು. ಸಂವಿಧಾನ ಮತ್ತು ಜಾತ್ಯತೀತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು ಜನರ ಸೇವೆಯನ್ನು ಮಾಡಬೇಕು ಎಂದು ಅವರು ಹೇಳಿದರು. ನಾವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವುದನ್ನು ಮೊದಲ ಆಧ್ಯತೆಯನ್ನಾಗಿ ಪರಿಗಣಿಸಬೇಕು. ಈ ಐದೂ ಗ್ಯಾರಂಟಿಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶವೇ ಇಲ್ಲದಂತೆ ನೇರವಾಗಿ ಫಲಾನುಭವಿಗಳ ಮಡಿಲಿಗೆ ಸೇರುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು. 

ಈ ವಿಚಾರದಲ್ಲಿ ಅಸಡ್ಡೆ ಮತ್ತು ಉದಾಸೀನವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸರ್ಕಾರ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತಿದೆ. ಈ ಹಣ ಫಲಾನುವಿಗಳಿಗೆ ತಲುಪದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು. ವರ್ಷಕ್ಕೆ ಸುಮಾರು 5,60 ಕೋಟಿ ಜನರಿಗಾಗಿ, ಜನರ ಗ್ಯಾರಂಟಿಗಳಿಗಾಗಿ ತೆಗೆದಿರಿಸಿದ್ದೇನೆ. ಇಷ್ಟೂ ಹಣ ಜನರಿಗೆ ತಲುಪಬೇಕು. ಅಭಿವೃದ್ಧಿ ಕೆಲಸಗಳಿಗೂ ಹಣ ಹೇರಳವಾಗಿ ಬಿಡುಗಡೆ ಆಗುತ್ತಿದೆ. ಅನುದಾನ ಬಿಡುಗಡೆ ಆಗಿದೆ. ಆಯವ್ಯಯದಲ್ಲಿ ಘೋಷಣೆ ಆಗಿರುವ ಕಾರ್ಯಕ್ರಮಗಳಿಗೆ ಘೋಷಿಸಿದ್ದಷ್ಟು ಹಣ ಬಿಡುಗಡೆ ಆಗುತ್ತಿದೆ. 

ನಾವು ಅನುದಾನ ಕೊಟ್ಟಾಗ ಯೋಜನಾ ವರದಿ ಸಿದ್ಧವಾಗಿರಬೇಕು. ಈಗಾಗಲೇ ಸೆಪ್ಟೆಂಬರ್ ಮುಗಿಯುತ್ತಿದೆ. ಈ ಆರ್ಥಿಕ ವರ್ಷಕ್ಕೆ ಆರು ತಿಂಗಳು ಮಾತ್ರ ಉಳಿದಿದೆ. ಯಾರು ಆಕ್ಷನ್ ಪ್ಲಾನ್ ಮಾಡಿಕೊಂಡಿಲ್ಲ ಅವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುವುದಾಗಿ ವರು ಹೇಳಿದರು. ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ ಅಂತಹ ಅಧಿಕಾರಿಗಳನ್ನು ನಮ್ಮ ಸರ್ಕಾರ ಸಹಿಸಲ್ಲ. ಜಿಲ್ಲಾ ಮಂತ್ರಿಗಳೂ ಈ ವಿಚಾರದಲ್ಲಿ ಮುಲಾಜು ತೋರಿಸಬಾರದು. ಮೈಸೂರು ಸಾಂಸ್ಕೃತಿಕವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದೆ. ಪ್ರತಿ ವರ್ಷ ದಸರಾ ಮಹೋತ್ಸವವನ್ನು ಸರ್ಕಾರ ಅತ್ಯಂತ ಅರ್ಥಪೂರ್ಣವಾಗಿ ಆಚರಿಸುತ್ತಿದೆ. 

ಕಳೆದ ವರ್ಷ ಬರಗಾಲ ಇತ್ತು. ಭೀಕರ ಬರಗಾಲ. ಈ ವರ್ಷ ಮಳೆ ಆಗಿದೆ. ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ.  ಎಲ್ಲಾ ಜಲಾಶಯಗಳೂ ತುಂಬಿವೆ. ಹೀಗಾಗಿ ಬರಗಾಲ ಇಲ್ಲದಿರುವುದರಿಂದ ಅದ್ದೂರಿಯಾಗಿ, ಅರ್ಥಪೂರ್ಣವಾಗಿ ದಸರಾ ಆಚರಿಸುವ ಜೊತೆಗೆ ವೈಭವ ಮತ್ತು ಸಂಭ್ರಮಕ್ಕೆ ಕೊರತೆ ಆಗಬಾರದು. ನಮ್ಮ ಪರಂಪರೆ, ಚರಿತ್ರೆ, ಇತಿಹಾಸದ ವೈಭವ ಮಹೋತ್ಸವದಲ್ಲಿ ಮತ್ತು ಮಹೋತ್ಸವದ ಪರಿಣಾಮದಲ್ಲಿ ಜನರಿಗೆ ಕಾಣಿಸಬೇಕು ಎಂದು ಅವರು ಹೇಳಿದರು. ದಸರಾ ಉತ್ಸವ. ಇದು ಸರ್ಕಾರದ ಉತ್ಸವ ಅಲ್ಲ. ಇದರ ಹೊಣೆ ಜಿಲ್ಲಾಡಳಿತದ್ದು. ದಸರಾ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. 

ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ದಸರಾ ನೆಪದಲ್ಲಿ ಕಳ್ಳಾಟ ಆಡಬಾರದು. ಎಲ್ಲಾ ನ್ಯಾಯಲಯಗಳಿಗಿಂತ ಜನತಾ ನ್ಯಾಯಾಲಯ ಮುಖ್ಯ, ಆತ್ಮಸಾಕ್ಷಿ ಮುಖ್ಯ ಎನ್ನುವ ಮಹಾತ್ಮಗಾಂಧಿ ಅವರ ಮಾತನ್ನು ಅಧಿಕಾರಿಗಳಿಗೆ ನೆನಪಿಸಿದರು. ಸುಮಾರು ಇಪ್ಪತ್ತು ಸಾವಿರ ಕೋಟಿ ಸರ್ಕಾರದ ಮೇಲೆ ಹೊರೆ ಆದರೂ ಏಳನೇ ವೇತನ ಆಯೋಗ ಜಾರಿ ಮಾಡಿ ನಿಮ್ಮ (ಅಧಿಕಾರಿಗಳ-ಸಿಬ್ಬಂದಿಯ) ವೇತನ ಹೆಚ್ಚಿಸಿದ್ದೇವೆ. ಗ್ಯಾರಂಟಿಗಳಿಗೆ ಹಣ ಕೊಟ್ಟೂ ಕೂಡ ನಿಮ್ಮ ಕೆಲಸಕ್ಕೆ ತಕ್ಕಂತೆ ಸಂಬಳ ಕೊಡಬೇಕು ಎನ್ನುವ ಉದ್ದೇಶದಿಂದ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಿಸಿದ್ದೇವೆ. 

ಅಧಿಕಾರಿಗಳಿಗೆ ಯಾವುದೇ ಕಾರಣಕ್ಕೂ ಜಾತಿ ಸೋಂಕು ಇರಬಾರದು. ಸಂವಿಧಾನ ಮತ್ತು ಜಾತ್ಯತೀತವಾಗಿ ಸರ್ಕಾರದ ಕಾರ್ಯಕ್ರಮಗಳನ್ನು, ಜನರ ಸೇವೆಯನ್ನು ಮಾಡಬೇಕು ಎಂದು ಅವರು ಸೂಚಿಸಿದರು. ನಾವೆಲ್ಲಾ ಗ್ರಾಮೀಣ ಬದುಕಿನಿಂದಲೇ ಬಂದವರು. ನಮ್ಮ ಗ್ರಾಮೀಣ ಬದುಕು, ಗ್ರಾಮೀಣ ಸಮಾಜವನ್ನು ಮೇಲ್ದರ್ಜೆಗೆ ಏರಿಸಬೇಕು ಎನ್ನುವುದು ನನ್ನ ಗುರಿ. ನನ್ನ ಗುರಿಗೆ ತಕ್ಕಂತೆ ನೀವುಗಳೂ ಕೈ ಜೋಡಿಸಿ ಕೆಲಸ ಮಾಡಬೇಕು. ಏಕೆಂದರೆ ಶೇ. 90 ರಷ್ಟು ಅಧಿಕಾರಿ ಮತ್ತು ಸಿಬ್ಬಂದಿ ಕೂಡ ಗ್ರಾಮೀಣ ಭಾಗದಿಂದ ಬಂದವರು ಎಂದು ನೆನಪಿಸಿದರು. ಬಳಿಕ ವಿವಿಧ ಇಲಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಕುರಿತು ಪರಿಶೀಲಿಸಿದರು.

ರಾಮನಗರವನ್ನು ಬರಪೀಡಿತ ತಾಲೂಕಾಗಿ ಘೋಷಿಸಲು ಒತ್ತಾಯಿಸುವೆ: ಶಾಸಕ ಇಕ್ಬಾಲ್ ಹುಸೇನ್

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಕೆ. ವೆಂಕಟೇಶ್‌, ಶಾಸಕರಾದ ಜಿ.ಟಿ. ದೇವೇಗೌಡ, ದರ್ಶನ್‌ ಧ್ರುವನಾರಾಯಣ್, ಅನಿಲ್‌ ಚಿಕ್ಕಮಾದು, ಡಿ. ರವಿಶಂಕರ್‌, ಜಿ.ಡಿ. ಹರೀಶ್‌ಗೌಡ, ಕೆ. ಹರೀಶ್‌ಗೌಡ, ವಿಧಾನ ಪರಿಷತ್‌ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಡಾ. ಯತೀಂದ್ರ ಸಿದ್ದರಾಮಯ್ಯ, ಕೆ. ವಿವೇಕಾನಂದ, ಸಿ.ಎನ್‌. ಮಂಜೇಗೌಡ, ಗ್ಯಾರಂಟಿ ಯೋಜನೆ ಜಾರಿ ಸಮಿತಿ ಅಧ್ಯಕ್ಷ ಎಚ್‌.ಎಂ. ರೇವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್‌ ಇದ್ದರು.

Latest Videos
Follow Us:
Download App:
  • android
  • ios