*  ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ *  ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ನಿರ್ಬಂಧ*  ಭಕ್ತರಿಗೆ ಕೋವಿಡ್‌ ನೆಗೆಟಿವ್‌ ಪ್ರಮಾಣ ಪತ್ರ ಕಡ್ಡಾಯ

ಸುಬ್ರಹ್ಮಣ್ಯ(ಆ.19): ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕೋವಿಡ್‌ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. 

ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ಕೂಡ ಅವಕಾಶ ನಿರ್ಬಂಧಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ ನೆಗೆಟಿವ್‌ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.

ಧರ್ಮಸ್ಥಳ, ಕಟೀಲು, ಕುಕ್ಕೆಯಲ್ಲಿ ದೇಗುಲ ಬಂದ್‌ : ಯಾವಾಗ..?

ಆ.30ರಂದು ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿ ಯಾವುದೇ ಸೇವೆಗಳು ನಡೆಯುವುದಿಲ್ಲ. ಬೆಳಗ್ಗೆ 7.00ರಿಂದ ಮಧ್ಯಾಹ್ನ 11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30ರಿಂದ ರಿಂದ ಸಂಜೆ 7.00 ತನಕ ಭಕ್ತರು ಶ್ರೀ ದೇವರ ದರ್ಶನ ಮಾಡಬಹುದು. ಅಲ್ಲದೆ ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.