ಚಿತ್ರದುರ್ಗ[ಜು.19]: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ 43 ವಸಂತಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸಮುದಾಯದ ಭಕ್ತರು 47 ಲಕ್ಷ ರು.ಮೌಲ್ಯದ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. 

ಪ್ರತಿವರ್ಷ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳ ಜನ್ಮ ದಿನದಂದು ಚಿತ್ರದುರ್ಗದಲ್ಲಿ ಅದ್ಧೂರಿಯಾಗಿ ಭೋವಿ ಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗುತ್ತಿತ್ತು. ಆದರೆ ಈ ವರ್ಷ ಬರದ ಹಿನ್ನೆಲೆಯಲ್ಲಿ ಭೋವಿ ಜನೋತ್ಸವ ಕಾರ್ಯಕ್ರಮ ರದ್ದುಗೊಳಿಸಲಾಗಿತ್ತು.

ಗುರುವಾರ ಸರಳವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಕ್ತರು ಫೋರ್ಡ್‌ ಕಂಪನಿಯ ಎಂಡೆವರ್‌ ಕಾರನ್ನು ಉಡುಗೊರೆಯಾಗಿ ಸಮರ್ಪಿಸಿದ್ದಾರೆ.