ಅಲ್ಲಿಗೆ ಹೋಗಿ ತುಮಕೂರು ಪೊಲೀಸ್ರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಡಿಜಿ-ಐಜಿಪಿ
ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ತುಮಕೂರು ಪೊಲೀಸರ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ತುಮಕೂರು, (ಜೂನ್.01): ಕೊರೋನಾ ಸೋಂಕು ತಡೆಗಟ್ಟುವಲ್ಲಿ ತುಮಕೂರು ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಹಿಂದಿನ ಮೂರು ತಿಂಗಳು ಪೊಲೀಸರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞೆಗಳನ್ನ ತಿಳಿಸಲು ಬಂದಿದ್ದಾನೆ ಎಂದರು.
ಸರ್ಪ್ರೈಸ್ ನೀಡಿದ ರಚಿತಾ, ರಾಜ್ಯದಲ್ಲಿ ಎಣ್ಣೆಗೆ ಬೇಡಿಕೆ ಕುಸಿತ ; ಜೂ.01ರ ಟಾಪ್ 10 ಸುದ್ದಿ!
ಮಹಾರಾಷ್ಟ್ರ, ತಮಿಳುನಾಡಿನಿಂದ ಎಲ್ಲಾ ಜಿಲ್ಲೆಗಳಿಗೂ ಕೊರೋನಾ ಸೋಂಕಿತರು ಬಂದಿದ್ದಾರೆ. ನನ್ನ ಪ್ರಕಾರ ಯಾವ ಜಿಲ್ಲೆಯ ಪೊಲೀಸರಿಗೆ ಸೋಂಕು ಬರೋದಿಲ್ವೋ ಅದು ಗ್ರೀನ್ ಜಿಲ್ಲೆ. ತುಮಕೂರಿನಲ್ಲಿ ಈವರೆಗೆ ಪೊಲೀಸರಿಗೆ ಯಾವುದೇ ಸೋಂಕಿಲ್ಲ. ಚೆನ್ನಾಗಿ ಕಂಟ್ರೋಲ್ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇನ್ನು ಇದೇ ವೇಳೆ ಶಿವಮೊಗ್ಗ ಪೊಲೀಸರಿಗೆ ಸೋಂಕು ತಗುಲಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯುವತಿಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ಈ ವೇಳೆ ಮಾನವೀಯ ದೃಷ್ಟಿಯಿಂದ ಇನ್ಸ್‌ಪೆಕ್ಟರ್ ತಮ್ಮ ಜೀಪಿನಲ್ಲಿ ಕರೆದುಕೊಂಡು ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರೋಟೋಕಾಲ್ ಪ್ರಕಾರ ಅದು ತಪ್ಪು. ಆದ್ರೆ ಮಾನವೀಯ ದೃಷ್ಟಿಯಿಂದ ಏನು ಮಾಡಬೇಕಿತ್ತು? ಕೆಲವು ಸರಿ ನಾವು ನಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ಇದುವರೆಗೂ 32 ಪೊಲೀಸರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಪೈಕಿ ಆರು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 300ಕ್ಕೂ ಹೆಚ್ಚು ಪೊಲೀಸರನ್ನ ಕ್ವಾರಂಟೈನ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.