ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಏರುಗತಿಯಲ್ಲಿರುವ ಹಿನ್ನೆಲೆ  ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬಂದ್ ಆ.5ರಿಂದ 15ರ ವರೆಗೆ ಭಕ್ತಾದಿಗಳಿಗೆ ಸೇವಾ ಕಾರ್ಯಕ್ಕೆ ನಿರ್ಬಂಧ 

ಮಂಗಳೂರು (ಆ.05): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಏರುಗತಿಯಲ್ಲಿರುವ ಹಿನ್ನೆಲೆಯಲ್ಲಿ ಪ್ರತಿಷ್ಠಿತ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಆ.5ರಿಂದ 15ರ ವರೆಗೆ ಭಕ್ತಾದಿಗಳಿಗೆ ಸೇವಾ ಕಾರ್ಯಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಅಲ್ಲದೆ ವಾರಾಂತ್ಯ 2 ದಿನಗಳ ಕಾಲ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ವಾರದ ಉಳಿದ ಎಲ್ಲ ದಿನಗಳಲ್ಲಿ ಕಟೀಲು, ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಮಾತ್ರ ತೆರೆದಿರುತ್ತದೆ. 

ಗಡಿಯಲ್ಲಿ ಕಟ್ಟೆಚ್ಚರ : ದ.ಕ.ದಲ್ಲಿ 13 ಗಡಿ ಬಂದ್‌, ಮದ್ಯ, ಬಸ್ ಸ್ಥಗಿತ

ಆದರೆ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ಶನಿವಾರ ಮತ್ತು ಭಾನುವಾರ ವಾರಾಂತ್ಯದಲ್ಲಿ ಭಕ್ತಾದಿಗಳ ದೇವಸ್ಥಾನ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona