Dharwad ಅಳ್ನಾವರ ಪೌರಕಾರ್ಮಿಕರ ಮನೆಗಳ ನಿರ್ಮಾಣ ಸ್ಥಳ ತನಿಖೆಗೆ ಆದೇಶ
ತ್ರೈಮಾಸಿಕ ಸಭೆಗೆ ಹಾಜರಾಗದ ಅಧಿಕಾರಿಗಳ ಮೆಲೆ ಕ್ರಮಕ್ಕೆ ಸೂಚನೆ ನೀಡಿದ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ.
ವರದಿ : ಪರಮೇಶ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್
ಧಾರವಾಡ (ಜೂನ್ 29) :ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ 2 ನೇಯ ತ್ರೈಮಾಸಿಕ ಸಭೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆಯಿತು. ಭಾಗಶಃ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಗೈರಾಗಿದ್ದರು. ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ಹಾಜರಾಗದ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿ, ಖಡಕ್ ಎಚ್ಚರಿಕೆಯೊಂದನ್ನು ಕೊಟ್ಟು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು.
ಇನ್ನು ಅಳ್ನಾವರ ಪಟ್ಟಣ ಪಂಚಾಯತಿಯಲ್ಲಿ ನಿರ್ಮಿಸಲಾಗುತ್ತಿರುವ ಪೌರಕಾರ್ಮಿಕರ ಮನೆಗಳ ಕಾಮಗಾರಿ ಗುಣಮಟ್ಟದ ಬಗ್ಗೆ ಆರೋಪಗಳು ಬಂದಿವೆ. ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ ಅವರು ಸ್ಥಳ ತನಿಖೆ ಮಾಡಿ, ವಿಚಾರಣೆ ನಡೆಸಿ ವರದಿ ನೀಡಬೇಕು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 432 ಪೌರಕಾರ್ಮಿಕರ ಭವಿಷ್ಯನಿಧಿ (ಪಿಎಫ್) ಹಣ ಪಾವತಿಯು ಆಧಾರ್ ಸೀಡಿಂಗ್ ಕಾರಣದಿಂದ ವಿಳಂಬವಾಗಿದೆ. ಒಂದು ವಾರದೊಳಗೆ ಸಮಸ್ಯೆಗೆ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚಿಸಿದರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೌರ್ಜನ್ಯಕ್ಕೊಳಗಾದ SC-ST ಜನಾಂಗಕ್ಕೆ ನ್ಯಾಯ ಒದಗಿಸುವಂತೆ ಧಾರವಾಡ ಜಿಲ್ಲಾಧಿಕಾರಿ ಸೂಚನೆ
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ಐರಾವತ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಾಲಸೌಲಭ್ಯ ಒದಗಿಸಲು ವಿಳಂಬ ಮಾಡಿದ ಜಿಲ್ಲಾ ವ್ಯವಸ್ಥಾಪಕರ ವಿರುದ್ಧ ಕ್ರಮಕೈಗೊಳ್ಳಲು ಕೋರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆಯಲಾಗುವುದು. ಡಿಮ್ಹಾನ್ಸ್ ಸಂಸ್ಥೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಒದಗಿಸುತ್ತಿರುವ ಸೌಲಭ್ಯಗಳ ಕುರಿತು ನಿರ್ದೇಶಕರಿಂದ ವರದಿ ತರಿಸಿಕೊಳ್ಳಲಾಗುವುದು ಎಂದರು.
ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಹುಬ್ಬಳ್ಳಿ ರಾಜಗೋಪಾಲ ನಗರವನ್ನು ಕೊಳಚೆಪ್ರದೇಶ ಎಂದು ಘೋಷಿಸಿ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಈ ಕುರಿತು ರೇಲ್ವೆಯ ಉನ್ನತ ಮಟ್ಟದ ಸಭೆ ನಡೆಸಲು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಕೋರಲಾಗುವುದು ಎಂದರು. ಸಭೆಯಲ್ಲಿ ಸಮಿತಿಯ ಸದಸ್ಯರಾದ ರೇಣುಕಪ್ಪ ಕೆಲೂರು, ಹನಮಂತಪ್ಪ ಮಾಲಪಲ್ಲಿ, ಭೀಮರಾವ ಸವಣೂರು ಹಾಗೂ ವಿದ್ಯಾ ನರಸಪ್ಪನವರ ಉಪಸ್ಥಿತರಿದ್ದರು.
ಇನ್ಮುಂದೆ ಹುಬ್ಬಳ್ಳಿ-ಧಾರವಾಡದಲ್ಲಿ ಜಗಮಗಲಿಸಲಿದೆ ಡಿಜಿಟಲ್ ಜಾಹೀರಾತು..!
ಅಧಿಕಾರಿಗಳ ಗೈರು ಹಾಜರಿ ಕ್ರಮಕ್ಕೆ ಸೂಚನೆ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ, ಜಿಲ್ಲಾ ಸಫಾಯಿ ಕರ್ಮಚಾರಿ ಜಾಗೃತಿ ಸಮಿತಿ ಹಾಗೂ ಎಸ್‍ಸಿಎಸ್‍ಎ ಮತ್ತು ಟಿಎಸ್‍ಎ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಗಳಿಗೆ ಪೂರ್ವಾನುಮತಿ ಪಡೆಯದೇ ಗೈರು ಹಾಜರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡಲಾಗುವುದು. ಗಂಭೀರವಾದ ಚರ್ಚೆಗಳು ನಡೆಯುವ ಸಭೆಗೆ ಹಾಜರಾಗದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದರು.