ಅಧಿಕಾರಿಗಳೇ ಹಳ್ಳಿಗಳಿಗೆ ಹೋಗಿ ಜನರ ಸಮಸ್ಯೆ ಕೇಳಿ, ಸರಕಾರದ ನೆರವು ತಲುಪಿಸಿ: ಸಚಿವ ಸಂತೋಷ ಲಾಡ್ ಆದೇಶ

ಧಾರವಾಡದ ಕೆಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು ಎಂದು ಸಚಿವ ಸಂತೋಷ ಲಾಡ್ ಆದೇಶಿಸಿದ್ದಾರೆ.

Dharwad district in-charge Minister Santosh Lad visited rain-affected areas gow

ವರದಿ : ಪರಮೇಶ್ವರ ಅಂಗಡಿ‌ ಏಷ್ಯಾನೆಟ್ ಸುವರ್ಣ ನ್ಯೂಸ್

ಧಾರವಾಡ (ಜು.26): ಜಿಲ್ಲೆಯಲ್ಲಿ ಕೆಲವು ಕಡೆ ಅತಿಯಾದ ಮಳೆ, ಮುಂಗಾರು ಬಿತ್ತನೆ ಇಲ್ಲದೆ ಜನ ತೊಂದರೆಯಲ್ಲಿದ್ದಾರೆ ಅಧಿಕಾರಿಗಳು ಕಚೇರಿಯಲ್ಲಿ ಕುಳಿತುಕೊಳ್ಳದೇ ಹಳ್ಳಿಗಳಿಗೆ ಹೋಗಿ ಸಾರ್ವಜನಿಕರ ಸಮಸ್ಯೆಗಳನ್ನು ಕೇಳಬೇಕು. ಮತ್ತು ಅವರಿಗೆ ಅಗತ್ಯವಿರುವ ಸರಕಾರದ ನೆರವು, ಸಹಾಯ ಮಾಡಬೇಕೇಂದು ರಾಜ್ಯ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪಕ್ಕೆ ಸಂಭಂದಿಸಿದ ವಿಷಯಗಳ ಕುರಿತು ಜಿಲ್ಲಾ ಮಟ್ಟದ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ಜರುಗಿಸಿ, ಮಾತನಾಡಿದರು ಅಧಿಕಾರಿಗಳು ಕಚೇರಿಯಲ್ಲಿ ಕಾಲ ಕಳೆಯದೆ, ಜನರ ಬಳಿ ಹೋಗಬೇಕು ಮನೆ ಹಾನಿ ಪ್ರಕರಣಗಳನ್ನು ಅಧಿಕಾರಿಗಳು ಸ್ವತಃ ಭೇಟಿ ನೀಡಿ, ಪರಿಶೀಲಿಸಬೇಕು ಜನರ ಸಂಚಾರಕ್ಕೆ, ವಿದ್ಯಾರ್ಥಿಗಳ ಓಡಾಟಕ್ಕೆ ಅಡಚಣೆ ಆಗಿರುವ ರಸ್ತೆಗಳ ದುರಸ್ತಿಗೆ ಆದ್ಯತೆ ನೀಡಬೇಕು ಎಂದು ಸಚಿವರು ಸೂಚಿಸಿದರು.

ಮಂಗಳೂರು ಪ್ರತಿಷ್ಠಿತ ಎ.ಜೆ ಆಸ್ಪತ್ರೆ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು, ರಣರಂಗವಾದ ಆಸ್ಪತ್ರೆ ಆವರಣ

ಜಿಲ್ಲೆಯಲ್ಲಿ ಮುಂಗಾರು ಮಳೆ ಅಭಾವದಿಂದ ಮುಂಗಾರು ಬಿತ್ತನೆಗೆ ಹಿನ್ನಡೆ ಆಗಿದೆ.ಬಿತ್ತಿದ ಕೆಲವು ರೈತರ ಬೆಳೆ ಸಕಾಲಕ್ಕೆ ಮಳೆ ಇಲ್ಲದೆ ಹಾಗೂ ಈಗ ಅತಿ ಮಳೆಯಿಂದಾಗಿ ಬೆಳೆ ಕುಂಠಿತವಾಗಿದೆ.ಕೃಷಿ ಇಲಾಖೆ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳನ್ನು ಸಕ್ರಿಯವಾಗಿ ತೊಡಗಿಸಬೇಕು ಪ್ರತಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ರೈತರಲ್ಲಿ ಬೆಳೆ ವಿಮೆ ಬಗ್ಗೆ ಜಾಗೃತಿ ಮೂಡಿಸಬೇಕು ಬಿತ್ತಿದ ಬೆಳೆ ನಿರ್ವಹಣೆ, ಹಿಂಗಾರಿ ಬಿತ್ತನೆಗೆ ಅಗತ್ಯವಿರುವ ಕೃಷಿ ಸಲಹೆ ನೀಡಿ, ರೈತರಿಗೆ ನೆರವಾಗಬೇಕು ರಾಜ್ಯ ಸರಕಾರದ ಯೋಜನೆ, ಸಬ್ಸಿಡಿಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಸಚಿವ ಸಂತೋಷ ಲಾಡ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಉತ್ತಮವಾಗಿ ಮಳೆ ಆಗಿರುವದರಿಂದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಡಿಮೆ ಆಗಿದೆ ಜಲ್ ಜೀವನ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಬೇಗ ಪೂರ್ಣಗೊಳಿಸಬೇಕು ಕಾಮಗಾರಿ ಗುಣಮಟ್ಟ ಕಳಪೆ ಮಾಡಿದರೆ ಸಂಬಂದಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಚಿವರು ಎಚ್ಚರಿಸಿದರು.

ಸರಕಾರದ ಗ್ಯಾರಂಟಿ ತೋಜನೆಗಳ ಲಾಭ ಜಿಲ್ಲೆಯ ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪುವಂತೆ  ಅಧಿಕಾರಿಗಳು ಕ್ರಮವಹಿಸಬೇಕು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿ ಹಳ್ಳಿಗಳಿಗೆ, ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮತ್ತು ಬೇರೆ ಬೇರೆ ಹಳ್ಳಿಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ತಮ್ಮ ಪ್ರವಾಸ ಹಾಗೂ ಗ್ರಾಮ ಭೇಟಿ ವಿವರಗಳನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿ ವಾರ ತಪ್ಪದೇ ಸಲ್ಲಿಸಬೇಕು. ಈ ಕುರಿತು ತಾವು ಸ್ವತಃ ಗಮನ ಹರಿಸಿ, ಪರಿಶೀಲಿಸುವದಾಗಿ ಸಚಿವ ಸಂತೋಷ ಲಾಡ್ ಅವರು ಸಭೆಯಲ್ಲಿ ತಿಳಿಸಿದರು ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾವಾರು ಪ್ರಗತಿ ವರದಿ ಹಾಗೂ ಕೈಗೊಂಡ ಕಾರ್ಯಕ್ರಮಗಳ ಕುರಿತು ವಿವರಿಸಿದರು.

ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ-ಮಗು ಸಾವು: 10 ಕೋಟಿ ಪರಿಹಾರಕ್ಕೆ ಅರ್ಜಿ, 

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪೊಲೀಸ್ ಆಯುಕ್ತ ಸಂತೋಷ ಬಾಬು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಎಸ್.ಕೆಳದಿಮಠ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಿ.ಎಸ್.ಮೂಗನೂರಮಠ, ಧಾರವಾಡ  ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣಕುಮಾರ,  ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ಸಿ.ಬದ್ರಣ್ಣವರ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ತಿಮ್ಮಯ್ಯ, ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ, ಅಗ್ನಿಶಾಮಕ ಧಾರವಾಡ ಠಾಣಾಧಿಕಾರಿ ಅಮೃತ ಟಿ., ಮತ್ತು ಜಿಲ್ಲೆಯ ಎಲ್ಲ ತಹಸಿಲ್ದಾರರು ಹಾಗೂ ವಿವಿದ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Latest Videos
Follow Us:
Download App:
  • android
  • ios