ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಘೋಷಿಸಿದ್ದಾರೆ.  

ವರದಿ : ಪರಮೇಶ್ವರ ಅಂಗಡಿ ಏಷ್ಯಾನೆಟ್ ಸುವರ್ಣ ನ್ಯೂಸ್

ಧಾರವಾಡ : ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಗ್ಯಾರಂಟಿ ಯೋಜನೆಗಳು ತಲುಪಬೇಕು ಧಾರವಾಡ ಜಿಲ್ಲೆಯ ಶೇ.98 ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಹಣವನ್ನು ನೇರವಾಗಿ ತಲುಪಿಸಲಾಗುತ್ತಿದೆ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಇಡೀ ರಾಜ್ಯದಲ್ಲೇ ಧಾರವಾಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರು ಹೇಳಿದರು.

ಅವರು ಇಂದು ಧಾರವಾಡದ ಕೆ.ಸಿ.ಡಿ ಕಾಲೇಜು ಆವರಣದಲ್ಲಿರುವ ಶ್ರೀ ಅಣ್ಣಾಜಿರಾವ ಶಿರೂರ (ಸೃಜನಾ) ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಮತ್ತು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಯಾವ ಸಿಎಂಗಳು ಏನೇನು ಕೊಡುಗೆ?

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 165 ಭರವಸೆಗಳನ್ನು ಘೋಷಣೆ ಮಾಡಿದ್ದರು. ಆ ಎಲ್ಲಾ ಭರವಸೆಗಳನ್ನು ಕಡಿಮೆ ಅವಧಿಯಲ್ಲಿ ಈಡೇರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಧಾರವಾಡದ ಗ್ಯಾರಂಟಿ ಯೋಜನೆಗಳ ಕಾರ್ಯಾಗಾರ ಕಾರ್ಯಕ್ರಮಕ್ಕೆ ಸಾಕಷ್ಟು ಮಹಿಳೆಯರು ಭಾಗವಹಿಸಿದ್ದಾರೆ. ಇದರಿಂದ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪುತ್ತಿವೆ ಎಂಬುದು ಸ್ಪಷ್ಟವಾಗಿದೆ. ಈ ಹಿಂದಿನ ಮುಖ್ಯಮಂತ್ರಿಗಳಾದ ಡಿ.ದೇವರಾಜ್ ಅರಸ್ ಅವರು ಹಿಂದುಳಿದ ವರ್ಗದವರಿಗೆ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದರು ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು ಜನರ ಏಳಿಗೆಗೆ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರು. ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಸಿಇಟಿ ಪರೀಕ್ಷೆಯನ್ನು ಜಾರಿಗೊಳಿಸಿದರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಆಶ್ರಯ ಮನೆ ಯೋಜನೆಯನ್ನು ಜಾರಿಗೆ ತಂದು ಬಡವರಿಗೆ ಸೂರು ಕಲ್ಪಿಸಿದರು. ಅಲ್ಲದೇ 10 ಹೆಚ್‍ಪಿ ವಿದ್ಯುತ್‍ನ್ನು ಉಚಿತವಾಗಿ ನೀಡಿದರು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಐಟಿಬಿಟಿ ಕಂಪನಿಗಳ ಸ್ಥಾಪನೆಗೆ ಮುಂದಾದರು. ಆ ಮೂಲಕ ಬೆಂಗಳೂರು ಐಟಿ ಹಬ್ ಆಗಿ ಪರಿವರ್ತನೆಯಾಯಿತು. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಅಭಿವೃದ್ಧಿಗೆ ನಾಂದಿ ಹಾಡಿದ್ದಾರೆ ಎಂದು ಅವರು ಹೇಳಿದರು.

ಸುಮಾರು1ಲಕ್ಷ ಕೋಟಿ ಜನರಿಗೆ ನೇರವಾಗಿ ಹಣ ಸಂದಾಯ ಮಾಡಲಾಗುತ್ತಿದೆ. 638 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಬಸಗಳಲ್ಲಿ ಸಂಚಾರ ಮಾಡಿದ್ದಾರೆ ಶಕ್ತಿ ಯೋಜನೆಗೆ ಲಂಡನ್ ಬುಕ್ ಆಫ್ ವಲ್ರ್ಡ್ ರೆಕಾಡ್ರ್ಸ್, ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾಡ್ರ್ಸ್ ಮತ್ತು ಇಂಟನ್ರ್ಯಾಷನಲ್ ಬುಕ್ ಆಫ್ ರೆಕಾಡ್ರ್ಸ್‍ನಂತಹ ಸಂಸ್ಥೆಗಳಿಂದ ಪ್ರಶಸ್ತಿ, ಪ್ರಮಾಣಪತ್ರಗಳು ಲಭಿಸಿವೆ.ಗೃಹ ಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವ ನಿಧಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗುತ್ತಿವೆ ಎಂದು ಅವರು ಬಣ್ಣಿಸಿದರು.

ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 60 ಸಾವಿರ ಕೋಟಿ ಖರ್ಚು

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 60 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ 5 ವರ್ಷಕ್ಕೆ 3 ಲಕ್ಷ ಕೋಟಿ ಹಣವನ್ನು ವ್ಯಯಿಸಲಾಗುತ್ತಿದೆ ಮಹಿಳೆಯರ ಕೆಲಸವನ್ನು ಗೌರವಸುವ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಹಣವನ್ನು ನೀಡಲಾಗುತ್ತಿದೆ ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ಹಣವನ್ನು ನಿಮಗೆ ನೀಡುತ್ತಿದ್ದೇವೆ ಮಾಜಿ ಪ್ರಧಾನಮಂತ್ರಿ ಇಂದಿರಾಗಾಂಧಿ ಅವರ ಸರ್ಕಾರದಲ್ಲಿ ವೃದ್ಧಾಪ್ಯ ವೇತನ ವಿಧವಾ ವೇತನ ಜಾರಿಗೆ ತರಲಾಯಿತು ಉಳುವವನೇ ಭೂಮಿಯ ಒಡೆಯ ಕಾರ್ಯಕ್ರಮ ಜಾರಿಗೊಳಿಸಲಾಗಿತ್ತು ಆಹಾರ ಭದ್ರತೆ ಕಾನೂನು ಜಾರಿಗೆ ತಂದರು. ದೇಶದಲ್ಲಿ ಸರಿ ಸುಮಾರು70 ಕೋಟಿ ಜನರಿಗೆ ಅನ್ನ ದೊರೆಯುತ್ತಿದೆ ಅಸಂಘಟಿತ ವಲಯದ ಕಾರ್ಮಿಕರಿಗೆ ಸಹ ಕಾರ್ಮಿಕ ಇಲಾಖೆಯಿಂದ ಸವಲತ್ತುಗಳನ್ನು ಒದಗಿಸಲಾಗುತ್ತಿದೆ ಈ ದೇಶವು 145 ಕೋಟಿ ಜನರ ಆಸ್ತಿಯಾಗಿದೆ 600 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ ಆ ಮೂಲಕ ರಾಜ್ಯದ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಆಚರಣೆ ಮಾಡಲಾಗುತ್ತದೆ ಮಹಿಳೆಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ನೆನೆಯಬೇಕು ಎಂದು ಅವರು ತಿಳಿಸಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ ನುಡಿದಂತೆ ನಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪಂಚ ಗ್ಯಾರಂಟಿ ಯೋಜನೆಗಳನ್ನು 5 ವರ್ಷಗಳ ಕಾಲ ನಿರಂತರವಾಗಿ ನೀಡುತ್ತೇವೆ ಮಹಿಳೆಯರ ಮನದಾಳ ಮಾತುಗಳಿಂದ ಗ್ಯಾರಂಟಿ ಯೋಜನೆಗಳು ಯಾವ ರೀತಿಯಲ್ಲಿ ತಲುಪುತ್ತಿವೆ ಎಂಬುದನ್ನು ತಿಳಿಯಬಹುದಾಗಿದೆ ಈ ಹಿಂದೆ ವಿದ್ಯುತ್ ಬಿಲ್ ಪಾವತಿ ಮಾಡದಿದ್ದರೆ ವಿದ್ಯುತ್ ಕಟ್ ಮಾಡುತ್ತಿದ್ದರು.ಆದರೆ ಈಗ ಗೃಹ ಜ್ಯೋತಿ ಯೋಜನೆಯಿಂದ ಎಲ್ಲರಿಗೂ ಅನುಕೂಲವಾಗಿದೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಹ ಗ್ಯಾರಂಟಿ ಕಾರ್ಯಾಗಾರ ನಡೆಯುತ್ತಿವೆ.ಶಕ್ತಿ ಯೋಜನೆಯಡಿ ಉಚಿತವಾಗಿ ನವಲಗುಂದ ತಾಲೂಕಿನಿಂದ ಸಾವಿರಾರು ಜನರು ಗಾರ್ಮೆಂಟ್ ಕೆಲಸಕ್ಕೆ ಹುಬ್ಬಳ್ಳಿಗೆ ಬರುತ್ತಾರೆ.ರಾಜ್ಯ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಕರ್ನಾಟಕ ಸರ್ಕಾರ ಜನರ ಪರವಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ವಿಭಾಗದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಅವರು ಮಾತನಾಡಿ ಬೆಳಗಾವಿ ವಿಭಾಗದಲ್ಲಿ ನಡೆಯುತ್ತಿರುವ ಮೂರನೇ ಕಾರ್ಯಕ್ರಮ ಇದಾಗಿದೆ. ಈಗಾಗಲೇ ಹಾವೇರಿ ಬೆಳಗಾವಿ ಜಿಲ್ಲೆಯಲ್ಲಿ ಗ್ಯಾರಂಟಿ ಉತ್ಸವವನ್ನು ಯಶಸ್ವಿಯಾಗಿ ಮಾಡಲಾಗಿದೆ ಗ್ಯಾರಂಟಿ ಯೋಜನೆಗಳು ನಾಳಿನ ಭರವಸೆಗೆ ಬೆಳಕಾಗಿವೆ ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪುತ್ತಿವೆ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿವೆ ಬಡವರ ಬದುಕು ಉತ್ಕøಷ್ಟವಾಗಲಿದೆ ವಿವಿಧ ಮಹಾನಗರ ಪಾಲಿಕೆಗಳಲ್ಲಿ ಗ್ಯಾರಂಟಿ ಸಭೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.

ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು ಅದರಂತೆ ಪ್ರತಿ ಮನೆ ಮನೆಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ ಗ್ರಾಮ ಪಂಚಾಯತ ಮಟ್ಟದಲ್ಲಿ ಶಿಬಿರಗಳನ್ನು ಆಯೋಜನೆ ಮಾಡಿ ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗುತ್ತಿದೆ ಹುಬ್ಬಳ್ಳಿ ಧಾರವಾಡದಲ್ಲಿ ಉದ್ಯೋಗಾವಕಾಶ ಒದಗಿಸಲಾಗುತ್ತದೆ ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಗೆ ರೂ.638 ಕೋಟಿ ವ್ಯಯಿಸಲಾಗಿದೆ ಅನ್ನ ಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ ಈ ಯೋಜನೆಗೆ ರೂ.358 ಕೋಟಿ ಖರ್ಚು ಮಾಡಲಾಗಿದೆ ಸುಮಾರು 3.81 ಲಕ್ಷ ಫಲಾನುಭವಿಗಳಿಗೆ ಗೃಹ ಲಕ್ಷ್ಮೀ ಹಣ ಜಮೆ ಮಾಡಲಾಗಿರುತ್ತದೆ ರೂ.19.95 ಕೋಟಿ ಹಣವನ್ನು ಯುವ ನಿಧಿ ಯೋಜನೆಗೆ ಬಳಸಲಾಗಿದೆ ಎಂದು ಅವರು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಕುರಿತು ವಿಶೇಷ ಉಪನ್ಯಾಸದಲ್ಲಿ ಡಾ.ವಾಸು ಎಚ್. ಅವರು ಮಾತನಾಡಿ 15 ಜಿಲ್ಲೆಗಳಲ್ಲಿ ಗ್ಯಾರಂಟಿ ಕಾರ್ಯಾಗಾರ ಯಶಸ್ವಿಯಾಗಿ ನಡೆದಿದೆ. ಇಂದು ಧಾರವಾಡದಲ್ಲಿ ಬಹಳ ವಿಜೃಂಭಣೆಯಿಂದ ಜರುಗುತ್ತಿದೆ ಗ್ಯಾರಂಟಿ ಯೋಜನೆಗಳು ಜನರಿಗೆ ಸೌಲಭ್ಯ ತಲುಪಿಸುವ ಕಾರ್ಯಕ್ರಮಗಳಾಗಿವೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲಾಗಿದೆ ಎಂದು ವಿವರಿಸಿ, ಉಪನ್ಯಾಸ ನೀಡಿದರು ಪ್ರಸ್ತುತ ಗ್ಯಾರಂಟಿ ಯೋಜನೆಗಳಿಗೆ ರೂ.1.10 ಲಕ್ಷ ಕೋಟಿ ಖರ್ಚು ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಗ್ಯಾರಂಟಿ ಮತ್ತು ಅಭಿವೃದ್ಧಿ ಪದಗಳು ಒಂದೆ ಅರ್ಥ ಹೊಂದಿವೆ. ಯುವ ನಿಧಿ ಯೋಜನೆ ಮೂಲಕ ನಿರುದ್ಯೋಗಿ ಯುವ ಜನರಿಗೆ ಹಣ ಒದಗಿಸಲಾಗುತ್ತಿದೆ ಗ್ಯಾರಂಟಿ ಯೋಜನೆಗಳ ಹಣದಿಂದ ವ್ಯಾಪಾರ ವಹಿವಾಟು ದ್ವಿಗುಣವಾಗಿದೆ. ಅಧಿಕ ಬೇಡಿಕೆಯಿಂದ ಹೆಚ್ಚು ಹೆಚ್ಚು ಉದ್ಯೋಗಾವಕಾಶ ಹೆಚ್ಚಳವಾಗಿವೆ ಇಡೀ ದೇಶದಲ್ಲಿ ತಲಾದಾಯದಲ್ಲಿ ರಾಜ್ಯ ಪ್ರಥಮವಾಗಿದೆ ಜಿಎಸ್‍ಟಿ ಬೆಳೆವಣಿಗೆ ದರದಲ್ಲಿ ಹಾಗೂ ಜಿಎಸ್‍ಟಿ ಸಂಗ್ರಹದಲ್ಲಿ ಕೂಡ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಸಂವಿಧಾನದ ಆಶಯಗಳ ಮೇಲೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಸರ್ಕಾರಿ ನೌಕರರ ಸಂಬಳವನ್ನು ಹೆಚ್ಚಳ ಮಾಡಲಾಗಿದೆ ಇದರಿಂದ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಅವರು ಹೇಳಿದರು.

ಗೃಹ ಲಕ್ಷ್ಮಿ ಯೋಜನೆಯನ್ನು ಮಹಿಳೆಯರ ದುಡಿಮೆಗೆ ನೀಡಲಾಗುತ್ತಿದೆ ಜನರ ಕೈಗೆ ದುಡ್ಡು ಕೊಡುವುದರಿಂದ ಹೆಚ್ಚಿನ ವಹಿವಾಟು ಆಗುವದರಿಂದ ರಾಜ್ಯ ಅಭಿವೃದ್ಧಿ ಆಗಲಿದೆ ಜನ ಸಾಮಾನ್ಯರ ಅಭಿವೃದ್ಧಿಯೇ ರಾಜ್ಯದ ಅಭಿವೃದ್ಧಿಯಾಗಿದೆ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಆಗಬಾರದು. ಜನರಿಗೆ ಗ್ಯಾರಂಟಿ ಯೋಜನೆಗಳ ಸಮರ್ಪಕ ಬಳಕೆಯ ಬಗ್ಗೆ ಇನ್ನೂ ತಿಳಿಯಪಡಿಸಬೇಕಿದೆ ಎಂದು ಅವರು ತಿಳಿಸಿದರು ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಸೈಯದ್ ಅಜೀಮ್‍ಪೀರ್ ಎಸ್.ಖಾದ್ರಿ,ವಿಧಾನ ಪರಿಷತ್ತ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ, ಜಿಲ್ಲಾಧಿಕಾರಿ ದಿವ್ಯ ಪ್ರಭು,ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಎಸ್ಪಿ ಗುಂಜನ್ ಆರ್ಯ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳುಬವಿವಿಧ ಇಲಾಖೆಗಳ ಅಧಿಕಾರಿಗಳು, ಫಲಾನುಭವಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು ಶರೀಫ್ ದೊಡ್ಡಮನಿ ಮತ್ತು ತಂಡದವರು ನಾಡಗೀತೆ ಹಾಡಿದರು. ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಸ್ವಾಗತಿಸಿದರು. ಡಾ. ರೇಣುಕಾ ಅಮಲಝರಿ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷ, ಸದಸ್ಯರನ್ನು ಸ್ಮಾನಿಸಿ, ಗೌರವಿಸಲಾಯಿತು.