ಧಾರವಾಡದಲ್ಲಿ ಖಾಲಿ ಇರುವ 2.84 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಪ್ರತಿಭಟನೆಗೆ ಮುನ್ನವೇ ಪೊಲೀಸರು ವಿದ್ಯಾರ್ಥಿ ಮುಖಂಡರಿಗೆ ನೋಟಿಸ್ ನೀಡಿದ್ದು, ಕೆಲವರನ್ನು ವಶಕ್ಕೆ ಪಡೆದಿದ್ದರೂ ಹೋರಾಟ ಮುಂದುವರಿಸಲು ಯುವಕರು ಸಜ್ಜಾಗಿದ್ದಾರೆ.

ಧಾರವಾಡ (ಏ.14): ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯಂದೇ ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬೀದಿಗೆ ಇಳಿದಿದ್ದಾರೆ. ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 2.84 ಲಕ್ಷ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆಗೆ ತಯಾರಿ ನಡೆಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರತಿಭಟನೆಗೆ ಮುನ್ನವೇ ವಿದ್ಯಾರ್ಥಿ ಮುಖಂಡರಿಗೆ ನೋಟಿಸ್

ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಇಂದು ಬೆಳಗ್ಗೆ 11.00 ಗಂಟೆಗೆ ಧಾರವಾಡದ ಜಯನಗರ ಸರ್ಕಲ್‌ ನಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸ್ ಇಲಾಖೆ ವಿದ್ಯಾರ್ಥಿ ಮುಖಂಡರಿಗೆ ನೋಟಿಸ್ ನೀಡಿದೆ.

ಕೇಸ್‌ ದಾಖಲಾಗುವ ಭೀತಿ, ಸಾಮಾನ್ಯ ವಿದ್ಯಾರ್ಥಿಗಳು ಪ್ರತಿಭಟನೆಗೆ ಬರಲು ಹಿಂದೇಟು

ಪೊಲೀಸರ ನೋಟಿಸ್‌ನಿಂದಾಗಿ ಕೇಸ್ ದಾಖಲಾಗುವ ಭೀತಿ ಎದುರಾಗಿದ್ದು, ಸಾಮಾನ್ಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ಡೌಟು. ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವಿದ್ದರೂ ಪೊಲೀಸರ ನೋಟಿಸ್‌ನಿಂದಾಗಿ ಪ್ರತಿಭಟನೆಗೆ ಬರಲು ಹಿಂಜರಿಕೆ, ಆದರೆ ಪೊಲೀಸರ ನೋಟಿಸ್‌ಗೂ ಮಣಿಯದ ವಿದ್ಯಾರ್ಥಿ ಮುಖಂಡರು ಹೋರಾಟ ಮುಂದುವರಿಸಲು ಸನ್ನದ್ಧರಾಗಿದ್ದಾರೆ.

ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ, ಜಯನಗರ ಕ್ರಾಸ್‌ನಲ್ಲಿ ಪ್ರತಿಭಟನೆಗೆ ಮುಂದಾದ ಇಬ್ಬರು ವಿದ್ಯಾರ್ಥಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನೆಲೆ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ.