ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಬೆಂಗಳೂರು ಡಿಐಜಿ ರವಿ ಡಿ. ಚನ್ನಣ್ಣನವರ್, ಜ್ಞಾನ, ಶಿಸ್ತು, ಸಂಸ್ಕಾರ, ಸಮಯದ ಮಹತ್ವ ಹಾಗೂ ಮೊಬೈಲ್ ದುರ್ಬಳಕೆ ಬಗ್ಗೆ ವಿದ್ಯಾರ್ಥಿನಿಯರಿಗೆ ಮಹತ್ವದ ಸಲಹೆ ನೀಡಿದರು.

ಗಂಗಾವತಿ (ಜು.11): ಜ್ಞಾನ, ಶಿಸ್ತು ಮತ್ತು ಸಂಸ್ಕಾರದಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳ ಬೇಕೆಂದು ಬೆಂಗಳೂರು ಡೆಪ್ಯೂಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ರವಿ ಡಿ. ಚನ್ನಣ್ಣನವರ್ ಹೇಳಿದರು. ನಗರದ ಐಎಂಎ ಭವನದಲ್ಲಿ ಜ್ಞಾನಸಿರಿ ಪ್ರಥಮ ದರ್ಜೆ ಕಲಾ ಮತ್ತು ಮಹಿಳಾ ವಾಣಿಜ್ಯ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವ ಶಕ್ತಿಯಾಗಿದೆ ಎಂದು ಹೇಳಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿದ್ಯಾರ್ಥಿನಿಯರು ಜೀವನದಲ್ಲಿ ದೊಡ್ಡ ಗುರಿಯನ್ನು ಹೊಂದಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಪ್ರತಿಯೊಬ್ಬರೂ ಸಮಯದ ಮಹತ್ವ ಅರಿತು ಶಿಸ್ತು, ಪ್ರಾಮಾಣಿಕತೆ ಮತ್ತು ಪರಿಶ್ರಮವನ್ನು ಜೀವನದ ಮೌಲ್ಯಗಳನ್ನಾಗಿ ಅಳವಡಿಸಿಕೊಳ್ಳಬೇಕು. ಇಂದಿನ ಯುವಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಜ್ಞಾನ ವೃದ್ಧಿಗೆ ಬಳಸಬೇಕು ಹೊರತು ದುರ್ಬಳಕೆಗೆ ಅವಕಾಶ ನೀಡಬಾರದು ಎಂದು ಸಲಹೆ ನೀಡಿದರು. ಮಹಿಳೆಯರು ಶಿಕ್ಷಣದ ಮೂಲಕ ಸಮಾಜದಲ್ಲಿ ನಾಯಕತ್ವ ವಹಿಸುವ ಸಾಮರ್ಥ್ಯ ಹೊಂದಿದ್ದು, ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಲು ಆತ್ಮಸ್ಥೈರ್ಯ, ನಿರಂತರ ಅಧ್ಯಯನ ಮತ್ತು ಕಠಿಣ ಪರಿಶ್ರಮ ಅಗತ್ಯ.

ಪೋಷಕರು ಹಾಗೂ ಶಿಕ್ಷಕರ ಮಾರ್ಗದರ್ಶನವನ್ನು ಗೌರವಿಸಿ ಉತ್ತಮ ನಾಗರಿಕರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ದೇಶದ ಅಭಿವೃದ್ಧಿಗೆ ವಿದ್ಯಾವಂತ, ಸಂಸ್ಕಾರವಂತ ಮತ್ತು ಜವಾಬ್ದಾರಿಯುತ ಯುವ ಸಮುದಾಯ ಅಗತ್ಯವಾಗಿದೆ. ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಉನ್ನತ ಗುರಿಯೊಂದಿಗೆ ಮುನ್ನಡೆದರೆ ಕುಟುಂಬಕ್ಕೂ, ಸಮಾಜಕ್ಕೂ ಹಾಗೂ ರಾಷ್ಟ್ರಕ್ಕೂ ಕೀರ್ತಿ ತಂದುಕೊಡಬಹುದು ಎಂದು ಡಿಐಜಿ ರವಿ ಡಿ. ಚನ್ನಣ್ಣನವರ್ ಅಭಿಪ್ರಾಯಪಟ್ಟರು. ತಾವು ಬಡತನ ಅನುಭವಿಸಿದ ಕುರಿತು ಪ್ರಸ್ತಾಪಿಸಿದರು.

ಮಕ್ಕಳಿಗೆ ವಿದ್ಯಾರ್ಜನೆ

ಶಾಸಕ ಗಾಲಿ ಜನಾರ್ದನ ಮಾತನಾಡಿ ನ್ಯಾಯಧೀಶರಾಗಿ ನಿವೃತ್ತಿಯಾಗಿರುವ ಎನ್.ಎಸ್ ಪಾಟೀಲ್ ಅವರು ಕಾಲೇಜು ಪ್ರಾರಂಭಿಸಿ ಮಕ್ಕಳಿಗೆ ವಿದ್ಯಾರ್ಜನೆ ನೀಡಿದ್ದಾರೆ. ಈ ಸಂಸ್ಥೆಗೆ ಸದಾ ಸಹಕಾರ ನೀಡುವುದಾಗಿ ಹೇಳಿದರು. ಶಾಸಕ ಶಿವರಾಜ ತಂಗಡಗಿ ಮಾತನಾಡಿ ನ್ಯಾಯಧೀಶರಾಗಿ ನಿವೃತ್ತಿಯಾಗಿರುವ ಎನ್ ಎಸ್ ಪಾಟೀಲ್ ಅವರು ರಾಜಕೀಯ ಕ್ಷೇತ್ರದಲ್ಲಿ ಭಾಗವಹಿಸಬೇಕಾಗಿತ್ತು. ಈ ಹಿಂದೆಯು ಸಹ ರಾಜಕೀಯ ಕ್ಷೇತ್ರದಲ್ಲಿದ್ದು ನಂತರ ನ್ಯಾಯಂಗ ಕ್ಷೇತ್ರಕ್ಕೆ ಹೋಗಿದ್ದಾರೆ. ಇವರು ಕಾಲೇಜು ಪ್ರಾರಂಭಿಸಿ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡುತ್ತಿರುವದು ಪ್ಪಶಂಸನೀಯವಾಗಿದೆ ಎಂದರು.