ಮೈಸೂರು(ಸೆ.18).ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಉದ್ಘಾಟಿಸಿದರು. 

ಬಳಿಕ ಡಿಜಿಟಲ್ ಗ್ರಂಥಾಲಯ ವಿಭಾಗವನ್ನು ಕಂಪ್ಯೂಟರ್ ಮೂಲಕ ವೀಕ್ಷಣೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವದ್ವಯರು, ಪುಸ್ತಕಗಳು, ಅಧ್ಯಯನ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ವಿಭಾಗಳನ್ನು ವೀಕ್ಷಿಸಿದರು. ಜೊತೆಗೆ ಪುಸ್ತಕಗಳ ಸಂಗ್ರಹಣೆ ಹಾಗೂ ವಿಷಯಗಳ ಬಗ್ಗೆ ಗಮನಹರಿಸಿದರು.

 'ರಾಷ್ಟ್ರ ರಾಜಧಾನಿಯಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಕರ್ನಾಟಕ ಭವನ ನಿರ್ಮಾಣ' ..

ಶಾಸಕರಾದ ಎಲ್. ನಾಗೇಂದ್ರ, ಎಸ್.ಎ. ರಾಮದಾಸ್,  ಹರ್ಷವರ್ಧನ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ   ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.