Asianet Suvarna News Asianet Suvarna News

ಹುಬ್ಬಳ್ಳಿ: ಪಂಚಮಸಾಲಿ ಪೀಠದ ಸ್ವಾಮೀಜಿಗಳ ನಡುವಿನ ಭಿನ್ನಾಭಿಪ್ರಾಯ ಜಗಜ್ಜಾಹೀರು..!

ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಜದ ಮುಖಂಡರೊಂದಿಗೆ ಅಭಿಪ್ರಾಯ ಪಡೆಯಬೇಕು. ಸಮಗ್ರ ಚರ್ಚೆಯ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ವಚನಾನಂದ ಸ್ವಾಮೀಜಿ| ಹೋರಾಟದ ದಿನಾಂಕ ಘೋಷಿಸಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ|

Disagreement Between Pachamasali Peetha Swamijis grg
Author
Bengaluru, First Published Oct 23, 2020, 2:48 PM IST

ಹುಬ್ಬಳ್ಳಿ(ಅ.23): ಪಂಚಮಸಾಲಿ ಸಮಾಜವನ್ನು 2Aಗೆ ಸೇರಿಸುವ ಹೋರಾಟ ಕಳೆದ 25 ವರ್ಷಗಳಿಂದ ನಡೆಯುತ್ತಿದೆ.  ಈಗಿರುವ 3B ದಲ್ಲಿಯೇ ಸಮುದಾಯಕ್ಕೆ ಹೆಚ್ಚಿನ ಮೀಸಲಾತಿ ನೀಡಿದರೂ ಸಾಕು. ಮುಂದಿನ ಹೋರಾಟದ ಕುರಿತು ಸಮಾಜದ ಮುಖಂಡರೊಡನೆ ಚರ್ಚಿಸಬೇಕು ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಎಂದು ಹೇಳುವ ಮೂಲಕ ಪಂಚಮಸಾಲಿ ಪೀಠದ ಸ್ವಾಮೀಜಿಗಳ ನಡುವಿನ ಭಿನ್ನಾಭಿಪ್ರಾಯ ಜಗಜ್ಜಾಹೀರಾಗಿದೆ. 

ಇಂದು(ಶುಕ್ರವಾರ) ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದ ಸ್ವಾಮೀಜಿ, ಹೋರಾಟದ ರೂಪುರೇಷೆಗಳ ಬಗ್ಗೆ ಸಮಾಜದ ಮುಖಂಡರೊಂದಿಗೆ ಅಭಿಪ್ರಾಯ ಪಡೆಯಬೇಕು. ಸಮಗ್ರ ಚರ್ಚೆಯ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.  

ಪ್ರತ್ಯೇಕ ಧರ್ಮದ ಹೋರಾಟ ನಿಂತಿಲ್ಲ: ಜಯಮೃತ್ಯುಂಜಯ ಶ್ರೀಗಳು

ಆದರೆ, ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಅವರು ಈಗಾಗಲೇ ಪಂಚಮಸಾಲಿ ಸಮಾಜವನ್ನು 2Aಗೆ ಸೇರಿಸುವ ಸಂಬಂಧ ಹೋರಾಟದ ದಿನಾಂಕವನ್ನ ಘೋಷಿಸಿದ್ದಾರೆ. ಆದರೆ,  ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿಕೆ ನೀಡಿರುವುದರಿಂದ ಪಂಚಮಸಾಲಿ ಪೀಠದ ಸ್ವಾಮೀಜಿಗಳ ನಡುವಿನ ಭಿನ್ನಾಭಿಪ್ರಾಯ ಇರುವ ಬಗ್ಗೆ ಬಹಿರಂಗವಾಗಿದೆ. 

ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿ ಅ. 28ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. 
 

Follow Us:
Download App:
  • android
  • ios