ವಿಜಯಪುರ  [ಸೆ.08]: ಅನರ್ಹ ಶಾಸಕರಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಬಿಜೆಪಿ ಶಾಸಕರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ. 

ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅನರ್ಹ ಶಾಸಕರು ಸಾಕಷ್ಟು ನೊಂದಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಅವರಿಗೆ ಚಿತ್ರಹಿಂಸೆಯಾಗಿದೆ ಎಂದರು. 

ಮುಂದಿನ ದಿನಗಳಲ್ಲಿ ಅನರ್ಹ ಶಾಸಕರಿಗೆ ಒಳ್ಳೆಯದಾಗಲಿ. ಅನರ್ಹ ಶಾಸಕರು ಮಂತ್ರಿಗಳಾಗಲಿ ಎಂದು ಹಾರೈಸುತ್ತೇನೆ ಎಂದು ಯತ್ನಾಳ್ ಹೇಳಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

 JDS, ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ. ಆದ್ದರಿಂದ ಸದ್ಯ ರಾಜ್ಯದಲ್ಲಿ ಯಾರಿಗೂ ಮಧ್ಯಂತರ ಚುನಾವಣೆ  ಅಗತ್ಯವಿಲ್ಲ ಎಂದು ಯತ್ನಾಳ್ ಹೇಳಿದರು.

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಬಡಿದಾಡುತ್ತಿದ್ದು, ಎಲ್ಲಾ ಶಾಸಕರೂ ಕೂಡ ಅವರಿಗೆ ಸಹಕಾರ ನೀಡಬೇಕು ಎಂದು ಹೇಳಿದರು.