ಮತಕೇಂದ್ರಗಳಿಗೆ ವಿದ್ಯುನ್ಮಾನ ಯಂತ್ರಗಳ ವಿತರಣೆ
ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರಟಗೆರೆ ತಾಲೂಕಿನಲ್ಲಿ 246 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚನಾವಣೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇರೆಗೆ ಚುವಾವಣಾಧಿಕಾರಿ ಹಾಲುಸಿದ್ದಪ್ಪ ಪೂಜೇರಿ ಮತ್ತು ಸಹಾಯಕ ಚುನಾವಣಾಧಿಕರಿ ಮುನಿಶಾಮ ರೆಡ್ಡಿ ನೇತೃತ್ವದಲ್ಲಿ ಮಸ್ಟರಿಂಗ್ ಕಾರ್ಯದ ಸಿದ್ಧತೆ ಕೈಗೊಳ್ಳಲಾಗಿದೆ. 246 ಮತಗಟೆಗಳಿಗೆ ಕಂಟ್ರೋಲ್ ಯೂನಿಟ್ ಹಾಗೂ ಬ್ಯಾಲೆಟ್ ಯೂನಿಟ್‌ಗಳನ್ನು ಹಂಚಿಕೆ ಮಾಡಲಾಯಿತು.
ಕೊರಟಗೆರೆ : ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕೊರಟಗೆರೆ ತಾಲೂಕಿನಲ್ಲಿ 246 ಮತಗಟ್ಟೆಗಳಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚನಾವಣೆ ನಡೆಸಲು ಚುನಾವಣಾ ಆಯೋಗದ ಸೂಚನೆ ಮೇರೆಗೆ ಚುವಾವಣಾಧಿಕಾರಿ ಹಾಲುಸಿದ್ದಪ್ಪ ಪೂಜೇರಿ ಮತ್ತು ಸಹಾಯಕ ಚುನಾವಣಾಧಿಕರಿ ಮುನಿಶಾಮ ರೆಡ್ಡಿ ನೇತೃತ್ವದಲ್ಲಿ ಮಸ್ಟರಿಂಗ್ ಕಾರ್ಯದ ಸಿದ್ಧತೆ ಕೈಗೊಳ್ಳಲಾಗಿದೆ. 246 ಮತಗಟೆಗಳಿಗೆ ಕಂಟ್ರೋಲ್ ಯೂನಿಟ್ ಹಾಗೂ ಬ್ಯಾಲೆಟ್ ಯೂನಿಟ್‌ಗಳನ್ನು ಹಂಚಿಕೆ ಮಾಡಲಾಯಿತು.
ಕೊರಟಗೆರೆ ವಿಧಾನಸಭಾ ಕ್ಷೇತ್ರದ 246 ಮತಗಟ್ಟೆಗಳಲ್ಲಿ ನಡೆಯುವ ಮತದಾನಕ್ಕೆ 1873 ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಈ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇ 9ರಂದು ಮತಗಟ್ಟೆಕೇಂದ್ರಗಳಿಗೆ ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿಪ್ಯಾಡ್‌ಗಳನ್ನು ಪಡೆದು ಚುನಾವಣೆಗಾಗಿ ನಿಯೋಜನೆ ಮಾಡಿಕೊಂಡಿರುವ ವಾಹನಗಳಲ್ಲಿ ತೆರಳಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ 102086 ಪುರುಷ ಮತದಾರರು, 102495 ಮಹಿಳಾ ಮತದಾರರು ಹಾಗೂ 17 ಇತರೇ ಮತದಾರರು ಸೇರಿದಂತೆ ಒಟ್ಟು 202495 ಮತದಾರರು ಇದ್ದಾರೆ.
ಮತದಾರರು ಮತದಾರರ ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ. ಒಂದು ವೇಳೆ ಮತದಾರರು ಗುರುತಿನ ಚೀಟಿ ಇಲ್ಲದಿದ್ದರೆ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾಸ್ ಪೋರ್ಚ್, ಭಾವಚಿತ್ರ ಇರುವ ಬ್ಯಾಂಕ್ ಪಾಸ್‌ಪುಸ್ತಕ, ಪಾನ್‌ಕಾರ್ಡ್, ನರೇಗಾ ಉದ್ಯೋಗದ ಗುರುತಿನ ಚೀಟಿ ಸೇರಿದಂತೆ ವಿವಿಧ 13 ಗುರುತಿನ ಚೀಟಿಗಳನ್ನು ಬಳಸಿ ಮತದಾನ ಮಾಡಲು ಅವಕಾಶವಿದೆ ಎಂದು ಚುನಾವಣಾಧಿಕಾರಿ ಹಾಲುಸಿದ್ದಪ್ಪ ಪೂಜೇರಿ ತಿಳಿಸಿದರು.
400 ಮಂದಿ ಪೋಲಿಸ್ ನಿಯೋಜನೆ
ಕೊರಟಗೆರೆ ವಿಧಾನ ಸಭಾ ಚುನಾವಣೆಯಲ್ಲಿ ಮತದಾನ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಂದೋಬಸ್‌್ತ ಕಾರ್ಯಕ್ಕಾಗಿ 400 ಮಂದಿ ಪೊಲೀಸ್ ಮತ್ತು ಅರೆ ಮಿಲಿಟರಿ ಪಡೆಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಮಾಹಿತಿ ನೀಡಿದರು. ಚುನಾವಣಾ ಮಸ್ಟರಿಂಗ್ ಕಾರ್ಯದಲ್ಲಿ ಸಹಾಯಕ ಚುನಾವಣಾದಿಕಾರಿ ಹಾಗೂ ತಹಶೀಲ್ದಾರ್ ಮುನಿಶಾಮರೆಡ್ಡಿ, ತಾ.ಪಂ. ಕಾರ್ಯನಿರ್ವಹಣಾದಿಕಾರಿ, ಸಿಪಿಐ ಸುರೇಶ್, ಕಂದಾಯ ಇಲಾಖೆಯ ಎ.ವಿ.ರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.
ಚುನಾವಣೆಗೆ ಸಂಪೂರ್ಣ ತಯಾರಿ
ಬೆಳಗಾವಿ (ಮೇ.9): ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಹದಿನೆಂಟು ಮತಕ್ಷೇತ್ರಗಳ ಮತಗಟ್ಟೆಗಳಿಗೆ ನಿಯೋಜನೆಗೊಂಡಿರುವ ಇಪ್ಪತ್ತು ಸಾವಿರಕ್ಕೂ ಅಧಿಕ ಚುನಾವಣಾ ಸಿಬ್ಬಂದಿಯು ವಿದ್ಯುನ್ಮಾನ ಮತಯಂತ್ರಗಳು ಹಾಗೂ ಇತರೆ ಸಾಮಗ್ರಿಗಳ ಜತೆಗೆ ಮತಗಟ್ಟೆಗಳಿಗೆ ತೆರಳಿದರು.
ಜಿಲ್ಲೆಯ ಹದಿನೆಂಟು ಮತಕ್ಷೇತ್ರ(Assembly constituency)ಗಳಲ್ಲಿ 4434 ಮತಗಟ್ಟೆಗಳು ಮತ್ತು 5 ಹೆಚ್ಚುವರಿ(ಆಕ್ಜಿಲರಿ) ಮತಗಟ್ಟೆಗಳು ಸೇರಿದಂತೆ ಒಟ್ಟು 4439 ಮತಗಟ್ಟೆಗಳಿವೆ. ಈ ಎಲ್ಲ ಮತಗಟ್ಟೆಗಳಿಗೆ ನಿಯೋಜಿಸಲಾಗಿರುವ ಚುನಾವಣಾ ಸಿಬ್ಬಂದಿ ತಮ್ಮ ಮತಗಟ್ಟೆಗಳಿಗೆ ತೆರಳಿರುತ್ತಾರೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ(Belgum DC Nitesh patil) ಅವರು ತಿಳಿಸಿದ್ದಾರೆ.
Karnataka Assembly Election ಚುನಾವಣೆಗೂ ಮೊದಲು ಕನ್ನಡಿಗರಿಗೆ ಪ್ರಧಾನಿ ಮೋದಿ ಮಹತ್ವದ ಸಂದೇಶ!
ಜಿಲ್ಲಾಧಿಕಾರಿಗಳು ಸ್ವತಃ ಬೆಳಗಾವಿ ನಗರ ಹಾಗೂ ಹುಕ್ಕೇರಿ ಮತಕ್ಷೇತ್ರಗಳ ಶ್ರೀ ಕಾಡಸಿದ್ಧೇಶ್ವರ ಪಬ್ಲಿಕ್ ಶಾಲೆಯ ಆವರಣದಲ್ಲಿ ಇರುವ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿದರಲ್ಲದೇ ಎಲ್ಲ ಸಿಬ್ಬಂದಿ ನಿಗದಿತ ಬಸ್ ಗಳ ಮೂಲಕ ಸುರಕ್ಷಿತವಾಗಿ ಮತಗಟ್ಟೆಗಳಿಗೆ ತೆರಳುವುದನ್ನು ಖಚಿತಪಡಿಸಿದರು.
ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿದ್ದು, ಚುನಾವಣಾ ಪ್ರಕ್ರಿಯೆಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ಅವರು ಕೂಡ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡುವ ಮೂಲಕ ಭದ್ರತಾ ಕ್ರಮಗಳನ್ನು ಪರಿಶೀಲಿಸಿದರು. ಕೇಂದ್ರೀಯ ಪೊಲೀಸ್ ಪಡೆ ಸೇರಿದಂತೆ ವಿವಿಧ ಭದ್ರತಾ ತುಕಡಿಗಳನ್ನು ಸಂಬಂಧಿಸಿದ ಮತಗಟ್ಟೆಗಳಿಗೆ ಕಳಿಸುವ ವ್ಯವಸ್ಥೆ ಮಾಡಿದರು.