Tumakur : ಮನೆ ಮನೆಗೆ ಪಿಂಚಣಿ ಆದೇಶ ಪತ್ರ ವಿತರಣೆ
ಇಡೀ ಜಿಲ್ಲೆಯಲ್ಲಿ ಶಿರಾ ತಾಲೂಕಿನಲ್ಲಿ ಸುಮಾರು 5000 ಕ್ಕೂ ಹೆಚ್ಚು ಪಿಂಚಣಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಗಿದ್ದು, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಇತರೇ ಯೋಜನೆಗಳನ್ನು ಫಲಾನುಭವಿಗಳ ಮನೆ ಮನೆಗೆ ಹೋಗಿ ತಲುಪಿಸಿ ನಂಬರ್ ಒನ್ ಸ್ಥಾನ ಗಳಿಸಿದೆ. ಇದಕ್ಕೆ ಶ್ರಮಿಸಿದ ತಾಲೂಕು ಆಡಳಿತಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಶಿರಾ : ಇಡೀ ಜಿಲ್ಲೆಯಲ್ಲಿ ಶಿರಾ ತಾಲೂಕಿನಲ್ಲಿ ಸುಮಾರು 5000 ಕ್ಕೂ ಹೆಚ್ಚು ಪಿಂಚಣಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಗಿದ್ದು, ಅಂಗವಿಕಲರ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಇತರೇ ಯೋಜನೆಗಳನ್ನು ಫಲಾನುಭವಿಗಳ ಮನೆ ಮನೆಗೆ ಹೋಗಿ ತಲುಪಿಸಿ ನಂಬರ್ ಒನ್ ಸ್ಥಾನ ಗಳಿಸಿದೆ. ಇದಕ್ಕೆ ಶ್ರಮಿಸಿದ ತಾಲೂಕು ಆಡಳಿತಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಹೇಳಿದರು.
ಸೋಮವಾರ ತಾಲೂಕಿನ ಲಕ್ಷ್ಮೀ ಸಾಗರ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಪ್ರವಾಸ ಮಾಡುವಾಗ ಯಾರಾದರೂ ಪಿಂಚಣಿ ಸಮಸ್ಯೆ ಬಗ್ಗೆ ಹೇಳಿದಾಗ ವಿಷಯವನ್ನು ತಹಶೀಲ್ದಾರ್ ಅವರಿಗೆ ತಿಳಿಸಿದ ತಕ್ಷಣ ಕ್ರಮ ಕೈ ಗೊಂಡು ಕೂಡಲೇ ಸ್ಥಳದಲ್ಲಿಯೇ ಫಲಾನಭವಿಗಳಿಗೆ ಪಿಂಚಣಿ ಆದೇಶ ಪತ್ರ ನೀಡಲಾಗಿದೆ. ಸರಕಾರದಿಂದ ಬರುವ ಯೋಜನೆಗಳನ್ನು ತಾಲ್ಲೂಕು ಆಡಳಿತದಿಂದ ಜನರಿಗೆ ತಲುಪಿಸುವ ಕಾರ್ಯದಲ್ಲಿ ಶ್ರಮವಹಿಸಿ ಕಾಳಜಿ ವಹಿಸಿ ಅವರ ಹಕ್ಕುಗಳನ್ನು ಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ತಹಸೀಲ್ದಾರ್ ಮಮತ ಮಾತನಾಡಿ, ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿಯೇ ಹಾಜರಿದ್ದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುತ್ತಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತಂದು ಪರಿಹರಿಸಿಕೊಳ್ಳಬೇಕು. ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು. ಸುಮಾರು 162 ಪಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರ, 20 ಫಲಾನುಭವಿಗಳಿಗೆ ಸಾಗುವಳಿ ಪತ್ರ, 5 ಫಲಾನುಭವಿಗಳಿಗೆ ಖಾತೆ ಮಾಡಿಕೊಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಲಕ್ಷಿತ್ರೕಸಾಗರ ಗ್ರಾ.ಪಂ ಅಧ್ಯಕ್ಷ ಮೀಠ್ಯಾನಾಯ್ಕ, ಉಪಾಧ್ಯಕ್ಷೆ ಪದ್ಮ, ಸಹಾಯಕ ಕೃಷಿ ನಿರ್ದೇಶಕ ರಂಗನಾಥ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಅನಂತರಾಜು, ಗ್ರೇಡ್-2 ತಹಶೀಲ್ದಾರ್ ಮಂಜುನಾಥ್, ವಲಯ ಅರಣ್ಯಾಧಿಕಾರಿ ನವನೀತ್, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನ್, ಆಹಾರ ಇಲಾಖೆಯ ಶಿರಸ್ತೇದಾರ್ ನಾಗರಾಜು, ಕಸಬಾ ಹೋಬಳಿ ಕಂದಾಯ ವೃತ್ತ ನಿರೀಕ್ಷಕ ಮಂಜುನಾಥ್, ಮುಖಂಡರಾದ ರಾಮಣ್ಣ, ಶಿವಾನಂದ ಸ್ವಾಮಿ, ಮಹಾಂತೇಶ್ ಸೇರಿದಂತೆ ಹಲವರು ಹಾಜರಿದ್ದರು.