ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್‌ ವಿತರಣೆ

ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಪಡೆಯಲು ಉಪಯುಕ್ತವಾಗಲೆಂದು ಟ್ಯಾಬ್‌ಗಳನ್ನು ನೀಡಲಾಗುತ್ತಿದ್ದು ಅದರಂತೆ ತಿಪಟೂರಿನ ಕಾರ್ಮಿಕ ಇಲಾಖೆಯಲ್ಲಿ ಲೇಬರ್‌ ಇನ್ಸ್‌ಪೆಕ್ಟರ್‌ ಕೆ.ಎನ್‌. ಸುಶೀಲಾರವರು ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್‌ ವಿತರಿಸಿದರು.

Distribution of tab to children of construction workers snr

ತಿಪಟೂರು: ರಾಜ್ಯ ಸರ್ಕಾರದ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಣಿಯಾದ ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಪಡೆಯಲು ಉಪಯುಕ್ತವಾಗಲೆಂದು ಟ್ಯಾಬ್‌ಗಳನ್ನು ನೀಡಲಾಗುತ್ತಿದ್ದು ಅದರಂತೆ ತಿಪಟೂರಿನ ಕಾರ್ಮಿಕ ಇಲಾಖೆಯಲ್ಲಿ ಲೇಬರ್‌ ಇನ್ಸ್‌ಪೆಕ್ಟರ್‌ ಕೆ.ಎನ್‌. ಸುಶೀಲಾರವರು ಕೂಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್‌ ವಿತರಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಸರ್ವೇಶ್‌ ಸೇರಿದಂತೆ ಫಲಾನುಭವಿಗಳಿದ್ದರು.

ರಜಾ ದಿನಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚುವರಿ ವೇತನ

ಬೆಂಗಳೂರು (ಡಿ.17):  ರಾಜ್ಯದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಬಸ್ ಡ್ರೈವರ್, ಕಂಡಕ್ಟರ್ ಗಳ ಕೊರತೆ ಹಿನ್ನಲೆಯಲ್ಲಿ ಹಬ್ಬ, ಜಾತ್ರೆ, ಉತ್ಸವ ಮತ್ತು ಇತರೆ ಧಾರ್ಮಿಕ ಆಚರಣೆಗಳ ವೇಳೆ ಪ್ರಯಾಣಿಕರಿಗೆ ಸೇವೆ ನೀಡುವುದು ತೀವ್ರ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಮಾಡಿಕೊಳ್ಳದಿದ್ದರೂ ಪ್ರಯಾಣಿಕರಿಗೆ ಸೇವೆಯನ್ನು ಕೊಡಲು ಮುಂದಾಗಿರುವ ಸಾರಿಗೆ ಇಲಾಖೆಯು ಹಬ್ಬ ಮತ್ತು ರಜಾದಿನಗಳಲ್ಲಿ ಹೆಚ್ಚುವರಿಯಾಗಿ ಕೆಲಸ ಮಾಡುವ ಸಿಬ್ಬಂದಿಗೆ ಹೆಚ್ಚುವರಿ ವೇತನವನ್ನು ನೀಡಲು ಮುಂದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣಿಕರಿಗೆ ಗುಣಮಟ್ಟದ ಸೇವೆಯನ್ನು ನೀಡಲು ಸಿಬ್ಬಂದಿ ಕೊರತೆಯಾಗಿದೆ. ಹಲವು ವರ್ಷಗಳಿಂದ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ ಎಂಬ ನೆಪವನ್ನೊಡ್ಡಿ ನೌಕರರಿಗೆ ಸೌಲಭ್ಯಗಳನ್ನು ನೀಡದೇ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. ಹಲವು ವರ್ಷಗಳ ಹಿಂದೆಯೇ ಚಾಲಕ ಮತ್ತು ನಿರ್ವಾಹಕ ಕೆಲಸ ಮಾಡುವ ಎರಡೂ ಕೌಶಲ್ಯಗಳನ್ನು ಹೊಂದಿರುವ ವ್ಯಕ್ತಿಗಳನ್ನು ನೌಕರಿಗೆ ಆಯ್ಕೆ ಮಾಡಿಕೊಳ್ಳುತ್ತಿದೆ. ಆದರೆ, ಇತ್ತೀಚೆಗಿನ ಕೆಲವು ವರ್ಷಗಳಿಂದ ನೇಮಕಾತಿ ಮಾಡಿಕೊಳ್ಳದೇ ಲಭ್ಯವಿರುವ ಸಿಬ್ಬಂದಿಗೆ ಹೆಚ್ಚಿನ ಕೆಲಸವನ್ನು ಕೊಡುತ್ತಿದೆ. ಈ ಕ್ರಮವನ್ನು ವಿರೋಧಿಸಿ ನೌಕರರು ಪ್ರತಿಭಟನೆ ಮಾಡಿದ್ದರಿಂದ ಹಿರಿಯ ಅಧಿಕಾರಿಗಳು ಕಿರುಕುಳ ನೀಡುವುದನ್ನು ಕಡಿಮೆ ಮಾಡಿದ್ದರು.

ಸಾರಿಗೆ ನೌಕರರಿಗೆ ವೇತನ ಪರಿಷ್ಕರಣೆ ಸರ್ಕಾರ ಬದ್ಧ: ಸಚಿವ ಶ್ರೀರಾಮುಲು

ಹೆಚ್ಚುವರಿ ಕೆಲಸ ಹಣವೂ ಅಧಿಕ: ಇನ್ನು ವರ್ಷದ ಕೊನೆಯ ತಿಂಗಳು ಆಗಿರುವುದರಿಂದ ಕಾನೂನಿನ ನಿಯಮಾವಳಿ ಅನ್ವಯ ಎಲ್ಲ ನೌಕರರಿಗೆ ಲಭ್ಯವಿರುವ ರಜೆ ಸೌಲಭ್ಯಗಳನ್ನು ಕೊಡಲೇಬೇಕು. ಆದರೆ, ಕಳೆದ 11 ತಿಂಗಳು ರಜೆ ಸೌಲಭ್ಯ ಕೊಡದೇ ಕೆಲಸ ಮಾಡಿಸಿಕೊಂಡಿದ್ದ ಸಾರಿಗೆ ಇಲಾಖೆಗೆ ಈಗ ಅನಿವಾರ್ಯವಾಗಿ ರಜೆ ಕೊಡಬೇಕಾದ ಅನಿವಾರ್ಯತೆ ಬಂದಿದೆ. ಇದೇ ವೇಳೆ ವಿವಿಧ ಗ್ರಾಮೀಣ ಜಾತ್ರೆಗಳು, ಹಬ್ಬಗಳು, ಧಾರ್ಮಿಕ ಕಾರ್ಯಕ್ರಮಗಳು, ರಜಾ ದಿನಗಳು ಹಾಗೂ ಉತ್ಸವಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕೆಲಸ ಮಾಡಲು ಸಿಬ್ಬಂದಿ ಅಗತ್ಯತೆ ಹೆಚ್ಚಾಗಿದೆ. ಆದರೆ, ಈಗಿರುವ ರಜೆಗಳನ್ನು ಕೊಟ್ಟರೆ ಪ್ರಯಾಣಿಕರಿಗೆ ಸೇವೆ ಕೊಡುವುದು ಮತ್ತು ಆದಾಯಕ್ಕೆ ಸಮಸ್ಯೆ ಆಗುವ ಸಾಧ್ಯತೆಯಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಜೆ ಮತ್ತು ಹಬ್ಬದ ದಿನಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಹೆಚ್ಚುವರಿ ವೇತನ ನೀಡುವುದಾಗಿ ಸುತ್ತೋಲೆಯನ್ನು ಹೊರಡಿಸಿದೆ. ಈ ಮೂಲಕ ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ಹಣ ನೀಡಲು ತಂತ್ರ ರೂಪಿಸಿದ್ದು, ಇದು ಯಶಸ್ವಿಯಾಗುವುದೇ ಎಂದು ಕಾದು ನೋಡಬೇಕಿದೆ.

ಸಾರಿಗೆ ನೌಕರರ ಮುಷ್ಕರಕ್ಕೆ ನಿರ್ಧಾರ: ಕಳೆದ ವರ್ಷ ಹಾಗೂ ಈ ವರ್ಷದ ಆರಂಭದಲ್ಲಿ ಸಾರಿಗೆ ನೌಕರರು ಬೃಹತ್‌ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ತಮ್ಮ 10 ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಡ ಹೇರಿದ್ದರು. ಈ ವೇಳೆ ಪ್ರತಿಭಟನಾ ನಿರತ ಸಿಬ್ಬಂದಿಯ 9 ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್‌ ಪಡೆದಿದ್ದರು. ಆದರೆ, ಈಗ ಸುಮಾರು ಏಳೆಂಟು ತಿಂಗಳು ಕಳೆದರೂ ಒಂದೇ ಒಂದು ಭರವಸೆಯನ್ನೂ ಸರ್ಕಾರ ಈಡೇರಿಸಿಲ್ಲ. ಹೀಗಾಗಿ, ಬೆಳಗಾವಿ ಅಧಿವೇಶನದ ವೇಳೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವ ಮೂಲಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟು ಹಿಡಿದು ಕುಳಿತುಕೊಳ್ಳುವ ಸಾಧ್ಯತೆ ಕಂಡುಬರುತ್ತಿದೆ.

ಬೇಡಿಕೆ ಈಡೇರಿಕೆಗೆ ಮತ್ತೆ ಕೆಎಸ್‌ಆರ್‌ಟಿಸಿ ನೌಕರರಿಂದ ಹೋರಾಟ

ಮುಷ್ಕರ ದಿನಾಂಕ್ಕೆ ಪೂರ್ವಭಾವಿ ಸಭೆ: ಕೆಎಸ್‌ಆರ್‌ಟಿಸಿ ನೌಕರರ ಸಂಘದ ಗೌರವಾಧ್ಯಕ್ಷ ಹಾಗೂ ಬೆಂಗಳೂರು ನಗರ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮತ್ತು  ಕೆಎಸ್ಆರ್ಟಿಸಿ ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ  ಅನಂತ್ ಸುಬ್ಬರಾವ್ ಹಲವು ಕಾರ್ಯಕರ್ತರನ್ನು ಒಳಗೊಂಡ ಸಭೆ ನಡೆಸಿದ್ದಾರೆ. ಕಳೆದೆರೆಡು ಬಾರಿ ಮುಷ್ಕರ ಮಾಡಿದರೂ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಹತ್ತು ಬೇಡಿಕೆಗಳಲ್ಲಿ ಒಂಬತ್ತು ಬೇಡಿಕೆಗಳನ್ನು ಈಡೇರಿಸ್ತಿವಿ ಎಂದು ಮಾತು ಕೊಟ್ಟಿದ್ದ ರಾಜ್ಯ ಸರ್ಕಾರ ಈವರೆಗೆ ಒಂದೇ ಒಂದು ಬೇಡಿಕೆಯನ್ನುಈಡೇರಿಸಿಲ್ಲ. ಆದ್ದರಿಂದ ಮತ್ತೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಮುಷ್ಕರದ ದಿನಾಂಕ ಫಿಕ್ಸ್‌ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

Latest Videos
Follow Us:
Download App:
  • android
  • ios