Asianet Suvarna News Asianet Suvarna News

ಚಿತ್ರದುರ್ಗ: ಕೆಟ್ಟ ಮೇಲೆ ಬುದ್ದಿ ಬಂತು ಅನ್ನೋ ಹಾಗೆ ಅಭಿವೃದ್ಧಿಗೆ ಮುಂದಾದ ಸರ್ಕಾರ..!

ಬಡಾವಣೆ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಪಣತೊಟ್ಟಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆ ನೆರವೇರಿಸುವ ಮೂಲಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. 

District Administration Starts for Development in Chitradurga grg
Author
First Published Sep 6, 2023, 9:00 PM IST

ವರದಿ: ಕಿರಣ್ಎಲ್ ತೊಡರನಾಳ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿತ್ರದುರ್ಗ

ಚಿತ್ರದುರ್ಗ(ಸೆ.06):  ಕವಾಡಿಗರಹಟ್ಟಿ ಕಲುಷಿತ ನೀರು ಸೇವನೆ ದುತಂತ ಪ್ರಕರಣ ಇಡೀ ರಾಜ್ಯದಲ್ಲಿಯೇ ದೊಡ್ಡ ಸದ್ದು ಮಾಡಿತ್ತು. ಆದ್ರೆ ಈಗ ಅದೇ ಬಡಾವಣೆ ಅಭಿವೃದ್ಧಿಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಪಣತೊಟ್ಟಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆ ನೆರವೇರಿಸುವ ಮೂಲಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..

ಹೀಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲು ಭೂಮಿ ಪೂಜೆ ನೆರವೇರಿಸ್ತಿರೋ ಜನಪ್ರತಿನಿಧಿಗಳು. ಈ ದೃಶ್ಯಗಳು ಕಂಡು ಬಂದಿದ್ದು ಚಿತ್ರದುರ್ಗ ಕೂದಲೆಳೆ ಅಂತರದಲ್ಲಿರುವ ಕವಾಡಿಗರಹಟ್ಟಿ ಗ್ರಾಮದ ಬಳಿ. ಕಳೆದ ಒಂದು ತಿಂಗಳ ಹಿಂದಷ್ಟೇ ಕಲುಷಿತ ನೀರು ಸೇವೆನೆಯಿಂದ ಸುಮಾರು  6 ಮಂದಿ ಮೃತಪಟ್ಟಿದ್ದ ಪ್ರಕರಣ ಇಡೀ ರಾಜ್ಯದಲ್ಲಿಯೇ ದೊಡ್ಡ ಸದ್ದು ಮಾಡಿತ್ತು. ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ, ಘಟನೆ ನಡೆದ ಬಳಿಕ ಪೈಪ್ ಲೈನ್ ಹಾಗೂ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣಕ್ಕೆ ನಗರಸಭೆ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಮುಂದಾಗಿದೆ.  

ಸಿಐಡಿ ಪೊಲೀಸಪ್ಪನ ಕಾಮಪುರಾಣ, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಪತ್ನಿ: ಶತ್ರುವಿಗೂ ಬೇಡ ಇಂಥ ಗಂಡ

ನಗರಸಭೆಯ ರೂ 3.07 ಕೋಟಿ ಅನುದಾನದಲ್ಲಿ, ಇಡೀ ಕವಾಡಿಗರ ಹಟ್ಟಿಗೆ ಹೊಸದಾಗಿ ಪೈಪ್ ಲೈನ್ ಅಳವಡಿಕೆ, ಮನೆ ಮನೆಗೆ ಹೊಸ ನಳದ ಸಂಪರ್ಕ, 2.5 ಲಕ್ಷ ಲೀಟರ್ ಸಾಮರ್ಥ್ಯ ಓವರ್ ಹಡ್ ಟ್ಯಾಂಕ್ ಹಾಗೂ ಹಿರೇಕಂದವಾಡಿ ನೀರು ಶುದ್ದೀಕರಣ ಘಟಕದ ರಿಪೇರಿ ಮಾಡಲಾಗುವುದು. ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ರೂ.16.50 ಲಕ್ಷ ಅನುದಾನದಲ್ಲಿ, ಕವಾಡಿಗರ ಹಟ್ಟಿಯಲ್ಲಿ ಹೊಸ ಬೋರವೆಲ್ ಕೊರೆಯುವುದರೊಂದಿಗೆ, 1 ಸಾವಿರ ಲೀಟರ್ ಸಾಮರ್ಥ್ಯದ ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ ಹಾಗೂ 5 ವರ್ಷ ಘಟಕದ ನಿರ್ವಹಣೆಯನ್ನು ಇಲಾಖೆ ಮಾಡಲಿದೆ ಎಂದು ಉಸ್ತುವಾರಿ ಸಚಿವ ಸುಧಾಕರ್ ತಿಳಿಸಿದರು.

ಇನ್ನೂ ಕವಾಡಿಗರಹಟ್ಟಿ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡಿರೋದು ಸಂತಸದ ವಿಷಯ. ಆದಷ್ಟು ಬೇಗ ಅಭಿವೃದ್ಧಿ ಕಾಮಗಾರಿ ಮುಗಿದು ನಮ್ಮ ಏರಿಯಾ ಜನರಿಗೆ ಅನುಕೂಲ ಆಗಬೇಕು. ಕಳೆದ ಒಂದು ತಿಂಗಳಿನಿಂದಲೂ ನಮ್ಮ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿದ್ದಾರೆ. ಅದೇ ರೀತಿ ಕಾಮಗಾರಿ ಪೂರ್ಣಗೊಳಿಸುವಲ್ಲಿಯೂ ಮುಖ್ಯ ಪಾತ್ರವಹಿಸಿ ಶೀಘ್ರವೇ ಅಭಿವೃದ್ಧಿ ಕಾಮಗಾರಿ ಮುಗಿಸಲಿ ಎಂಬುದು ಸ್ಥಳೀಯ ನಿವಾಸಿಗಳ ಆಗ್ರಹ.

ಮಾರುತಿ ಸ್ಥಳೀಯರು ಕವಾಡಿಗರಹಟ್ಟಿ

ಒಟ್ನಲ್ಲಿ ಕವಾಡಿಗರಹಟ್ಟಿಯಲ್ಲಿ ಹಿಂದೆ ನಡೆದ ದುರ್ಘಟನೆ ಮುಂದೆಂದೂ ನಡೆಯಬಾರದು ಎಂದು ಏರಿಯಾ ಅಭಿವೃದ್ಧಿ ಮಾಡಲು ಸರ್ಕಾರ ಹಾಗೂ ಜಿಲ್ಲಾಡಳಿತ ಮುಂದಾಗಿರೋದು ಖುಷಿ ವಿಚಾರ. ಆದಷ್ಟು ಬೇಗ ಕಾಮಗಾರಿ ಮುಗಿಸಿ‌ ಅಧಿಕಾರಿಗಳು ಅಲ್ಲಿನ ಜನರ ನೆಮ್ಮದಿ ಕಾಪಾಡಬೇಕಿದೆ......

Follow Us:
Download App:
  • android
  • ios