Asianet Suvarna News Asianet Suvarna News

ಬೀದರ್‌ ಮೆಡಿಕಲ್ ಕಾಲೇಜಿಗೆ ಸಚಿವ ಸಂಪುಟದ ಅಸ್ತು: ಡಿಸಿ ಕೂರ್ಮಾರಾವ್

ಸರ್ಕಾರ ಜಿಲ್ಲೆಗೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಂಜೂರು ಮಾಡಿರುವುದು ಹೆಮ್ಮೆಯ ಸಂಗತಿ| ಶೇ.60ರಷ್ಟು ಕೇಂದ್ರ, ರಾಜ್ಯದ ಪಾಲು ಶೇ.40| 2021 ರಲ್ಲಿ ವಿದ್ಯಾರ್ಥಿಗಳ ಪ್ರವೇಶ ಆರಂಭವಾಗುವ ನಿರೀಕ್ಷೆ|

District Collector Koormarao Talks Over Bidar Medical College
Author
Bengaluru, First Published Jan 27, 2020, 2:46 PM IST

ಬೀದರ್‌(ಜ.27): ಸರ್ಕಾರವು ಜಿಲ್ಲೆಗೆ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಮಂಜೂರು ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಈ ಮೆಡಿಕಲ್ ಕಾಲೇಜು ಕಟ್ಟಡ, ವಸತಿಗೃಹಗಳು ಹಾಗೂ ವಿದ್ಯಾರ್ಥಿಗಳ ವಸತಿ ನಿಲಯಕ್ಕಾಗಿ 325 ಕೋಟಿ ರು. ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ. 

ಇದರಲ್ಲಿ ಕೇಂದ್ರದ ಪಾಲು ಶೇ.60ರಷ್ಟು ಮತ್ತು ರಾಜ್ಯದ ಪಾಲು ಶೇ.40ರಷ್ಟು ಇರುತ್ತದೆ. ಕಟ್ಟಡದ ಕಾಮಗಾರಿಗೆ ಸಚಿವ ಸಂಪುಟದ ಅನುಮೋದನೆ ದೊರಕಿದ್ದು, ಶೀಘ್ರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಟ್ಟಡ ಕಾಮಗಾರಿ ಆರಂಭಿಸಲಾಗುವುದು. ಜೊತೆಗೆ ಮಾನವ ಸಂಪನ್ಮೂಲ ಮಂಜೂರಾತಿಗೆ ಸಲ್ಲಿಸಿದ ಪ್ರಸ್ತಾವನೆಗೂ ಸರ್ಕಾರ ಒಪ್ಪಿಗೆ ನೀಡಿದ್ದು, ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿಯನ್ನು ಜೂನ್ ನಲ್ಲಿ ಆರಂಭಿಸಲಾಗುವುದು. ತದನಂತರ ಭಾರತೀಯ ವೈದ್ಯಕೀಯ ಸಂಸ್ಥೆಯ ತಂಡ ಪರಿವೀಕ್ಷಣೆಗೆ ಆಗಮಿಸಲಿದ್ದು, 2021 ರಲ್ಲಿ ವಿದ್ಯಾರ್ಥಿಗಳ ಪ್ರವೇಶ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಆಶಯ ವ್ಯಕ್ತಪಡಿಸಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ 5 ಲಕ್ಷ ರು.ವರೆಗೆ ಮತ್ತು ಉಚಿತವಾಗಿ ಚಿಕಿತ್ಸೆ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳು 1.50 ಲಕ್ಷ ರು.ವರೆಗೂ ಸಹಪಾವತಿಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಿದರು. 

ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ, ಜಿಪಂ ಉಪಾಧ್ಯಕ್ಷ ಗಿರಿಜಮ್ಮ ಸದಾಶಿವಪ್ಪ ರೊಟ್ನಡಗಿ, ತಾಪಂ ಅಧ್ಯಕ್ಷ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಜಿಪಂ ಸಿಇಓ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಉಪಸ್ಥಿತರಿದ್ದರು. 

ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ನಗರಸಭೆ ಪೌರಾಯುಕ್ತ ರಮೇಶ ಸುಣ ಗಾರ, ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿ ದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿವಿಧ ಶಾಲೆಗಳ ಮಕ್ಕಳು, ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. 
 

Follow Us:
Download App:
  • android
  • ios