ಚಾಮುಂಡಿಬೆಟ್ಟಕ್ಕೆ ಜತೆಯಾಗಿ ಆಗಮಿಸಿದ ಇಬ್ಬರೂ ನಾಯಕರು ದೇವಸ್ಥಾನದ ಎದುರು ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು ಹಾಗೂ ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಇದಕ್ಕೂ ಮೊದಲು ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ಬಳಿಕ ಇಬ್ಬರೂ ಜತೆಯಾಗಿ ಚಾಮುಂಡಿಬೆಟ್ಟಕ್ಕೆ ತೆರಳಿದರು.

ಮೈಸೂರು(ಮೇ.10): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತದಾನಕ್ಕೂ ಮುನ್ನ ದಿನವಾದ ಮಂಗಳವಾರ ಮಧ್ಯಾಹ್ನ ಜತೆಯಾಗಿ ಚಾಮುಂಡಿಬೆಟ್ಟಕ್ಕೆ ಆಗಮಿಸಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿಬೆಟ್ಟಕ್ಕೆ ಜತೆಯಾಗಿ ಆಗಮಿಸಿದ ಇಬ್ಬರೂ ನಾಯಕರು ದೇವಸ್ಥಾನದ ಎದುರು ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು ಹಾಗೂ ಒಟ್ಟಿಗೆ ಈಡುಗಾಯಿ ಒಡೆಯುವ ಮೂಲಕ ದೇವರಿಗೆ ಹರಕೆ ಸಲ್ಲಿಸಿದರು. ಇದಕ್ಕೂ ಮೊದಲು ಬೆಂಗಳೂರಿನಿಂದ ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದ ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ಬಳಿಕ ಇಬ್ಬರೂ ಜತೆಯಾಗಿ ಚಾಮುಂಡಿಬೆಟ್ಟಕ್ಕೆ ತೆರಳಿದರು.

ಸಿದ್ದು, ಡಿಕೆಶಿ ಸೋಲಿಸಲು ಕಾಂಗ್ರೆಸ್‌ನಲ್ಲೇ ಗುಂಪು ಸಿದ್ಧವಾಗಿದೆ: ನಳಿನ್‌ ಕುಮಾರ್‌ ಕಟೀಲ್‌

ದೇಗುಲದ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಇಬ್ಬರೂ ನಾಯಕರಿಗೆ ಹೂವಿನ ಹಾರ ಹಾಕಿದ ಅರ್ಚಕರು ಶುಭ ಹಾರೈಸಿದರು. ಈ ವೇಳೆ ಗರ್ಭಗುಡಿಯಲ್ಲಿ ಇಬ್ಬರೂ ನಾಯಕರು ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಪ್ರದರ್ಶಿಸಿದರು. ನಂತರ ದೇವಸ್ಥಾನದ ಮುಂದೆ ಈಡುಗಾಯಿ ಒಡೆದರು. ತರುವಾಯ ಇಬ್ಬರೂ ಕೈ ಎತ್ತುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ.ಜೆ.ಜಾಜ್‌ರ್‍, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ನಗರಾಧ್ಯಕ್ಷ ಆರ್‌.ಮೂರ್ತಿ ಮತ್ತಿತರರು ಸಾಥ್‌ ನೀಡಿದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ, ನಾನು ಮತ್ತು ಡಿ.ಕೆ.ಶಿವಕುಮಾರ್‌ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಆಶೀರ್ವಾದ ಪಡೆಯಲು ಬಂದಿದ್ದೇವೆ ಎಂದರು.

ಕಾಂಗ್ರೆಸ್‌ಗೆ ಜನ ಆಶೀರ್ವಾದ ಮಾಡುವ ಆಶಯ ಇದೆ. ಜನ ಬದಲಾವಣೆ ತೀರ್ಪು ನೀಡುತ್ತಾರೆ. ನಾವಿಬ್ಬರೂ ಒಟ್ಟಿಗೆ ಪ್ರಾರ್ಥನೆ ಮಾಡಿದ್ದೇವೆ. 150 ಸ್ಥಾನ ಬರಲಿ ಎಂದು ಪ್ರಾರ್ಥಿಸಿದ್ದೇವೆ. ದೊಡ್ಡ ಅಂತರದಲ್ಲಿ ಗೆಲ್ಲುವ ಆಶಯ ಇದೆ. ಈಗಾಗಲೇ ಮತದಾರರಿಗೆ ಗ್ಯಾರೆಂಟಿ ಕಾರ್ಡ್‌ ನೀಡಿದ್ದೇವೆ. ನಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ನಾವು ಕೊಟ್ಟ ಗ್ಯಾರೆಂಟಿಯನ್ನು ಜಾರಿಗೊಳಿಸುವ ಸಂಕಲ್ಪ ಮಾಡಿದ್ದೇವೆ ಎಂದು ಹೇಳಿದರು.

Kanakapura Constituency: ನನಗೆ ಸಿಎಂ ಆಗೋ ಅರ್ಹತೆ ಇದೆಯೆಂದು ಹೇಳಿಕೊಂಡ ಡಿಕೆಶಿ!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾತನಾಡಿ, ಇಡೀ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೆ, ಜನರಿಗೆ ದುಃಖ ಬಂದರೆ ಅವೆಲ್ಲವನ್ನು ದೂರ ಮಾಡು ಎಂದು ನಾಡದೇವತೆಗೆ ಪ್ರಾರ್ಥನೆ ಸಲ್ಲಿಸಲು ಇಲ್ಲಿಗೆ ಬಂದಿದ್ದೇವೆ ಅಂದರು.

ಸದ್ಯ ಸರ್ಕಾರದ ಬಗ್ಗೆ ಜನರಿಗಿರುವ ದುಃಖವನ್ನು ದೇವಿ ದೂರ ಮಾಡುತ್ತಾಳೆ ಎಂಬ ನಂಬಿಕೆ ಇದೆ. ಮನಸ್ಸಿದ್ದಲ್ಲಿ ಮಾರ್ಗ, ಭಕ್ತಿ ಇದ್ದಲಿ ಭಗವಂತ ಇದ್ದಾನೆ. ಭಕ್ತಿಪೂರ್ವಕವಾಗಿ ಪ್ರಾರ್ಥನೆ ಮಾಡಿದ್ದೇವೆ. ನಾವು ಕೊಟ್ಟಗ್ಯಾರೆಂಟಿಯನ್ನು ದೇವಿ ಸನ್ನಿಧಾನದಲ್ಲಿ ನಿಂತು ಹೇಳುತ್ತಿದ್ದೇನೆ. ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ. ಖಂಡಿತ ಮೇ 14ರ ನಂತರ ಶುಭದಿನ ಬಂದೇ ಬರುತ್ತದೆ ಎಂದು ಹೇಳಿದರು.