ರಾಮನಗರ : ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ

ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರತಿಭಟನೆ ಹಾಗೂ ಗಲಭೆ ನಡೆದಿದ್ದು, ಈ ನಿಟ್ಟಿನಲ್ಲಿ ರಾಮನಗರ ಜಿಲ್ಲೆಯಾದ್ಯಂತ ಶಾಲಾ ಕಾಲೆಜುಗಳಿಗೆ ರಕೆ ಘೋಷಿಸಲಾಗಿದೆ. 

DK Shivakumar Arrest Holiday Declared To School Colleges in Ramanagara

ರಾಮನಗರ [ಸೆ.04]: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ  ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. 

ಹಲವೆಡೆ ದುಷ್ಕರ್ಮಿಗಳು ಬಸ್ ಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸುತ್ತಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಎಮ್.ಎಸ್ ಅರ್ಚನಾ ರಜೆ ಘೋಷಿಸಿ ಆದೇಶ ನೀಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಗಳವಾರ ರಾತ್ರಿ ಅಕ್ರಮ ಹಣ ಸಂಗ್ರಹ ಆರೋಪದ ಅಡಿಯಲ್ಲಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಇದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಗಲಭೆ ಸೃಷ್ಟಿಸಿದ್ದರು.

Latest Videos
Follow Us:
Download App:
  • android
  • ios