ಮಂಡ್ಯ (ಸೆ.11): ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆಯಲ್ಲಿ ಅವರ ಆರೋಗ್ಯ ಹಾಗೂ ಬಿಡುಗಡೆಗೆ ಮಂಡ್ಯದಲ್ಲಿ ವಿನೂತನ ಚಳುವಳಿ ನಡೆಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಒಟ್ಟು 50ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸೇರಿ ರಕ್ತದಾನ ಮಾಡುವ ಮೂಲಕ ಚಳುವಳಿಗೆ ಚಾಲನೆ ನೀಡಿದರು.

ಡಿಕೆ.ಶಿವಕುಮಾರ್ ಅವರು ಶೀಘ್ರ ಬಿಡುಗಡೆಯಾಗಬೇಕು.  ದ್ವೇಷದ ರಾಜಕೀಯ ಇಲ್ಲಿಗೆ ಅಳಿಯಬೇಕು. ಡಿ.ಕೆ.ಶಿವಕುಮಾರ್ ಅವರನ್ನು ಆದಷ್ಟು ಬೇಗ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.