ಮೈಸೂರು [ಸೆ.05] : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ಸುದ್ದಿ ಕೇಳಿ ನನಗೆ ಆಘಾತವಾಗಿದೆ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಹೇಳಿದರು. 

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಜಿ.ಟಿ.ದೇವೇಗೌಡ ಅಕ್ರಮ ಹಣ ಸಂಗ್ರಹ ಪ್ರಕರಣದಲ್ಲಿ ಇಡಿ ಶಿವಕುಮಾರ್ ಅವರನ್ನು ಬಂಧಿಸಿದ್ದು, ಅದಕ್ಕೆ ಅವರು ಎದೆಗುಮದಬೇಕಿಲ್ಲ ಎಂದು  ಹೇಳಿದರು.

ಡಿಕೆ ಶಿವಕುಮಾರ್ ಅವರಿಗೆ ಎಲ್ಲವನ್ನೂ ಜಯಿಸುವ ಶಕ್ತಿ ಇದೆ. ಅವರು ಎಲ್ಲಾ ಸಂಕಷ್ಟಗಳಿಂದ ಮುಕ್ತವಾಗಲಿ ಎಂದು ಚಾಮುಂಡೇಶ್ವರಿ ದೇವಿಯಲ್ಲಿ ನಾನು ಪ್ರಾರ್ಥಿಸುತ್ತೇನೆ. ದೇವತೆ ಹೆಚ್ಚಿನ ಶಕ್ತಿ ನೀಡಲಿ ಎಂದು ಜಿ.ಟಿ.ದೇವೇಗೌಡ ಹೇಳಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಕ್ರಮ ಹಣ ಸಂಗ್ರಹಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಂಗಳವಾರ ಸಂಜೆ ಇಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು.