ಸಂಸದರು, ಸಚಿವರು ಮೋದಿ ಮುಂದೆ ಮಾತನಾಡಲು ಹೆದುರುತ್ತಿದ್ದಾರೆ : ಡಿಕೆಶಿ
- ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವರು ಹಾಗೂ ಸಂಸದರಿಗೆ ಧೈರ್ಯ ಮತ್ತು ಬದ್ಧತೆ ಇಲ್ಲ
- ಮೇಕೆದಾಟು ಯೋಜನೆ ವಿಚಾರವಾಗಿ ಪ್ರಧಾನಿ ಮತ್ತು ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ ಒಪ್ಪಿಗೆ ಕೊಡಿಸಲಿ
- ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು
ರಾಮನಗರ (ಆ.16): ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವರು ಹಾಗೂ ಸಂಸದರಿಗೆ ಧೈರ್ಯ ಮತ್ತು ಬದ್ಧತೆ ಇದ್ದರೆ ಮೇಕೆದಾಟು ಯೋಜನೆ ವಿಚಾರವಾಗಿ ಪ್ರಧಾನಿ ಮತ್ತು ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ ಒಪ್ಪಿಗೆ ಕೊಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದರು ಹಾಗೂ ಸಚಿವರು ಮೋದಿ ಮುಂದೆ ಮಾತನಾಡಲು ಹೆದುರುತ್ತಿದ್ದಾರೆ. ಎಲ್ಲಿ ನಮ್ಮ ಸ್ಥಾನಗಳು ಅಧಿಕಾರ ಹೋಗುತ್ತದೆಯೊ ಎಂಬ ಆತಂಕ ಅವರನ್ನು ಕಾಡುತ್ತಿದೆ.
ಸ್ವಾತಂತ್ರ್ಯ ದಿನಾಚರಣೆ ಭಾಷಣದ ವೇಳೆ ಯಡವಟ್ಟು ಮಾಡಿಕೊಂಡ ಡಿಕೆಶಿ, ಜಮೀರ್ ಅಹ್ಮದ್
ಹೀಗಾಗಿಯೇ ಮೇಕೆದಾಟು, ಮಹಾದಾಯಿ ಸೇರಿದಂತೆ ಯಾವುದೇ ವಿಚಾರವಾಗಲಿ ಮಾತನಾಡುವುದಿಲ್ಲ ಎಂದರು.