ಡಿಕೆಶಿ ಅರೆಸ್ಟ್: ಗುರುವಾರ ರಾಮನಗರ ಬಂದ್, ಶಾಲಾ-ಕಾಲೇಜುಗಳ ರಜೆ ಮುಂದುವರಿಕೆ
ಡಿಕೆಶಿ ಬಂಧನ ಖಂಡಿಸಿ ಮತ್ತೆ ನಾಳೆ ರಾಮನಗರ ಬಂದ್ ಗೆ ಕರೆ| ಜಿಲ್ಲೆಯಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್| ರಾಮನಗರದಲ್ಲಿ ಶಾಲಾ-ಕಾಲೇಜುಗಳ ರಜೆ ಮುಂದುವರಿಕೆ| ಜಿಲ್ಲಾಧಿಕಾರಿ ಎಮ್. ಎಸ್. ಅರ್ಚನಾ ಆದೇಶ.
ರಾಮನಗರ, [ಸೆ.04]: ಡಿಕೆ ಶಿವಕುಮಾರ್ ಅವರನ್ನು 10 ದಿನಗಳ ವರೆಗೆ ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತಷ್ಟು ಪ್ರತಿಭಟನೆ ಕಾವು ಏರತೊಡಗಿದೆ.
ಜಿಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ನಾಳೆ ಗುರುವಾರ ರಾಮನಗರ ಜಿಲ್ಲಾ ಬಂದ್ ಗೆ ಕರೆ ನೀಡಿವೆ. ಡಿಕೆಶಿ ಬಂಧನ ಖಂಡಿಸಿ ಇಂದು [ಬುಧವಾರ] ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಜಂಟಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟ್ರಬಲ್ ಶೂಟರ್‌ಗೆ ಬಿಗ್ ಟ್ರಬಲ್: ಇಡಿ ವಶಕ್ಕೆ ಡಿಕೆ ಶಿವಕುಮಾರ್
ಮುಂಜಾಗ್ರತಾ ಕ್ರಮವಾಗಿ ಇಂದು ರಾಮನಗರ ಜಿಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದೀಗ ನಾಳೆಯೂ ಸಹ ರಾಮನಗರದಲ್ಲಿ ಪ್ರತಿಭಟನೆ ಕಾವು ಜೋರಾಗುವ ಎಲ್ಲಾ ಸಾಧ್ಯತೆಗಳಿವೆ.
ಬಂದ್ ಹಿನ್ನೆಲೆ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಮನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಕಾಲೇಜುಗಳಿಗೆ ನಾಳೆಯೂ ರಜೆ ಮುಂದುವರಿಸಿ ಜಿಲ್ಲಾಧಿಕಾರಿ ಎಮ್. ಎಸ್. ಅರ್ಚನಾ ಆದೇಶ ಹೊರಡಿಸಿದ್ದಾರೆ.
ಇಡಿ ವಶದಲ್ಲಿರುವ ಡಿಕೆ ಶಿವಕುಮಾರ್ ಮುಂದಿರುವ ಕಾನೂನು ಆಯ್ಕೆಗಳೇನು?
ಶಾಂತಿಯುತ ಪ್ರತಿಭಟನೆಗೆ ಎಸ್ಪಿ ಮನವಿ
ಪ್ರತಿಭಟನೆ ಬಗ್ಗೆ ಮಾತನಾಡಿರುವ ರಾಮನಗರ ಹೆಚ್ಚುವರಿ ಎಸ್ಪಿ ಅನುಪಮ್ ಅಗರ್ ವಾಲ್, ಅಹಿತಕರ ಘಟನೆ ನಡೆಯದಂತೆ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ. ಶಾಂತಿಯುತ ಪ್ರತಿಭಟನೆಗೆ ಮಾಡಿ. ಸಾರ್ವಜನಿಕ ಆಸ್ತಿ ಪಾಸ್ತಿ ನಾಶ ಮಾಡದಂತೆ ಪ್ರತಿಭಟನಕಾರರಲ್ಲಿ ಮನವಿ ಮಾಡಿದ್ದಾರೆ.
ಪೊಲೀಸ್ ಬಿಗಿಬಂದೋಬಸ್ತ್
ಗುರುವಾರ ರಾಮನಗರದಲ್ಲಿ ಪ್ರತಿಭಟನೆ ಜೋರಾಗುವುದರಿಂದ ಜಿಲ್ಲೆಯಾದ್ಯಂತ ಪೊಲೀಸ್ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದ್ದು, ಡಿಕೆಶಿ ತವರು ಕ್ಷೇತ್ರ ಕನಕಪುರದಲ್ಲಿ ಓರ್ವ ಎಸ್ಪಿ, ಓರ್ವ ಎಎಸ್ಪಿ, ಮೂರು ಜನ ಡಿವೈಎಸ್ಪಿ, 8 ಜನ ಸರ್ಕಲ್ ಇನ್ಸ್ ಪೆಕ್ಟರ್, 3 ಕೆಎಸ್ ಆರ್ ಪಿ , 2 ಡಿಆರ್ ತುಕಡಿ ಹಾಗೂ 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.