ಮೈಸೂರು(ಡಿ.25): ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತಿರಾ ? ಕಳೆದ ಮಾರ್ಚ್‌ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಇನ್ನಾದ್ರು ಜನರು ಓಡಾಡಲು ಬಿಡಿ ಎಂದು ಸಂಸದ ಪ್ರತಾಪ್‌ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು,  ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ. ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿಬಂದಿದ್ದೇನೆ. ಎಲ್ಲ ಕಡೆ ಕೊರೊನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದ್ರೆ ಜನರನ್ನ ಹೆಚ್ಚು ದಿನ‌ ನಿರ್ಬಂಧ ಮಾಡೋಕೆ ಆಗೋಲ್ಲ ಎಂದಿದ್ದಾರೆ.

ಎರಡೂವರೆ ಗಂಟೆ ಪ್ರಯಾಣ: ಬೆಂಗ್ಳೂರು-ಮೈಸೂರು ಹೈಸ್ಪೀಡ್ ರೈಲು DPRಗೆ ಬಿಡ್ಡಿಂಗ್

ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದ್ರೆ ಮಾಸ್ಕ್ ಹೆಸರಿನಲ್ಲಿ ಕಾರು ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಮೈಸೂರಿನಲ್ಲಿ ಸಂಸದ ಪ್ರತಾಪ್‌ಸಿಂಹ ಹೇಳಿಕೆ.

ಮೇಯರ್ ಸ್ಥಾನ ನಮಗೆ ಬೇಕು:

ಮೈಸೂರು ಪಾಲಿಕೆ ಮೇಯರ್ ಚುನಾವಣೆ ವಿಚಾರ. ಈ ಬಾರಿ ಬಿಜೆಪಿಗೆ ಮೈಸೂರು ಪಾಲಿಕೆ ಮೇಯರ್ ಸ್ಥಾನ ಬೇಕೆ ಬೇಕು. ಮೈಸೂರಿನ ಸಮಗ್ರ ಅಭಿವೃದ್ಧಿ ಆಗಬೇಕೆಂದ್ರೆ ಮೇಯರ್ ಸ್ಥಾನ ನಮಗೆ ಕೊಡಿ ಎಂದಿದ್ದಾರೆ ಪ್ರತಾಪ್ ಸಿಂಹ.

ನಾವು ಪಾಲಿಕೆಯಲ್ಲಿ ಎಲ್ಲರಿಗಿಂತ ಹೆಚ್ಚು ಸ್ಥಾನಗಳನ್ನ ಗೆದ್ದಿದ್ದೇವೆ. 22 ಸ್ಥಾನ ‌ಇರುವ ನಮಗೆ ಯಾರು ಬೇಕಾದ್ರು ಸಹಕಾರ ಕೊಡಬಹುದು. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಮೈಸೂರು ಪಾಲಿಕೆಯಲ್ಲು ಬಿಜೆಪಿ ನೇತೃತ್ವದ ಅಧಿಕಾರ ಇದ್ರೆ ಅಭಿವೃದ್ಧಿಗೆ ಪೂರಕವಾಗಲಿದೆ.  ನಮಗೆ ಒಮ್ಮೆಯೂ ಮೈಸೂರು ಪಾಲಿಕೆ ಮೇಯರ್ ಸ್ಥಾನ ಸಿಕ್ಕಿಲ್ಲ ಎಂದಿದ್ದಾರೆ.

'ಕೈ'ಗೆ ಗುಡ್​​ಬೈ: ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಬಿಜೆಪಿ ಶಾಸಕ ಸುಳಿವು

ಹಿಂದೆ ಜೆಡಿಎಸ್‌ ಜೊತೆ ಹೊಂದಾಣಿಕೆ ಆಗಿದ್ದಾಗ ನಾಲ್ಕು ಬಾರಿ ಉಪಮೇಯರ್ ಮಾತ್ರ ಆಗಿದ್ದೇವೆ. ಈ ಬಾರಿ ಯಾರ ಜೊತೆ ಹೊಂದಾಣಿಕೆ ಆದರೂ ಮೇಯರ್ ಸ್ಥಾನ ನಮಗೇ ಬೇಕು. ನಿಮಗೇಲ್ಲ ಸಾಕಷ್ಟು ಅವಕಾಶ ಕೊಟ್ಟಾಗಿದೆ. ನಮಗು ಒಮ್ಮೆ ಪಾಲಿಕೆಯಲ್ಲಿ ಮೇಯರ್ ಸ್ಥಾನ ನೀಡಿ ಅವಕಾಶ ಕೊಡಿ.
ಮೈಸೂರಿನಲ್ಲಿ ಸಂಸದ ಪ್ರತಾಪ್‌ಸಿಂಹ ಹೇಳಿಕೆ.