ಗೋಹತ್ಯೆ ನಿಷೇಧ ಕಾಯ್ದೆ ರದ್ದು ಬೇಡ; ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಗಳು
ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದು ಸೂಕ್ತ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಶ್ರೀಗಳು ಭಾನುವಾರ ಹೇಳಿದರು.
ಮದ್ದೂರು (ಜೂ.5): ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯುವುದು ಸೂಕ್ತ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಶ್ರೀಗಳು ಭಾನುವಾರ ಹೇಳಿದರು.
ಪಟ್ಟಣದ ಹೊಳೇ ಆಂಜನೇಯಸ್ವಾಮಿ ದೇಗುಲದ ಪುನರ್ ಪ್ರತಿಷ್ಠಾಪನಾ ಕಾರ್ಯ ಕೈಗೊಂಡ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಗೋಹತ್ಯೆ ನಿಷೇಧ ವಾಪಸ್ಸು ಪಡೆಯುವ ಬಗ್ಗೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗೋವುಗಳು ಭಾರತದ ಸಂಸ್ಕೃತಿಗೆ ತಮ್ಮದೇ ಆದ ಕೊಡುಗೆ ನೀಡಿವೆ. ಇಂತಹ ಗೋವುಗಳ ಹತ್ಯೆ ನಿಷೇಧ ಕಾಯಿದೆಯನ್ನು ಸರ್ಕಾರ ರದ್ದು ಪಡಿಸುವುದು ಸಮಂಜಸವಲ್ಲ, ಅದರ ಬದಲು ಕಾಯಿದೆಗಳನ್ನು ಮತ್ತಷ್ಟುಕಠಿಣ ಕಾರ್ಯಗಳು ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಬೇಕು. ಸರ್ಕಾರ ಯಾವುದೇ ಒಂದು ಕೋಮಿನ ಜನರನ್ನು ಓಲೈಸಲು ಗೋಹತ್ಯೆ ಕಾಯಿದೆ ನಿಷೇಧ ವಾಪಸ್ಸು ಪಡೆಯುವ ಬಗ್ಗೆ ಚಿಂತನೆ ನಡೆಸಿರುವುದು ಮಾಧ್ಯಮಗಳಿಂದ ತಿಳಿದುಬಂದಿದೆ. ಈ ಬಗ್ಗೆ ಸರ್ಕಾರ ಮತ್ತು ಸಂಬಂಧಪಟ್ಟಸಚಿವರು ಮರುಪರಿಶೀಲನೆ ನಡೆಸಬೇಕು ಎಂದರು.
ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ ಹಸುಗಳನ್ನು ಏಕೆ ಕಡಿಯಬಾರದು?: ಸಚಿವರ ಪ್ರಶ್ನೆ
ಗೋವಿನೊಂದಿಗೆ ಭಾರತೀಯರಾದ ನಾವು ಭಾವನಾತ್ಮಕ ಸಂಬಂಧಗಳನ್ನು ಹೊಂದಿದ್ದೇವೆ. ತಾಯಿ ಸ್ಥಾನದಲ್ಲಿ ಗೋವನ್ನು ಇಟ್ಟು ಪೂಜಿಸುತ್ತೇವೆ. ಆದರೆ, ಸಚಿವ ವೆಂಕಟೇಶ್ ಅವರು ಯಾರ ಓಲೈಕೆಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎನ್ನುವುದನ್ನು ನಾವು ಪ್ರಸ್ತಾಪಿಸುವುದಿಲ್ಲ. ಸಚಿವರ ಹೇಳಿಕೆಯಿಂದ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗೋವುಗಳ ಕಳ್ಳಸಾಗಾಣಿಕೆ, ಸಾಮೂಹಿಕ ಗೋಹತ್ಯೆ ಮಾಡುವ ಕಸಾಯಿಖಾನೆಗಳು ತಲೆಎತ್ತಲಿವೆ. ಈ ಬಗ್ಗೆ ಸರ್ಕಾರ ಮುಂದಿನ ಸಾಧಕ ಬಾದಕಗಳ ಜೊತೆಗೆ ಧಾರ್ಮಿಕ ಸಾಧು-ಸಂತರ ಸಲಹೆ ಪಡೆಯಬೇಕು ಎಂದು ಕಿವಿಮಾತು ಹೇಳಿದರು.
ಗೋಹತ್ಯೆ ಬಗ್ಗೆ ಮಾತಾಡುವ ಬಿಜೆಪಿಗರು ಹಸು ಸಾಕಿಲ್ಲ: ವಿನಯ್
ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿಯಾಗಬೇಕು. ದನ-ಕರು ಸಾಕುವವರು ಮತ್ತು ರೈತರನ್ನು ಕರೆಸಿ ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಮಾಜಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡುವ ಬಿಜೆಪಿಯವರು ಯಾರ ಮನೆಯಲ್ಲೂ ಹಸು ಸಾಕಿಲ್ಲ. ರಾಜ್ಯದಲ್ಲಿ ಅತೀ ಹೆಚ್ಚು ಜಾನುವಾರು ಸಾಕಿದವನು ನಾನು. ಗೋ ಹತ್ಯೆ ಬಗ್ಗೆ ಜಾಗೃತಿ ಮೂಡಿಸಿದ ಕಾರಣ ಕೃಷಿಯಲ್ಲೀಗ ಎತ್ತುಗಳ ಬಳಕೆ ಕಡಿಮೆಯಾಗಿದೆ. ಈಗೆಲ್ಲ ಯಂತ್ರಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ ಎಂದರು. ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಬೇಕು. ದನ, ಕರು ಸಾಕುವವರು, ರೈತರನ್ನು ಕರೆಸಿ ಅವರ ವಿಚಾರಗಳನ್ನು ತಿಳಿದುಕೊಳ್ಳಬೇಕು. ದೇಸಿ ತಳಿಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು ಎಂದರು.
ರಾಜ್ಯದಲ್ಲಿ ಮತ್ತೆ ಕೇಸರಿ ಕದನ: ಬಿಜೆಪಿ ಸರ್ಕಾರದ ಕಾಯ್ದೆಗಳ ವಿರುದ್ಧ ಕಾಂಗ್ರೆಸ್ ಸಮರ
ಸಚಿವ ಸ್ಥಾನ ಸಿಗದ್ದಕ್ಕೆ ವಿನಯ್ ಅಸಮಾಧಾನ?
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ನಮ್ಮ ಸಮಾಜದ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಕಾಂಗ್ರೆಸ್‌ನಲ್ಲಿ ಲಿಂಗಾಯತ ಸಮಾಜದಿಂದ ಒಟ್ಟು 37 ಮಂದಿ ಆಯ್ಕೆಯಾಗಿದ್ದಾರೆ. ಇದರಲ್ಲಿ 13 ಮಂದಿ ಪಂಚಮಸಾಲಿಗರು. ಸಮಾಜಕ್ಕಾಗಿ ಹೋರಾಟ ಮಾಡಿ ಪಕ್ಷ ಕಟ್ಟುವ ಕೆಲಸ ಮಾಡಿದವರನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿಲ್ಲ. ಸಮಾಜ ಸಹ ಮುಂದಿನ ದಿನಗಳಲ್ಲಿ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತದೆ. ಇದು ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದರು. ಜತೆಗೆ, ಮುಂದಿನ ದಿನಗಳಲ್ಲಿ ತಮಗೆ ಸೂಕ್ತ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ತಿಳಿಸಿದರು.