ಬೆಳಗಾವಿ(ಮಾ.14): ಮಹಾರಾಷ್ಟ್ರದ ಕೊಲ್ಲಾಪುರದ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕೊರೋನಾ ಸೋಂಕು ತಗಲಿರುವ ಶಂಕೆಯಿದ್ದು, 2 ದಿನಗಳಿಂದ ತೀವ್ರ ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿದ್ದಾರೆ. 

ಈ ಹಿನ್ನೆಲೆಯಲ್ಲಿ ತಮ್ಮದೇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ. ಸ್ವಯಂ ಪ್ರೇರಿತವಾಗಿ ತಮ್ಮ ಸ್ವಾಬ್‌ ಪ್ರಯೋಗಾಲಯಕ್ಕೆ ತಮ್ಮ ರಕ್ತದ ಮಾದರಿಯನ್ನು ತಪಾಸಣೆಗೆ ಕಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕೊರೋನಾ ಸೋಂಕಿತ ವೈದ್ಯರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. ಕೊರೋನಾ ವೈರಸ್‌ನಿಂದ ಇಡೀ ದೇಶವೇ ಭಯದ ವಾತಾರಣದಲ್ಲಿ ಕಾಲ ಕಳೆಯುತ್ತಿದೆ. ದಿನದಿಂದ ದಿನಕ್ಕೆ ಕೊರೋನಾ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದುವರೆಗೆ ಕೊರೋನಾ ವೈರಸ್‌ನಿಂದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ದೃಢಪಟ್ಟಿದೆ.