ಕೊರೋನಾ ಸೋಂಕಿಗೆ ವೈದ್ಯಾಧಿಕಾರಿ ಬಲಿ
ಮಹಾಮಾರಿ ಕೊರೋನಾ ಸೋಂಕಿಗೆ ಎಲ್ಲೆಡೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಾವು ನೋವಿನ ಸಂಖ್ಯೆಯೂ ಕೂಡ ಅತ್ಯಧಿಕ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದೇ ವೇಳೆ ವೈದ್ಯಾಧಿಕಾರಿಯೋರ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ.
ಚಾಮರಾಜನಗರ (ಏ.29): ಜಿಲ್ಲೆಯ ಕೊಳ್ಳೇಗಾಲ ಉಪ ವಿಭಾಗದ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗಣೇಶ್ ಕುಮಾರ್ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಸೋಂಕು ದೃಢವಾಗಿತ್ತು. ಮೈಸೂರಿನ ತಮ್ಮ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕೊರೋನಾ ಸಾವಿನ ಸಂಖ್ಯೆ 2 ಲಕ್ಷಕ್ಕೆ ಏರಿಕೆ; ಆದರೆ ಬೇರೆ ಕತೆ ಹೇಳುತ್ತಿದೆ ಸ್ಮಶಾನ!
ಆನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಮೇಟಗಳ್ಳಿ ಬಳಿಯ ಶಿವಯೋಗ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಸಂಜೆ ಸಾವನ್ನಪ್ಪಿದ್ದಾರೆ.
ಸದ್ಯ ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಸೋಂಕಿತರು ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಅಧಿಕವಾಗುತ್ತಿದ್ದು, ರಾಜ್ಯದಲ್ಲಿ ಸಂಕಷ್ಟದ ಸ್ಥಿತಿಯೇ ನಿರ್ಮಾಣವಾಗಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona