ಕೊರೋನಾ ಮಹಾಮಾರಿ : ತಜ್ಞ ವೈದ್ಯ ಸಾವು
ಕೊರೋನಾದಿಂದ ತಜ್ಞ ವೈದ್ಯರೋರ್ವರು ನಿಧನರಾಗಿದ್ದಾರೆ. ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೆ ವೈದ್ಯರು ಮೃತಪಟ್ಟಿದ್ದಾರೆ.
ಚನ್ನಪಟ್ಟಣ (ಏ.20): ಕೊರೋನಾದಿಂದಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಮಹೇಶ್ ಭಾನುವಾರ ಕೊನೆಯುಸಿರೆಳೆದಿದ್ದಾರೆ.
ಭಾನುವಾರ ಬೆಳಿಗ್ಗೆ ಹೃದಯಾಘಾತಕ್ಕೆ ಒಳಗಾದ ಇವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ಕಳುಹಿಸಲಾಯಿತು. ಆದರೆ ಚಿಕಿತ್ಸೆ ವಿಫಲಗೊಂಡು ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.
ಈ ಹಿಂದೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿ ಕೆಲಸ ನಿರ್ವಹಿಸುತ್ತಿದ್ದ ಡಾ.ಮಂಜುನಾಥ್ ಕೋವಿಡ್‌ನಿಂದಾಗಿ ಕೊನೆಯುಸಿ ರೆಳೆದಿದ್ದರು. ಅವರ ನಿಧನದಿಂದ ಖಾಲಿಯಾಗಿದ್ದ ಸ್ಥಾನಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಇದೀಗ ಇವರು ಸಹ ಕೊರೋನಾದಿಂದ ಸಾವಿಗೀಡಾಗಿರುವುದು ದುರ್ದೈವ.
ಬೀದರ್, ರಾಮನಗರದ 2 ಗ್ರಾಮ ಸ್ವಯಂ ಲಾಕ್‌ಡೌನ್! ...
ಸಚಿವರ ಸಂತಾಪ: ಕೋವಿಡ್‌ನಿಂದ ಸಾವಿಗೀಡಾಗಿರುವ ವೈದ್ಯ ಡಾ.ಮಹೇಶ್ ಅವರ ನಿಧನಕ್ಕೆ ಆರೋಗ್ಯ ಸಚಿವ ಸುಧಾಕರ್, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ತಮ್ಮ ಅಧಿಕೃತ ಟ್ವೀಟರ್ ಪೇಜ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಕೋವಿಡ್ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದ ವೈದ್ಯರ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ.