Karnataka Bandh :ಡಿ. 31ಕ್ಕೆ ಹೆದ್ದಾರಿಗಳು ಬಂದ್

  • ಬೆಳಗಾವಿಯಲ್ಲಿ ಎಂಇಎಸ್‌ ಪುಂಡಾಟಿಕೆ ಖಂಡಿಸಿ ಮತ್ತು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಬಂದ್
  • ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ 
Doddaballapura Kannada Organisations Support Karnataka bandh on December 31 SNR

 ದೊಡ್ಡಬಳ್ಳಾಪುರ (ಡಿ.28):  ಬೆಳಗಾವಿಯಲ್ಲಿ ಎಂಇಎಸ್‌ ( MES)  ಪುಂಡಾಟಿಕೆ ಖಂಡಿಸಿ ಮತ್ತು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಸಂಘಟನೆಗಳ (Pro Kannada Organisation)  ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ (Karnataka Bandh) ಬೆಂಬಲಿಸಿ ದೊಡ್ಡ ಬಳ್ಳಾಪುರದ ಕನ್ನಡ (Kannada) ಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ (Protest) ನಡೆಸಲು ತೀರ್ಮಾನಿಸಲಾಗಿದೆ.

ಇಲ್ಲಿನ ಕನ್ನಡ (Kannada)  ಜಾಗೃತ ಭವನದಲ್ಲಿ ಸೋಮವಾರ ಸಂಜೆ ನಡೆದ ಕನ್ನಡ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ಪಾಲ್ಗೊಂಡ ಹಲವು ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಮುಖಂಡರು ಕರ್ನಾಟಕ ಬಂದ್‌ ಕರೆ ಕುರಿತು ಚರ್ಚಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು.

ಈ ಕುರಿತು ಮಾಹಿತಿ ನೀಡಿದ ಡಾ.ರಾಜ್‌ ಕುಮಾರ್‌ (Dr Rajkumat)  ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಬಂದ್‌ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ಇರುವ ಕಾರಣ ದೊಡ್ಡಬಳ್ಳಾಪುರದಲ್ಲಿ  ಬಂದ್‌ (Bandh) ಆಚರಿಸುವುದಕ್ಕೆ ಬದಲಾಗಿ ಡಿ.ಕ್ರಾಸ್‌ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಲಾಗುವುದು. ಜತೆಗೆ ಮಹಾರಾಷ್ಟ್ರ (Maharashtra) ಸರ್ಕಾರ, ಎಂಇಎಸ್‌ (MES) ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಕನ್ನಡ (Kannada)  ಸಂಘಟನೆಗಳ ಬಂದ್‌ ಕರೆಯನ್ನು ಬೆಂಬಲಿಸಿ ದೊಡ್ಡ ಬಳ್ಳಾಪುರದಲ್ಲಿ ಗಂಭೀರ ಸ್ವರೂಪದ ಪ್ರಜ್ಞಾ ಪೂರ್ವಕ ಹೋರಾಟ ನಡೆಸಲಾಗುವುದು. ಅಂದು ನಡೆಯುವ ಪ್ರತಿಭಟನೆಯಲ್ಲಿ ಕನ್ನಡ ಪರ, ದಲಿತ, ರೈತ, ಮಹಿಳಾ, ಪ್ರಗತಿಪರ, ವಿದ್ಯಾರ್ಥಿ (Students) ಸಂಘಟನೆಗಳೂ ಸೇರಿದಂತೆ ಎಲ್ಲ ವರ್ತಕರು, ಸಾರ್ವಜನಿಕರು ಪಾಲ್ಗೊಂಡು ನಾಡಿನ ಅಸ್ಮಿತೆಯನ್ನು ಎತ್ತಿ ಹಿಡಿಯಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಾಜರಿದ್ದ ಮುಖಂಡರು, ಸರ್ಕಾರ ಈ ಕೂಡಲೇ ರಾಜ್ಯದಲ್ಲಿ ಎಂಇಎಸ್‌ (MES) ನಿಷೇಧ ಮಾಡುವ ಮೂಲಕ, ಕಿಡಿಗೇಡಿತನ ಪ್ರದರ್ಶಿಸಿರುವ ಪುಂಡರನ್ನು ಗಡೀಪಾರು ಮಾಡಬೇಕು. ಸಂಗೊಳ್ಳಿ ರಾಯಣ್ಣ, ಬಸವಣ್ಣರಂತಹ ನಾಡಿನ ಸಾಂಸ್ಕೃತಿಕ, ಐತಿಹಾಸಿಕ ನಾಯಕರಿಗೆ ಅಪಮಾನ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಉದಾಸೀನ ಮನೋಭಾವ ಬಿಟ್ಟು, ಕನ್ನಡಿಗರ ಒತ್ತಾಯಕ್ಕೆ ಮನ್ನಣೆ ನೀಡಬೇಕು ಎಂದು ಒತ್ತಾಯಿಸಿದರು.

ನಗರಸಭೆ ಮಾಜಿ ಅಧ್ಯಕ್ಷ ತ.ನ.ಪ್ರಭುದೇವ್‌, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯಕ್‌, ಮುಖಂಡರಾದ ಎಂ.ಜೆ.ರಾಜಶೇಖರ ಶೆಟ್ಟಿ, ವಿ.ಪರಮೇಶ್‌, ಡಿ.ಸಿ.ಚೌಡರಾಜು, ರಾಜು ಸಣ್ಣಕ್ಕಿ, ಜೆ.ಆರ್‌.ರಮೇಶ್‌, ಕೆ.ಕೆ.ವೆಂಕಟೇಶ್‌ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ಕರವೆ ಬೆಂಬಲ ಇಲ್ಲ :   ಎಂಇಎಸ್ (MES) ದಬ್ಬಾಳಿಕೆ, ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್‌ಗೆ (Karnataka Bandh) ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vattal Nagaraj) ಕರೆ ಕೊಟ್ಟಿದ್ದಾರೆ.  ಡಿಸೆಂಬರ್ 31ರಂದು ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಕರ್ನಾಟಕ ಬಂದ್ ಆಗಲಿದೆ. ತುರ್ತುಸೇವೆಗಳನ್ನು ಹೊರತುಪಡಿಸಿ ಎಲ್ಲ ಕಡೆ ಬಂದ್ ಆಗಬೇಕು. ಪಕ್ಷಾತೀತವಾಗಿ ಎಲ್ಲರೂ ಕರ್ನಾಟಕ ಬಂದ್ ಬೆಂಬಲಿಸಬೇಕು ಎಂದು ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ.

ಇದಕ್ಕೆ ಓಲಾ, ಉಬರ್,ಬೀದಿ, ರೈತ ಸಂಘಟನೆ ಸೇರಿದಂತೆ ಇತರೆ ಕನ್ನಡ ಪರ ಸಂಘಷನೆಗಳು (Kannada Organisations) ಬೆಂಬಲಿಸಿವೆ, ಆದ್ರೆ, ಕರ್ನಾಟಕ ರಕ್ಷಣಾ‌ ವೇದಿಕೆ(ಕರವೇ) (Karnataka Rakshana Vedike) ಕರ್ನಾಟಕ ಬಂದ್‌ಗೆ ಬೆಂಬಲ ಇಲ್ಲ ಎಂದು ಘೋಷಣೆ ಮಾಡಿದೆ.

ಹೌದು....ಡಿ.31ರ ಕರ್ನಾಟಕ ಬಂದ್‌ಗೆ ಕರ್ನಾಟಕ ರಕ್ಷಣಾ ವೇದಿಕೆ  ಬೆಂಬಲ ಇರುವುದಿಲ್ಲ ಎಂದು ಅಧ್ಯಕ್ಷ ಟಿ.ಎ ನಾರಾಯಣ ಗೌಡ (TA Narayana Gowda) ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ವಿವರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದು, ಅದು ಈ ಕೆಳಗಿನಂತಿದೆ.

ಡಿಸೆಂಬರ್ 31ರಂದು ಕೆಲವು ಕನ್ನಡ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇರುವುದಿಲ್ಲ. ಡಿಸೆಂಬರ್ 31 ರಂದು ಕರ್ನಾಟಕ ರಕ್ಷಣಾ‌ ವೇದಿಕೆಯ ಕಾರ್ಯಕರ್ತರು ಬಂದ್ ನಲ್ಲಿ ಪಾಲ್ಗೊಳ್ಳುವುದಿಲ್ಲ. ಎಂಇಎಸ್ ಮತ್ತು ಶಿವಸೇನೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ. ಇಂದು ಕೆಲವು ಸಂಘಟನೆಗಳು ನಡೆಸಿದ ಸಭೆಯಲ್ಲಿ ನಾನು ಪಾಲ್ಗೊಂಡಿರಲಿಲ್ಲ, ನನಗೆ ಆಹ್ವಾನವೂ ಇರಲಿಲ್ಲ. ವಾಟಾಳ್ ನಾಗರಾಜ್ ಅವರು ಹಿರಿಯರು, ಅವರ ಕುರಿತು ನನಗೆ ಅಪಾರವಾದ ಗೌರವವಿದೆ. ಆದರೆ ದಿಢೀರನೆ ಬಂದ್ ಗಳಿಗೆ ಕರೆ ನೀಡಿದರೆ ಅದನ್ನು ಬೆಂಬಲಿಸಲು ಸಾಧ್ಯವಿಲ್ಲ. 

Latest Videos
Follow Us:
Download App:
  • android
  • ios