ಸ್ವಕ್ಷೇತ್ರ ಬಿಟ್ಟು ಹೊರಗಿನವರಿಗೆ ಮಣೆ ಹಾಕಬೇಡಿ
ಯಾವುದೇ ಕಾರಣಕ್ಕೂ ಕ್ಷೇತ್ರದ ಹೊರಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡದೆ ಸ್ವಕ್ಷೇತ್ರದ ಯಾವುದೇ ಅಭ್ಯರ್ಥಿಯನ್ನು ಶಾಸಕರನ್ನಾಗಿ ಆಯ್ಕೆ ಮಾಡುವಂತೆ ಶಾಸಕ ಎನ್.ಎನ್.ಸುಬ್ಬಾರೆಡ್ಡಿ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದರು.
ಬಾಗೇಪಲ್ಲಿ : ಯಾವುದೇ ಕಾರಣಕ್ಕೂ ಕ್ಷೇತ್ರದ ಹೊರಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡದೆ ಸ್ವಕ್ಷೇತ್ರದ ಯಾವುದೇ ಅಭ್ಯರ್ಥಿಯನ್ನು ಶಾಸಕರನ್ನಾಗಿ ಆಯ್ಕೆ ಮಾಡುವಂತೆ ಶಾಸಕ ಎನ್.ಎನ್.ಸುಬ್ಬಾರೆಡ್ಡಿ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದರು.
ತಾಲೂಕಿನ ಮಿಟ್ಟೇಮರಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಟ್ಟಣದ ನ್ಯಾಷನಲ್ ಕಾಲೇಜ್‌ನಿಂದ ಮಿಟ್ಟೇಮರಿ ಗ್ರಾಮದವರೆಗಿನ 22 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಾನು ಸಾಕಷ್ಟುಅಭಿವೃದ್ಧಿ ಕೆಲಸಗಳ ಜೊತೆಗೆ ನಿರಂತರವಾಗಿ ಕ್ಷೇತ್ರದ ಬಡವರ ಸೇವೆ ಮಾಡುತ್ತಿದ್ದೇನೆ, ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಕ್ಷೇತ್ರದ ಜನತೆ ಯಾವುದೇ ರೀತಿಯ ತೀರ್ಮಾನಕ್ಕೂ ನಾನು ಬದ್ದನಾಗಿರುತ್ತೇನೆಂದರು.
ಚುನಾವಣೆ ಜ್ವರ ಕೆಲವರ ಮೈಮೇಲೆ ಬಂದಿರಬಹುದು ಆದರೆ ನಾನು ನನ್ನ ಅವಧಿಯಲ್ಲಿ ನಿರಂತರವಾಗಿ ಬಡವರ ಕಷ್ಟಸುಖದಲ್ಲಿ ಭಾಗಿಯಾಗಿದ್ದೇನೆ. ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಆದರೆ ಕ್ಷೇತ್ರದಲ್ಲಿ ಎಷ್ಟೇ ಅಭಿವೃದ್ಧಿ ಕೆಲಸಗಳು ನಡೆದಿದ್ದರೂ ಅಭಿವೃದ್ಧಿಯೇ ಆಗಿಲ್ಲ ಎಂದು ಬೊಬ್ಬೆಹೊಡೆಯುತ್ತಿದ್ದೀರಲ್ಲಾ, ನಿಮ್ಮನ್ನೇನಾದರೂ ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕೇನೋ ನನಗೆ ಗೊತ್ತಾಗುತ್ತಿಲ್ಲ, ಸಮಾಜ ಸೇವೆಯ ಹೆಸರಿನಲ್ಲಿ ಕೆಲವರು ಚುನಾವಣೆ ಜಾತ್ರೆಗೆ ಬಂದಿದ್ದಾರೆಯೇ ಹೊರತು ಅಭಿವೃದ್ಧಿಪಡಿಸಲು ಬಂದಿಲ್ಲ. ಜಾತ್ರೆ ಮುಗಿಯುತ್ತಿದ್ದಂತೆ ಕ್ಷೇತ್ರದಿಂದ ನಾಪತ್ತೆಯಾಗುತ್ತಾರೆ ಎಂದು ತಮ್ಮ ವಿರೋಧಿಗಳನ್ನು ತರಾಟೆಗೆ ತೆಗೆದುಕೊಂಡರು.
ನಂತರ ತಾಲೂಕಿನ ಮಿಟ್ಟೇಮರಿ ಹೋಬಳಿ ವ್ಯಾಪ್ತಿಯ ಗ್ರಾಮಗಳ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದರು.
ಈ ವೇಳೆ ಜಿಪಂ ಮಾಜಿ ಸದಸ್ಯ ನರಸಿಂಹಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಬಿ.ವಿ.ವೆಂಕಟರಮಣ, ಬಿ.ವಿ.ಮಂಜುನಾಥ್, ಕಾಮರೆಡ್ಡಿ, ಕೃಷ್ಣಮೂರ್ತಿ, ಮಹೇಶ್, ಡಿ.ಕೆ.ರಮೇಶ್, ರಘು, ನರಸರೆಡ್ಡಿ, ನಾರಾಯಣಸ್ವಾಮಿ, ಮಂಜು,ಶೇಖರ, ಬಾಬು, ರಫಿ, ಮಂಜುನಾಥ್, ಕರಿಪರೆಡ್ಡಿ ಉಪಸ್ಥಿತರಿದ್ದರು.
JDS ಟಿಕೆಟ್‌ಗೆ ಎಲ್ಲಿಲ್ಲದ ಬೇಡಿಕೆ
ಕೊಪ್ಪಳ (ಮಾ.19): ಕೊಪ್ಪಳ ವಿಧಾನಸಭಾ ಕ್ಷೇತ್ರ(Koppal assembly constituency)ದ ಟಿಕೆಟ್ ಕಾಂಗ್ರೆಸ್ ಪಕ್ಷದಿಂದ ಬಹುತೇಕ ಫೈನಲ್ ಆಗಿದ್ದು, ಇನ್ನೇನು ಘೋಷಣೆಯೊಂದೆ ಬಾಕಿ ಇದೆ. ಆದರೆ, ಬಿಜೆಪಿಯಲ್ಲಿ ಮಾತ್ರ ಭಾರಿ ಪೈಪೋಟಿ ನಡೆದಿದ್ದು, ಹೈಕಮಾಂಡ್ ಅಂಗಳದಲ್ಲಿ ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ. ಯಾರಿಗೆ ದಕ್ಕುತ್ತದೆ ಎನ್ನುವುದೇ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ.
ಈ ನಡುವೆ ಈಗಾಗಲೇ ಜೆಡಿಎಸ್(JDS) ತನ್ನ ಹುರಿಯಾಳು ಎಂದು ಮೊದಲ ಪಟ್ಟಿಯಲ್ಲಿಯೇ ವೀರೇಶ ಮಹಾಂತಯ್ಯನಮಠ(Viresh mahantaiah mutt) ಅವರ ಹೆಸರನ್ನು ಘೋಷಣೆ ಮಾಡಿದ್ದರೂ ಸಹ ಇನ್ನೂ ಫೈನಲ್ ಆಗಿಲ್ಲ. ಆದರೆ, ಈಗ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್‌ಗಿಂತಲೂ ಕೊಪ್ಪಳದಲ್ಲಿ ಜೆಡಿಎಸ್ ಟಿಕೆಟ್‌ಗಾಗಿಯೇ ಫೈಟ್ (JDS Ticket fight)ಜೋರಾಗಿರುವುದು ಗುಟ್ಟಾಗಿ ಉಳಿದಿಲ್ಲ.
ಮಂಡ್ಯದಲ್ಲಿ ಪುತ್ಥಳಿ ಪಾಲಿಟಿಕ್ಸ್, ಲಿಂಗಾಯತ ಮತ ಸೆಳೆಯಲು ಬಿಜೆಪಿ-ಜೆಡಿಎಸ್ ಸರ್ಕಸ್ ..!
ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಫೈಟ್ ಮಾಡುವವರು ಹಾಗೂ ಇತರರು ಈಗಾಗಲೇ ಜೆಡಿಎಸ್ ಟಿಕೆಟ್‌ಗಾಗಿ ಟಾವೆಲ್ ಹಾಕಿ ಬಕಪಕ್ಷಿಯಂತೆ ಕಾಯುತ್ತಾ ಕುಳಿತಿದ್ದಾರೆ. ಅನೇಕರು ಖುದ್ದು ದೇವೇಗೌಡ ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ತಮ್ಮ ತಮ್ಮ ಪ್ರಯತ್ನ ಮಾಡಿ ಬಂದಿರುವುದು ಚರ್ಚೆಯಾಗುತ್ತಿದೆ. ಈ ಪೈಪೋಟಿ ಜೋರಾಗುತ್ತಿದ್ದಂತೆ ಮೊದಲ ಪಟ್ಟಿಯಲ್ಲಿ ಕೊಪ್ಪಳ ಅಭ್ಯರ್ಥಿ ಘೋಷಣೆ ಮಾಡಿದ್ದ ಜೆಡಿಎಸ್ ನಂತರ ತಡೆ ಹಿಡಿದಿದೆ.
ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ(Raghavendra Hitnal) ಅವರು ಮತ್ತೆ ಅಖಾಡಕ್ಕೆ ಇಳಿಯುವುದು ಪಕ್ಕಾ ಆಗಿದೆ. ಆದರೆ, ಬಿಜೆಪಿಯಿಂದ ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದಕ್ಕಿಂತ ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವುದರ ಆಧಾರದ ಮೇಲೆಯೇ ಜೆಡಿಎಸ್ ಟಿಕೆಟ್ ನಿರ್ಧಾರವಾಗಲಿದೆ.