ನಾಮಕವಾಸ್ತೆ ಸ್ವಚ್ಛತೆ ಕಾರ್ಯಬೇಡ : ಶಾಸಕ ಎಲ್. ನಾಗೇಂದ್ರ

ಮಂಡಿಮೊಹಲ್ಲಾದ ಟಿ.ಬಿ. ಸ್ಪತ್ರೆ ಅರಳಿಕಟ್ಟೆ ಆವರಣದಲ್ಲಿ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸುವ ಮೂಲಕ ಮಾಜಿ ಶಾಸಕ ಎಲ್. ನಾಗೇಂದ್ರ ಅಭಿಯಾನಕ್ಕೆ ಚಾಲನೆ ನೀಡಿದರು,

Dont Neglect About Cleanliness Drive   : MLA L. Nagendra snr

  ಮೈಸೂರು  : ಮಂಡಿಮೊಹಲ್ಲಾದ ಟಿ.ಬಿ. ಆಸ್ಪತ್ರೆ ಅರಳಿಕಟ್ಟೆ ಆವರಣದಲ್ಲಿ 24ನೇ ವಾರ್ಡಿನ ಬಿಜೆಪಿ ಕಾರ್ಯಕರ್ತರ ಜೊತೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸುವ ಮೂಲಕ ಮಾಜಿ ಶಾಸಕ ಎಲ್. ನಾಗೇಂದ್ರ ಅಭಿಯಾನಕ್ಕೆ ಚಾಲನೆ ನೀಡಿದರು,

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ದೇಶದಾದ್ಯಂತ ಸಮುದಾಯ ಸಹಭಾಗಿತ್ವದ ಮೂಲಕ ಸ್ವಚ್ಛತಾ ಶ್ರಮದಾನ ಕೈಗೊಂಡು ಸ್ವಚ್ಛತೆ ಪ್ರತಿ ನಾಗರೀಕರ ಜವಾಬ್ದಾರಿ ಎಂಬ ಅಂಶದೊಂದಿಗೆ ಜನ ಜಾಗೃತಿ ಮೂಡಿಸಲು ಹಾಗೂ ತ್ಯಾಜ್ಯ ಮುಕ್ತ ಭಾರತವನ್ನು ನಿರ್ಮಿಸಲು ಅಕ್ಟೋಬರ್ 1 ರಂದು ಸ್ವಚ್ಛತಾ ದಿವಸದ ಹಿನ್ನಲೆಯಲ್ಲಿ ಸ್ವಚ್ಛತಾ ಹೀ ಸೇವಾ ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

ಈ ವೇಳೆ ಮಾತನಾಡಿದ ನಾಗೇಂದ್ರ ಅವರು, ಸ್ವಚ್ಚತಾ ಕಾರ್ಯಕ್ರಮಗಳು ನಾಮಕಾವಸ್ಥೆಗೆ ನಡೆಯದೇ ವಾರಕ್ಕೊಮ್ಮೆಯಾದರೂ ಕಡ್ಡಾಯವಾಗಿ ಈಡೇರಬೇಕು ಎಂದು ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ ಕೊಟ್ಟಂತ ಕರೆಗೆ ಪ್ರತಿಯೊಂದು ವಾರ್ಡಿನಲ್ಲೂ ಸ್ವಚ್ಛತಾ ಕಾರ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿರುವುದು ಸಂತೋಷವಾಗಿದೆ,

ಈ ಸ್ವಚ್ಛತಾ ಕಾರ್ಯಕ್ರಮಗಳನ್ನು ನಿರಂತರಗೊಳಿಸಬೇಕು, ಕೊನೆ ಪಕ್ಷ ವಾರಕ್ಕೊಮ್ಮೆಯಾದರೂ ಸ್ವಚ್ಛತಾ ಕಾರ್ಯ ಮಾಡಿದರೆ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕರೆಯ ಉದ್ದೇಶವು ಈಡೇರುತ್ತದೆ ಎಂದರು,

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಚಾಮರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಮೇಶ್, ವಾರ್ಡ್ ಅಧ್ಯಕ್ಷ ಕೇಬಲ್ ವಿಜಿ, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಹೇಮಾ ಸಂತೋಷ್, ಸೂರಜ್, ಸದಾಶಿವ್, ಅರುಣ್, ಬಾಲಾಜಿ, ಕಿರಣ್ ಮೊದಲಾದವರು ಇದ್ದರು.

ಬುಲೆಟ್ ವೇಗದಲ್ಲಿ ಸ್ವಚ್ಛತೆ

ಬೆಂಗಳೂರು (ಅ.2): ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ನಗರದ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು 'ಮಿರಾಕಲ್' 14 ನಿಮಿಷಗಳು' ಎಂಬ ಹೆಸರಿನಡಿ ಸ್ವಚ್ಛಗೊಳಿಸುವ ವ್ಯವಸ್ಥೆ ಆರಂಭಿಸಿದೆ.

ಭಾನುವಾರ ಮಧ್ಯಾಹ್ನ ಯಶವಂತಪುರ ರೈಲು ನಿಲ್ದಾಣ(Yaswantapur railway station)ಕ್ಕೆ ಆಗಮಿಸಿದ ಕಾಚಿಗುಡ ಯಶವಂತಪುರ ವಂದೇ ಭಾರತ್‌ ಎಕ್ಸ್‌ಪ್ರೆಸ್‌(Vande bharat express) ರೈಲನ್ನು ಕೇವಲ 13 ನಿಮಿಷಗಳಲ್ಲಿ ಸ್ವಚ್ಛಗೊ ಳಿಸಿ ಪ್ರಯಾಣಿಕರಿಗೆ ರೈಲು ಹತ್ತಲು ಸಿದ್ಧಗೊಳಿಸಲಾಯಿತು. ಮೊದಲೇ ಸಿದ್ಧಗೊಂಡಿದ್ದ 25ಕ್ಕೂ ಹೆಚ್ಚಿನ ಸ್ವಚ್ಛತಾ ಸಿಬ್ಬಂದಿ ರೈಲಿನಿಂದ ಪ್ರಯಾಣಿಕರು ಇಳಿದ ತಕ್ಷಣ ಸ್ವಚ್ಛಗೊಳಿಸಿ ಜನರಿಗೆ ಪ್ರಯಾಣಿಸಲು ಮಾಡಿಕೊಟ್ಟರು.

ರೈಲಲ್ಲಿ 'ನೀನ್​ ಚಂದಾನೆ' ಹಾಡಿಗೆ ಆ್ಯಂಕರ್​ ಅನುಶ್ರೀ ಸಕತ್​ ಎಂಜಾಯ್​: ಇಲ್ಲೂ ಮದ್ವೆ ವಿಷ್ಯ ಕೆದಕಿದ ಫ್ಯಾನ್ಸ್​!

ಈ ವೇಳೆ ಮಾತನಾಡಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್, ವಂದೇ ಭಾರತ್ ರೈಲುಗಳಲ್ಲಿ ಸ್ವಚ್ಛತಾ ಪ್ರಕ್ರಿ ಯೆಗೆ ಸಮಯ ಕಡಿಮೆ ಇರುವುದರಿಂದ ಪ್ರಯಾಣಿಕರು ಹತ್ತಿ ಇಳಿಸುವುದು ತ್ವರಿತವಾಗಿ ನಡೆಯಬೇಕು. ರೈಲ್ವೆ ಸಚಿವರ ಪರಿಕಲ್ಪನೆಯಂತೆ ಜಾರಿಗೆ ಬರುತ್ತಿದೆ. ಇದು ನಿರಂತರವಾಗಿರಲಿದೆ ಎಂದರು.

Latest Videos
Follow Us:
Download App:
  • android
  • ios