Asianet Suvarna News Asianet Suvarna News

ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಆತಂಕ ಬೇಡ: ಸಿಎಂ ಬಸವರಾಜ ಬೊಮ್ಮಾಯಿ

ಕೊವಿಡ್ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕೊವಿಡ್ ಬಗ್ಗೆ ಯಾರೂ ಗಾಬರಿಯಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Dont panic  about covid says CM Basavaraja Bommai at dharwaad rav
Author
First Published Dec 24, 2022, 2:14 PM IST

ಹುಬ್ಬಳ್ಳಿ (ಡಿ.24) : ಕೊವಿಡ್ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕೊವಿಡ್ ಬಗ್ಗೆ ಯಾರೂ ಗಾಬರಿಯಾಗಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ನಾಳೆ(ಭಾನುವಾರ) ಕೊವಿಡ್ ನಿಯಂತ್ರಣ ಕುರಿತಂತೆ ಕಂದಾಯ ಸಚಿವ, ಆರೋಗ್ಯ ಸಚಿವರು ಸಭೆ ನಡೆಸಲಿದ್ದು. ಹೊಸ ವರ್ಷಕ್ಕೆ ಹೊಸ ಗೈಡ್‌ಲೈನ್ ಹೊರಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುತ್ತಾರೆ. ಬಳಿಕ ಕೊವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದ್ದಾರೆ.  ಕೊವಿಡ್ ನಿಯಂತ್ರಣಕ್ಕೆ ಬೂಸ್ಟರ್ ಡೋಸ್ ಕೊಡುವುದು, ಶಿಬಿರಗಳನ್ನು ಮಾಡಿ, ಟೆಸ್ಟಿಂಗ್ ಹೆಚ್ಚಿಸಲು ಈಗಾಗಲೆ ಆರೋಗ್ಯ ಸಚಿವರಿಗೆ ಸನ್ನದ್ಧ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ. ಆಕ್ಸಿಜನ್, ಸೇರಿದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ಇರಲಿ. ಏರ್‌ಪೋರ್ಟ್‌ ಗಳಲ್ಲಿ ತಪಾಸಣೆ‌ ನಡೆಸಿ ಕಟ್ಟೆಚ್ಚರ ವಹಿಸಲಾಗುವದು ಎಂದು ತಿಳಿಸಿದರು.

ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಸದನದಲ್ಲಿ ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ:

ಸದನದಲ್ಲಿ ಉತ್ತರ ಕರ್ನಾಟಕದ ವಿಚಾರಗಳ ಚರ್ಚೆ ಆಗದ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಕನಿಷ್ಠ ಎರಡು ಮೂರು ದಿನ ಚರ್ಚೆ ಆಗಬೇಕು. ಸಭಾಪತಿಗಳ ಜೊತೆ ಇದೇ ವಿಚಾರ ಮಾತನಾಡಿದ್ದೇನೆ ಎಂದರು. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಅಗತ್ಯ ಪರಿಹಾರಕ್ರಮ ಕೈಗೊಳ್ಳಲಾಗುವುದು ಎಂದರು.

ಅವಧಿ ಪೂರ್ವ ಚುನಾವಣೆ ಇಲ್ಲ: 

ಅವಧಿ ಪೂರ್ವ ಚುನಾವಣೆ ಹೋಗುವ ಮಾತೇ ಇಲ್ಲ. ಕಾಂಗ್ರೆಸ್ ಹತಾಸೆ ಹಾಗೂ ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಅವರ ಕಾರ್ಯಕರ್ತರನ್ನು ಸನ್ನದ್ಧ ಮಾಡಲು ಈ‌ ರೀತಿಯ ಹೇಳಿಕೆ‌ ನೀಡುತ್ತಿದ್ದಾರೆ. ಯಾವುದೇ ಸಮಯ ಚುನಾವಣೆ ನಡೆದರೂ ಮತ್ತೆ ಬಿಜೆಪಿ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಭಯ ನಾಯಕರ ಜತೆ ಸಿಎಂ ಚರ್ಚೆ: 

ಜನವರಿ 12 ರಂದು ಪ್ರಧಾನಿ ನರೇಂದ್ರ ಮೋದಿ ಧಾರವಾಡಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಭಾಪತಿ ಹೊರಟ್ಟಿ ಅವರೊಂದಿಗೆ ಸಭೆ ನಡೆಸಿದರು.

ಹುಬ್ಬಳ್ಳಿ ಆದರ್ಶನಗರದಲ್ಲಿರುವ ಸಿಎಂ ನಿವಾಸದಲ್ಲಿ ಸಭೆ ನಡೆಯಿತು. ಉಭಯ ನಾಯಕರ ಜೊತೆ ಸಿಎಂ ಉಪಹಾರ ಕೂಟ ಏರ್ಪಡಿಸಿದ್ದರು. ಸಭೆಯಲ್ಲಿ ಐಐಟಿ ಹಾಗೂ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲಿರುವ ನರೇಂದ್ರ ಮೋದಿ. ಮೋದಿ ಕಾರ್ಯಕ್ರದ ಸಿದ್ದತೆ ಬಗ್ಗೆ ಚರ್ಚೆ ನಡೆಸಲಾಯಿತು.

ಸೋಮವಾರ ಸಂಜೆ ಸಿಎಂ ದೆಹಲಿಗೆ:

ಸೋಮವಾರ ಸಂಜೆ ದೆಹಲಿಗೆ ಹೋಗಲಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿಗ್ಗಾವಿ ಪಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾನು ದೆಹಲಿಗೆ ಹೋಗ್ತಿರೋದು ನಿಜ. ಅಲ್ಲಿ ಏನು ಚರ್ಚೆ ನಡೆಯುತ್ತೋ ಅದನ್ನು ಬಳಿಕವೇ ಹೇಳುವೆ ಎಂದರು. ಅನೇಕ ಅಭಿವೃದ್ಧಿ ಕಾರ್ಯಕ್ರಮಗಳು, ಕೆಲವು ಯೋಜನೆಗಳು ಸರಿಯಾಗಿ ನಡೆಯುತ್ತಿವೆ. ದೆಹಲಿ ಭೇಟಿ ವೇಳೆ ಬಿಜೆಪಿ ಘಟಕದ ಅಧ್ಯಕ್ಷರ ಜೊತೆ ಚರ್ಚೆ ಮಾಡುತ್ತೇನೆ. ಖಂಡಿತವಾಗಿ ಈ ವೇಳೆ ರಾಜಕೀಯ ಚರ್ಚೆ ಆಗುತ್ತೆ ಚುನಾವಣೆ ತಯಾರಿ ಕುರಿತು ಕೂಡಾ ಚರ್ಚೆ ಮಾಡಲಿದ್ದೇವೆ ಎಂದರು.

ಇದೇ ವೇಳೆ ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು,  ಒಕ್ಕಲಿಗ ಹಾಗೂ ಪಂಚಮಸಾಲಿ ಸಮುದಾಯಗಳಿಗೆ ಮೀಸಲಾತಿ ನೀಡುವ ಬಗ್ಗೆ ಈಗಾಗಲೇ ಎಲ್ಲಾ ಮಟ್ಟದಲ್ಲಿ ಚರ್ಚೆ ಆಗಿದೆ ಜಯಪ್ರಕಾಶ್ ಹೆಗಡೆ ವರದಿ ಕುರಿತು ಚರ್ಚಿಸುತ್ತೇನೆ ಎಂದರು.

ಓಪನ್‌ ಡೋರ್‌ ಸಾಹಿತ್ಯ ಸಮ್ಮೇಳನ:

86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊರೋನಾ ಭೀತಿ ವಿಚಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ಓಪನ್ ಡೋರ್  ನಡೆಯುವುದರಿಮದ  ಮುಂಜಾಗೃತಾ ಕ್ರಮ ತಗೊಳ್ಳಲು ಸೂಚಿಸಿದ್ದೇನೆ ಮಾಸ್ಕ್ , ಸ್ಯಾನಿಟೈಸರ್, ಅಂತರ ಕಾಪಾಡಲು ಮಾರ್ಗಸೂಚಿಗಳನ್ನು ಪಾಲನೆ‌ ಮಾಡಲಾಗುತ್ತದೆ ಎಂದರು.

 

ಶೀಘ್ರ ವರದಿ ಸಲ್ಲಿಕೆಗೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ: ಸಿಎಂ ಬೊಮ್ಮಾಯಿ

ಫ್ರೆಬ್ರವರಿಯಲ್ಲಿ ಬಜೆಟ್ ಮಂಡನೆ:

ರಾಜ್ಯ ಬಜೆಟ್ ಮಂಡನೆ ವಿಚಾರ ಪ್ರಸ್ತಾಪಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಹಣಕಾಸು  ಇಲಾಖೆ ಜೊತೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಲಾಗಿದೆ. ಎಲ್ಲಾ ಇಲಾಖೆಯವರ ಜೊತೆಗೂ ಚರ್ಚೆ ಮಾಡಲಿದ್ದೇನೆ ಬಜೆಟ್‌ಗೆ ಸಂಬಂಧಿಸಿ ಎಲ್ಲಾ ಸಿದ್ದತೆಗಳನ್ನು  ಮುಂದಿನ ಜನೆವರಿ ತಿಂಗಳಿಂದಲೇ ಶುರು ಮಾಡಲಿದ್ದೇನೆ ಎಂದು ತಿಳಿಸಿದರು.

Follow Us:
Download App:
  • android
  • ios