ಕಲ್ಯಾಣ ಕರ್ನಾಟಕ ಪ್ರಗತಿಗೆ ಹತ್ತಾರು ಯೋಜನೆ; ಸಚಿವ ಆನಂದ್ ಸಿಂಗ್
- ಕಲ್ಯಾಣ ಕರ್ನಾಟಕ ಪ್ರಗತಿಗೆ ಹತ್ತಾರು ಯೋಜನೆ
- ಕ.ಕ. ಉತ್ಸವ ಪ್ರಯುಕ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಸಚಿವ ಆನಂದ್ ಸಿಂಗ್
ಕೊಪ್ಪಳ (ಸೆ.18) : ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹೇಳಿದರು. ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ 75ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಲಬುರಗಿಯಲ್ಲಿ ಅತಿದೊಡ್ಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ: ಯಶವಂತ ವಿ. ಗುರುಕರ್
ಭಾರತ ಸ್ವಾತಂತ್ರ್ಯ ಪಡೆದು 1947ರ ಆಗಸ್ಟ್ 15ಕ್ಕೆ ತನ್ನ ಸಂಭ್ರಮದ ಹಬ್ಬ ಆಚರಿಸಿದರೆ, ಬ್ರಿಟಿಷರ ಕುಮ್ಮಕ್ಕಿನಿಂದ ಹೈದರಾಬಾದ್ ಪ್ರಾಂತ್ಯವನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಂಡು ಆಡಳಿತ ನಡೆಸುತ್ತಿದ್ದ ನಿಜಾಮರು ಭಾರತ ಒಕ್ಕೂಟಕ್ಕೆ ಸೇರಲು ಕಾಶಿಂ ರಜ್ವಿ ಕುಮ್ಮಕ್ಕಿನಿಂದ ನಿರಾಕರಿಸಿದರು. ಹೀಗಾಗಿ ನಿಜಾಮರ ಆಳ್ವಿಕೆಗೆ ಒಳಪಟ್ಟಈ ಭಾಗದ ಜಿಲ್ಲೆಗಳ ಜನ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಳ್ಳಲಾಗಲಿಲ್ಲ. ರಾಷ್ಟ್ರದ ಸಾರ್ವಭೌಮತ್ವದ ಹಿತದೃಷ್ಟಿಯಿಂದ ಉಕ್ಕಿನ ಮನುಷ್ಯರೆಂದೇ ಹೆಸರಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟತನದಿಂದ ಕೈಗೊಂಡ ಸೈನಿಕ ಕಾರ್ಯಾಚರಣೆಯಲ್ಲಿ, ನಿಜಾಮನು ಶರಣಾಗಿ ಭಾರತದ ಒಕ್ಕೂಟಕ್ಕೆ ಸೇರಿದ್ದರಿಂದ 1948ರ ಸೆ. 17ರಂದು ಈ ಭಾಗಗಳು ರಾಜ್ಯದ ಇತರ ಭಾಗಗಳಂತೆ ಸ್ವತಂತ್ರವಾಗಿ ಉಸಿರಾಡಲು ಸಾಧ್ಯವಾಯಿತು ಎಂದರು.
ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು, ಜಿಪಂ ಸಿಇಒ ಬಿ. ¶ೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಶೀಘ್ರ ರಜತ ಸಂಭ್ರಮ ಆಚರಣೆ
ಕೊಪ್ಪಳ ಜಿಲ್ಲೆಯಾಗಿ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆ ವಿಶೇಷ ರಜತ ಸಂಭ್ರಮ ಕಾರ್ಯಕ್ರಮವನ್ನು ಶೀಘ್ರದಲ್ಲಿಯೇ ಆಚರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಹೇಳಿದರು. 'ಕ-ಕ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ವಿಶೇಷ ಅನುದಾನ ಹಂಚಿಕೆ ಮಾಡಲಿ'
ಸುದ್ದಿಗಾರರೊಂದಿಗೆ ಮಾತನಾಡಿ, ಆಚರಣೆ ಮಾಡುವ ಉದ್ದೇಶ ಇದ್ದರೂ ಪ್ರವಾಹ ಮತ್ತು ಅತಿಯಾದ ಮಳೆಯಿಂದಾದ ಹಾನಿಯಿಂದ ಆಚರಿಸಲು ಆಗಿಲ್ಲ. ಈ ಕುರಿತು ಶೀಘ್ರದಲ್ಲಿಯೇ ಪೂರ್ವಭಾವಿ ಸಭೆ ನಡೆಸಿ, ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದರು.